ಬೆಂಗಳೂರು-“ಕಾಂಗ್ರೆಸ್ ಪಕ್ಷ ದೇಶಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆ ಕೊಟ್ಟಿರುವುದರಿಂದಲೇ ಇಂದು ಪ್ರಧಾನಮಂತ್ರಿಗಳು ಆ ಸ್ಥಾನದಲ್ಲಿ ಕೂತಿದ್ದಾರೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.
ಶಿವಕುಮಾರ್ ಪ್ರತಿಕ್ರಿಯೆ
ತಾಜ್ ವೆಸ್ಟ್ ಎಂಡ್ ನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.
ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮೇಲೆತ್ತಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂಬ ಟೀಕೆ ಬಗ್ಗೆ ಕೇಳಿದಾಗ, “ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಇತಿಹಾಸವಿದೆ. ಕಾಂಗ್ರೆಸ್ ಇಲ್ಲವಾಗಿದ್ದರೆ ಈ ದೇಶ ಪ್ರಜಾಪ್ರಭುತ್ವ ವ್ಯವಸ್ಥೆ ಪಡೆಯಲು ಸಾಧ್ಯವಾಗುತ್ತಿರಲಿಲ್ಲ. ಈ ವಿಚಾರ ಪ್ರಧಾನಮಂತ್ರಿಗಳಿಗೂ ಗೊತ್ತು. ನಾವು ನಮ್ಮ ಮೂಲ ಮರೆಯಬಾರದು. ನಮ್ಮ ಮೂಲವನ್ನು ಮರೆತರೆ ನಾವು ಯಶಸ್ವಿಯಾಗುವುದಿಲ್ಲ” ಎಂದು ತಿಳಿಸಿದರು.
ರಾಹುಲ್ ಗಾಂಧಿ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರ
ರಾಹುಲ್ ಗಾಂಧಿ ಅವರು ಪದೇ ಪದೆ ವಿದೇಶಕ್ಕೆ ಹೋಗಿ ಬರುತ್ತಿರುವುದರ ಬಗ್ಗೆ ಬಿಜೆಪಿ ಎತ್ತಿರುವ ಪ್ರಶ್ನೆಗಳ ಬಗ್ಗೆ ಕೇಳಿದಾಗ, “ರಾಹುಲ್ ಗಾಂಧಿ ಅವರು ವಿರೋಧ ಪಕ್ಷದ ನಾಯಕರು. ಅನೇಕ ವಿದೇಶದ ನಾಯಕರು, ವಿಶ್ವವಿದ್ಯಾಲಯಗಳು ರಾಹುಲ್ ಗಾಂಧಿ ಅವರಿಗೆ ಆಮಂತ್ರಣ ನೀಡುತ್ತಾರೆ. ರಾಹುಲ್ ಗಾಂಧಿ ಅವರು ಇಡೀ ವಿಶ್ವ ಎದುರು ನೋಡುತ್ತಿರುವ ನಾಯಕ” ಎಂದು ತಿಳಿಸಿದರು.

