HomeKarnatakaಸ್ಟಿಂಗ್ ಆಪರೇಷನ್ ಪ್ರಕರಣ: ಹಿರಿಯ ಪತ್ರಕರ್ತನನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು: ತೀವ್ರ ವಿಚಾರಣೆ

ಸ್ಟಿಂಗ್ ಆಪರೇಷನ್ ಪ್ರಕರಣ: ಹಿರಿಯ ಪತ್ರಕರ್ತನನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು: ತೀವ್ರ ವಿಚಾರಣೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು, ಇತ್ತೀಚೆಗೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಇದರ ಬೆನ್ನಲ್ಲೇ ಇದೀಗ ಓರ್ವ ಹಿರಿಯ ಪತ್ರಕರ್ತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಚಾರಣೆ ಬಳಿಕ ಪತ್ರಕರ್ತನಿಗೆ ನೋಟಿಸ್ ಕೊಟ್ಟು ಕಳುಹಿಸಲಾಗಿದ್ದು, ನೋಟಿಸ್ ಬೆನ್ನಲ್ಲೇ ಬಂಧನ ಭೀತಿ ಎದುರಾಗಿದ್ದರಿಂದ ನಿರೀಕ್ಷಣಾ ಜಾಮೀನಿಗೆ ಪತ್ರಕರ್ತ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣ ಸಂಬಂಧ ಹಲವು ಆಯಾಮಗಳಲ್ಲಿ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ನಡುವೆ ಈ ಪ್ರಕರಣದ ಸಿಸಿಬಿ ಪೊಲೀಸರು ಹಿರಿಯ ಪತ್ರಕರ್ತರು ಸೇರಿದಂತೆ ಖಾಸಗಿ ಚಾನೆಲ್ ಮಾಲೀಕರು ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಜನರ ವಿಚಾರಣೆ ನಡೆಸಿದ್ದಾರೆ.

ಈ ಸ್ಟಿಂಗ್ ಆಪರೇಷನ್ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ವಿರೋಧ ಪಕ್ಷದ ನಾಯಕರು ಆಗ್ರಹಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತಾದ ಸ್ಟಿಂಗ್ ಆಪರೇಷನ್ ವಿಡಿಯೋ ವಿಚಾರವಾಗಿ ನ್ಯಾಯಾಲಯದಿಂದ ತಡೆಯಾಜ್ಞೆ ತರಲಾಗಿದ್ದು, ವರ್ಚಸ್ಸಿಗೆ ಧಕ್ಕೆ ತರುವವರ ವಿರುದ್ಧ ಕ್ರಮಕ್ಕೆ ದೂರು ನೀಡಲಾಗಿದೆ.

ಕೆ.ಪಿ.ಎಸ್.ಸಿ ಬಳಿಕ ಇದೀಗ ಕೆ.ಎಸ್.ಒ.ಯು ಸರದಿ: ಪದವಿ, ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಮೂಹಿಕ ನಕಲು ಮಾಡಲು ಅವಕಾಶ: ಪರೀಕ್ಷೆ ಬಳಿಕ ಹಣ ವಸೂಲಿ

ಶಿವಮೊಗ್ಗ: ಕೆ.ಪಿ.ಎಸ್‌.ಸಿ (KPSC) ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷಾ ಅಕ್ರಮ ತನಿಖೆ ಹಂತದಲ್ಲಿರುವಾಗಲೇ ಮತ್ತೊಂದು ಪರೀಕ್ಷಾ ಅಕ್ರಮ ಬೆಳಕಿಗೆ ಬಾಂದಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕಚೇರಿಯಲ್ಲಿ ಪರೀಕ್ಷೆಯಲ್ಲಿ ಮಾಸ್ ಕಾಪಿಗೆ ಅವಕಾಶ ನೀಡಲಾಗಿದೆ.

ಶಿವಮೊಗ್ಗ ನಗರದ ಆಲ್ಕೋಳ ಸರ್ಕಲ್ ಸಮೀಪವಿರುವ ಕೆ.ಎಸ್‌.ಓ.ಯು ಪ್ರಾದೇಶಿಕ ಕಚೇರಿಯ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಕಳೆದ ಕೆಲವು ದಿನಗಳಿಂದ ಕರ್ನಾಟಕ ರಾಜ್ಯ ಮುಕ್ತ ವಿವಿಯ ಪರೀಕ್ಷೆಗಳು ನಡೆಯುತ್ತಿದೆ. ಈ ವೇಳೆ ಸಾಮೂಹಿಕ ನಕಲು ಮಾಡಲು ಅವಕಾಶ ನೀಡಲಾಗಿದೆ. ಅಕ್ಟೋಬರ್ 7ರಿಂದ ಆರಂಭವಾಗಿರುವ ಮುಕ್ತ ವಿವಿಯ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳು ನವೆಂಬರ್ 20ರವರೆಗೆ ನಡೆಯಲಿವೆ.

ಹಣ ಕೊಟ್ಟರೇ ಮೊಬೈಲ್, ಪುಸ್ತಕ ನೋಡಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.ಕೆ.ಎಸ್‌.ಓ.ಯು ಶಿವಮೊಗ್ಗ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ನಿರ್ದೇಶಕ ಬಿ.ಎಂ. ಸ್ವಾಮಿ ನೇತೃತ್ವದಲ್ಲಿ ಹಣ ಪಡೆದು ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಸಾಮೂಹಿಕ ನಕಲು ಮಾಡಿಸುತ್ತಿರುವುದು ಬೆಳಕಿಗೆ ಬಂದಿದೆ.

ಹಣ ಕೊಟ್ಟು ಪರೀಕ್ಷೆಯನ್ನು ಹೇಗೆ ಬೇಕಾದರೂ ಬರೆಯಬಹುದು, ಹಣ ಕೊಟ್ಟವರಿಗೆ ಪುಸ್ತಕ ಮತ್ತು ಮೊಬೈಲ್ ಇಟ್ಟುಕೊಂಡೇ ಪರೀಕ್ಷೆ ಬರೆಯಲು ಮುಕ್ತ ಅವಕಾಶ ಕಲ್ಪಿಸಲಾಗಿದೆ. ಹಣ ನೀಡಿದವರಿಗೆ ಎರಡನೇ ಫ್ಲೋರ್‌ನಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಹಣ ನೀಡದವರಿಗೆ ಮೊದಲ ಫ್ಲೋರ್‌ನಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿತ್ತಿದೆ.

ವಿದ್ಯಾರ್ಥಿಗಳು ಪುಸ್ತಕ ಹಾಗೂ ಮೊಬೈಲ್ ನೋಡಿ ಪರೀಕ್ಷೆ ಬರೆಯುತ್ತಿರುವ ಸಾಮೂಹಿಕ ನಕಲು ಮಾಡುತ್ತಿರುವ ವಿಡಿಯೋಗಳು ವೈರಲ್ ಆಗಿವೆ. ಸಿಬ್ಬಂದಿಯನ್ನು ಮುಂದೆ ಬಿಟ್ಟು ಹಣ ಸಂಗ್ರಹಿಸಿ, ಮುಕ್ತವಾಗಿ ಪರೀಕ್ಷೆಯಲ್ಲಿ ನಕಲು ಮಾಡಲು ಅವಕಾಶ ಮಾಡಿಕೊಡಲಾಗುತ್ತಿದೆ.

ಪರೀಕ್ಷೆ ಆರಂಭವಾದ ಅರ್ಧ ಗಂಟೆ ಬಳಿಕ ವಿದ್ಯಾರ್ಥಿಗಳ ಲೆಕ್ಕ ಮಾಡಲು ಪ್ರಾದೇಶಿಕ ನಿರ್ದೇಶಕ ಸ್ವಾಮಿ ಅವರು ಬರುತ್ತಿದ್ದರು. ಅದೇ ಸಮಯದಲ್ಲಿ ಪರೀಕ್ಷಾ ಕೇಂದ್ರದ ಪ್ರತ್ಯೇಕ ಕೊಠಡಿಯಲ್ಲಿ ಖುದ್ದಾಗಿ ನಿಂತು ಅವರು ಸಾಮೂಹಿಕ ನಕಲು ಮಾಡಿಸುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಬಳಿಕ ಎಸ್ ಡಿಸಿಗಳಾದ ವಿನಯಾ ಕೆ.ಜೆ., ನಿಂಗಾ ನಾಯ್ಕ್, ಅಟೆಂಡರ್ ಯೋಗೇಶ್ ಗೌಡ ಹಾಗೂ ಡಾಟಾ ಎಂಟ್ರಿ ಆಪರೇಟರ್ ಹರೀಶ್ ಅವರನ್ನು ಮುಂದೆ ಬಿಟ್ಟು ಹಣ ವಸೂಲಿ ಮಾಡಿಸಲಾಗುತ್ತದೆ.

ಒಂದು ವಿಷಯಕ್ಕೆ ಒಂದು ಸಾವಿರ ರೂ.ನಂತೆ ಓರ್ವ ವಿದ್ಯಾರ್ಥಿಯಿಂದ ಹಣ ವಸೂಲಿ ಮಾಡುತ್ತಿರುವ ಆರೋಪವಿದ್ದು, ಪ್ರತಿನಿತ್ಯ 70 ರಿಂದ 100 ವಿದ್ಯಾರ್ಥಿಗಳ ಬಳಿ ಪರೀಕ್ಷೆ ಮುಗಿದ ಬಳಿಕ ಹಣ ವಸೂಲಿ ಮಾಡಲಾಗುತ್ತಿದೆ. ಪರೀಕ್ಷೆ ಬರೆದ ನಂತರ ಅಲ್ಲೇ ವಿದ್ಯಾರ್ಥಿಗಳಿಂದ ಫೋನ್ ಪೇ ಅಥವಾ ಗೂಗಲ್ ಪೇ ಮಾಡಿಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular