HomeKarnatakaBREAKING: ಕರ್ನಾಟಕದಲ್ಲಿ 15,000 ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ; ಸರ್ಕಾರದಿಂದ ಮಹತ್ವದ...

BREAKING: ಕರ್ನಾಟಕದಲ್ಲಿ 15,000 ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ; ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು: ಕರ್ನಾಟಕದಲ್ಲಿ ಸರ್ಕಾರಿ ಶಿಕ್ಷಕರಾಗುವ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. 2026-27ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 15,000 ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಆನ್‌ಲೈನ್ ಅರ್ಜಿ ಸಲ್ಲಿಸುವ ಗಡುವನ್ನು ವಿಸ್ತರಿಸಲಾಗಿದೆ. ಈ ಹಿಂದೆ ಅಕ್ಟೋಬರ್ 26 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ಇದೀಗ ಅಭ್ಯರ್ಥಿಗಳು ನವೆಂಬರ್ 16ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಸರ್ಕಾರಿ ಶಿಕ್ಷಕರ ಹುದ್ದೆ ಪಡೆಯಲು ಸಿದ್ಧತೆ ನಡೆಸುತ್ತಿರುವ ಅನೇಕ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಹೆಚ್ಚುವರಿ ಸಮಯ ಸಿಕ್ಕಂತಾಗಿದೆ. ವಿವಿಧ ಕಾರಣಗಳಿಂದಾಗಿ ಇನ್ನೂ ಅರ್ಜಿ ಸಲ್ಲಿಸದಿರುವ ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲು ಕರ್ನಾಟಕ ಸರ್ಕಾರ ಅಕ್ಟೋಬರ್ 23ರಂದು ಆದೇಶ ಹೊರಡಿಸಿದೆ. ಸರ್ಕಾರದ ಉಪ ಕಾರ್ಯದರ್ಶಿ (ಆಡಳಿತ) ಬಿ.ಎನ್. ಆನಂದ್ ಅವರು ಈ ಆದೇಶಕ್ಕೆ ಸಹಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಭ್ಯರ್ಥಿಗಳು ಗಮನಿಸಬೇಕಾದ ಅಂಶಗಳು

·         ನೇಮಕಾತಿ: 15,000 ಸರ್ಕಾರಿ ಶಿಕ್ಷಕರ ಹುದ್ದೆಗಳು

·         ಹುದ್ದೆಗಳ ವಿಭಾಗ: ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು

·         ಹಿಂದಿನ ಕೊನೆಯ ದಿನಾಂಕ: ಅಕ್ಟೋಬರ್ 26, 2026

·         ಹೊಸ ಕೊನೆಯ ದಿನಾಂಕ: ನವೆಂಬರ್ 16, 2026

·         ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್

ಕೊನೆಯ ಕ್ಷಣದವರೆಗೆ ಕಾಯಬೇಡಿ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಕೊನೆಯ ದಿನದವರೆಗೆ ಕಾಯದೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಉತ್ತಮ. ಅರ್ಜಿ ಸಲ್ಲಿಸುವ ಮೊದಲು ತಮ್ಮ ಅರ್ಹತೆ, ಅಗತ್ಯ ದಾಖಲೆಗಳು ಹಾಗೂ ನೇಮಕಾತಿಗೆ ಸಂಬಂಧಿಸಿದ ನಿಯಮಗಳನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬೇಕು.

ಸೂಚನೆ: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆಯ ಕುರಿತು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವ ಲಿಂಕ್, ಅರ್ಹತೆ ಮತ್ತು ಇತರ ವಿವರಗಳಿಗಾಗಿ ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ನೇಮಕಾತಿ ಪ್ರಕಟಣೆಯನ್ನು ಪರಿಶೀಲಿಸಿ.

ಹೊಳೆಹೊನ್ನೂರಿನಲ್ಲಿ ‘ಕೃತಕ ಬುದ್ಧಿಮತ್ತೆ ಮತ್ತು ಸಮಾಜ’ ಕುರಿತು ಅಂತರರಾಷ್ಟ್ರೀಯ ಸಮ್ಮೇಳನ

ಶಿವಮೊಗ್ಗ : ಹೊಳೆಹೊನ್ನೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ (ಐಕ್ಯುಎಸಿ) ವತಿಯಿಂದ “ಕೃತಕ ಬುದ್ಧಿಮತ್ತೆ ಮತ್ತು ಸಮಾಜ: ಅವಕಾಶಗಳು, ಸವಾಲುಗಳು ಮತ್ತು ಜವಾಬ್ದಾರಿಯುತ ನಾವೀನ್ಯತೆ” ಎಂಬ ವಿಷಯದ ಕುರಿತು ಹೊಳೆಹೊನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಕ್ಟೋಬರ್ 28 ರಂದು ಒಂದು ದಿನದ ಅಂತರರಾಷ್ಟ್ರೀಯ ಬಹುಶಿಸ್ತೀಯ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ.

ಸ್ವಯಂ ಹಣಕಾಸು ಮಾದರಿಯಲ್ಲಿ ನಡೆಯಲಿರುವ ಈ ಸಮ್ಮೇಳನದಲ್ಲಿ ದೇಶ-ವಿದೇಶಗಳ ವಿದ್ವಾಂಸರು, ಪ್ರಾಧ್ಯಾಪಕರು, ಸಂಶೋಧನಾ ವಿದ್ಯಾರ್ಥಿಗಳು ಮತ್ತು ಉದ್ಯಮ ತಜ್ಞರು ಭಾಗವಹಿಸಲಿದ್ದಾರೆ.

ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಶಾರದ ಪೂೂರ್ಯ ನಾಯ್ಕ್ ಕಾರ್ಯಕ್ರಮ ಉದ್ಘಾಟಿಸುವರು.

ಡಾ. ಪ್ರವೀಣ್ ಜಿ ಸಪ್ತರ್ಷಿ , ಸಂದರ್ಶಕ ಪ್ರಾಧ್ಯಾಪಕರು, ಸಾಲ್ಸ್‌ಬರಿ ವಿಶ್ವವಿದ್ಯಾಲಯ, ಅಮೆರಿಕ ಇವರು ಮುಖ್ಯ ಭಾಷಣ ಮಾಡುವರು.

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ

ಕುಲಪತಿಗಳಾದ ಡಾ. ಎಂ. ವಿ. ಧನಂಜಯ , ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕ ಪ್ರೊ. ಕೇಶವ ಹೆಚ್, ಕುವೆಂಪು ವಿಶ್ವವಿದ್ಯಾಲಯದ ಪ್ರಾಧ್ಯಾಪಕ

ಡಾ. ಬಸವರಾಜ್ ಎನ್. ಜಗದಲೆ ಮತ್ತು ಯುಎಸ್ಎ, ಕಮ್ವಾಲ್ಟ್ ಹಿರಿಯ ಆರ್ಕಿಟೆಕ್ಟ್ ಪ್ರಶಾಂತ್ ಜಯರಾಂ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಹೊಳೆಹೊನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ

ಡಾ. ಪ್ರತಿಭಾ ಕೆ. ಆರ್. ಅಧ್ಯಕ್ಷತೆ ವಹಿಸುವರು.

ತಾಂತ್ರಿಕ ಗೋಷ್ಠಿಗಳು ಮತ್ತು ಸಂಪನ್ಮೂಲ ವ್ಯಕ್ತಿಗಳು:

ಪ್ರೊ. ಎ. ಜಿ. ಅಮರಸಿಂಘೆ, ಹಿರಿಯ ಉಪನ್ಯಾಸಕರು, ಕೆಲನಿಯಾ ವಿಶ್ವವಿದ್ಯಾಲಯ, ಶ್ರೀಲಂಕಾ ಇವರು “ಕೃತಕ ಬುದ್ಧಿಮತ್ತೆ ಮತ್ತು ಸಮಾಜದ ಭವಿಷ್ಯ” ಕುರಿತು ಮಾತನಾಡಲಿದ್ದಾರೆ.

ಡಾ. ಶಿಲುಜಾಸ್ ಎಂ, ಸಹ ಪ್ರಾಧ್ಯಾಪಕರು, ಫಾರೂಕ್ ಕಾಲೇಜು, ಕೇರಳ ಇವರು “ಕೃತಕ ಬುದ್ಧಿಮತ್ತೆ ಮತ್ತು ಸಾಮಾಜಿಕ ಜವಾಬ್ದಾರಿ” ಕುರಿತು ಉಪನ್ಯಾಸ ನೀಡಲಿದ್ದಾರೆ. ಇದಲ್ಲದೆ, ಪ್ರತಿನಿಧಿಗಳಿಂದ ಪ್ರಬಂಧ ಮಂಡನೆ ಹಾಗೂ ಸಮಾರೋಪ ಸಮಾರಂಭ ಜರುಗಲಿದೆ.

 

📄 Official Documents / Supporting Documents

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular