HomeKarnatakaಕೆಪಿಎಸ್‌ಸಿ ಹಗರಣ: ತುಮಕೂರು ವಿವಿ ಸಿಂಡಿಕೇಟ್‌ ಸದಸ್ಯ ಸ್ಥಾನದಿಂದ ಬಸವರಾಜ್ ಕನ್ನಾಳೆ ವಜಾ

ಕೆಪಿಎಸ್‌ಸಿ ಹಗರಣ: ತುಮಕೂರು ವಿವಿ ಸಿಂಡಿಕೇಟ್‌ ಸದಸ್ಯ ಸ್ಥಾನದಿಂದ ಬಸವರಾಜ್ ಕನ್ನಾಳೆ ವಜಾ

ತುಮಕೂರು: ಕೆಪಿಎಸ್‌ಸಿ ಹಗರಣದ ಕಿಂಗ್ ಪಿನ್ ಬಸವರಾಜ್ ಕನ್ನಾಳೆಗೆ ಬಿಗ್ ಶಾಕ್ ಎದುರಾಗಿದೆ. ಪ್ರಕರಣದ ಬೆನ್ನಲ್ಲೇ ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಸ್ಥಾನದಿಂದ ಕನ್ನಾಳೆಯನ್ನು ವಜಾಗೊಳಿಸಲಾಗಿದೆ.

ರಾಜ್ಯಪಾಲರ ನಿರ್ದೇಶನದಂತೆ ಸಿಂಡಿಕೇಟ್ ಸದಸ್ಯತ್ವದಿಂದ ಕನ್ನಾಳೆಯನ್ನು ವಜಾಗೊಳಿಸಲಾಗಿದೆ. ಈ ಸಂಬಂಧ ರಾಜ್ಯಪಾಲರ ವಿಶೇಷ ಕಾರ್ಯದರ್ಶಿಯಿಂದ ತುಮಕೂರು ವಿ.ವಿ ಕುಲಪತಿಗೆ ಪತ್ರ ರವಾನಿಸಲಾಗಿದೆ. ಬಸವರಾಜ್ ಕನ್ನಾಳೆಯನ್ನ ತುಮಕೂರು ವಿವಿ ಸಿಂಡಿಕೇಟ್ ಸದಸ್ಯ ಸ್ಥಾನದಿಂದ ವಜಾ ಮಾಡಿದೆ ಎಂದು ಪತ್ರದಲ್ಲಿ ಉಲ್ಲೇಖವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಸವರಾಜ್ ಕನ್ನಾಳೆ ಜಾಗಕ್ಕೆ ಬೆಂಗಳೂರು ಮೂಲದ ಕೆ.ಬಿ.ಸಂದೀಪ್ ಎಂಬವರಿಗೆ ಸಿಂಡಿಕೇಟ್ ಸದಸ್ಯ ಸ್ಥಾನ ಕೊಡಲಾಗಿದೆ. ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ಹೊಸ ಸಿಂಡಿಕೇಟ್ ಸದಸ್ಯ ಕೆ.ಬಿ.ಸಂದೀಪ್ ಅವರನ್ನು ತುಮಕೂರು ವಿವಿ ನೇಮಕ ಮಾಡಿಕೊಳ್ಳಲಿದೆ.

ಬಸವರಾಜ್ ಕನ್ನಾಳೆ ತುಮಕೂರು ವಿವಿಯಲ್ಲಿ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯನಾಗಿದ್ದ. ಕೆಪಿಎಸ್‌ಸಿ ಹಗರಣದಲ್ಲಿ ಆತನ ಹೆಸರು ಕೇಳಿ ಬಂದ ಬಳಿಕ, ವಜಾಗೊಳಿಸುವಂತೆ ಎಬಿವಿಪಿಯಿಂದ ಪ್ರತಿಭಟನೆ ನಡೆದಿತ್ತು. ಈ ಸಂಬಂಧ ಕನ್ನಾಳೆಗೆ ನೋಟಿಸ್ ಕೊಡುವಂತೆ ತುಮಕೂರು ವಿವಿಗೆ ರಾಜ್ಯಪಾಲರು ಪತ್ರ ಬರೆದಿದ್ದರು.

ರಾಜ್ಯಪಾಲರ ಸೂಚನೆ ಮೇರೆಗೆ ಬಸವರಾಜ್ ಕನ್ನಾಳೆಗೆ ತುಮಕೂರು ವಿವಿ ಎರಡು ಬಾರಿ ನೋಟಿಸ್ ನೀಡಿತ್ತು. ಎರಡು ನೋಟಿಸ್‌ಗೂ ಕನ್ನಾಳೆ ಉತ್ತರ ನೀಡಿರಲಿಲ್ಲ. ಇದೀಗ ಸಿಂಡಿಕೇಟ್ ಸದಸ್ಯ ಸ್ಥಾನದಿಂದ ಅವರನ್ನು ವಜಾಗೊಳಿಸಲಾಗಿದೆ.

ಕೆಪಿಎಸ್‌ಸಿ ಹಗರಣ: ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸಿಎಂ ಡಿ.ಕೆ.ಶಿವಕುಮಾರ್ ಅನುಮತಿ

ಬೆಂಗಳೂರು: ಕೆಪಿಎಸ್‌ಸಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅನುಮತಿ ನೀಡಿದ್ದಾರೆ.

ರಾಜ್ಯಾದ್ಯಂತ ಭಾರಿ ಸಂಚಲನ ಸೃಷ್ಟಿಸಿದ್ದ ಕೆಪಿಎಸ್‌ಸಿ ನಡೆಸಿದ್ದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಹಾಗೂ ಉತ್ತರವನ್ನು ಸೋರಿಕೆ ಮಾಡಿದ ಆರೋಪದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸಿಎಂ ಡಿ.ಕೆ.ಶಿವಕುಮಾರ್ ಅನುಮತಿ ನೀಡಿದ್ದಾರೆ.

ಪ್ರಕರಣದ ಕಿಂಗ್ ಪಿನ್‌ ಬಸವರಾಜ್ ಕನ್ನಾಳೆಗೆ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರು ಪ್ರಶ್ನೆ ಪತ್ರಿಕೆ ನೀಡಿದ್ದರು. 1.50 ಕೋಟಿ ಲಂಚವನ್ನು ಮುಂಗಡವಾಗಿ ಸಂಗ್ರಹಿಸಿದ್ದ ಕನ್ನಾಳೆ. ಈ ಹಣದ ಪೈಕಿ 1.30 ಕೋಟಿ ಹಣವನ್ನು ಜ್ಞಾನೇಂದ್ರ ಕುಮಾರ್ ಗೆ ಪಾವತಿಸಿರುವುದು ತನಿಖೆಯಲ್ಲಿ ಬಯಲಾಗಿದೆ. ಈ ಬೃಹತ್ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ.

ಕೆಪಿಎಸ್ ಸಿ ಹಗರಣದಲ್ಲಿ ಈಗಾಗಲೇ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಗಂಗ್ವಾರ್‌ ಅವರನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ ಅವರು ತಮ್ಮ ಹುದ್ದೆಯಿಂದ ಅಮಾನತುಗೊಂಡಿದ್ದರು.

ಜ್ಞಾನೇಂದ್ರ ಕುಮಾರ್‌ ಗಂಗ್ವಾರ್‌ ಅವರನ್ನು ಇಡಿ ತನಿಖೆಗೆ ಒಳಪಡಿಸಿತ್ತು. ಅವರ 14 ದಿನಗಳ ಕಸ್ಟಡಿ ಅವಧಿ ಮುಕ್ತಾಯಗೊಂಡ ಬಳಿಕ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶರಾದ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯವು ಜ್ಞಾನೇಂದ್ರ ಕುಮಾರ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿತ್ತು.

ಪಶು ವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆಯನ್ನು ಸೋರಿಕೆ ಮಾಡಿದ ಗಂಭೀರ ಆರೋಪ ಜ್ಞಾನೇಂದ್ರ ಕುಮಾರ್ ಮೇಲಿದೆ. ಜ್ಞಾನೇಂದ್ರ ಕುಮಾರ್ ಹಾಗೂ ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸದಸ್ಯ ಮತ್ತು ಬಸವರಾಜ್‌ ಕನ್ನಾಳೆ ಪಿತೂರಿ ನಡೆಸಿ ಸೋರಿಕೆ ಮಾಡಿದ್ದಾರೆ ಎಂಬುವುದು ತನಿಖೆಯಿಂದ ತಿಳಿದುಬಂದಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮೂಲಕ ಆಕಾಂಕ್ಷಿಗಳಿಂದ ಲಕ್ಷಾಂತರ ರೂಪಾಯಿ ಸಂಗ್ರಹಿಸಿದ್ದಾರೆ ಎಂದು ಇ ಡಿ ತನಿಖೆಯಿಂದ ಬಹಿರಂಗಗೊಂಡಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿ ಕನ್ನಾಳೆಯು 1.50 ಕೋಟಿ ರೂ. ಲಂಚವನ್ನು ಮುಂಗಡವಾಗಿ ಸಂಗ್ರಹಿಸಿದ್ದನು. ಈ ಹಣದ ಈ ಪೈಕಿ 1.30 ಕೋಟಿಯನ್ನು ಗಂಗ್ವಾರ್‌ಗೆ ನಗದಿನ ರೂಪದಲ್ಲಿ ಪಾವತಿಸಲಾಗಿದೆ. ಈ ಹಣದಲ್ಲಿ ಕೆಪಿಎಸ್‌ಸಿ ಮಾಜಿ ಅಧಿಕಾರಿಗೆ 23 ಲಕ್ಷದಲ್ಲಿ ಚಿನ್ನಾಭರಣ ಖರೀದಿಸಲಾಗಿದೆ ಎಂದು ಇ ಡಿ ಆರೋಪಿಸಿದೆ.

ಜನವರಿ 9ರಂದು ಪಶು ವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಗೆ ಸಂಬಂಧಿಸಿದ ಪ್ರಶ್ನೆ ಪತ್ರಿಕೆಗಳನ್ನು ಹಾಗೂ ಉತ್ತರವನ್ನು ಗಂಗ್ವಾರ್‌ ಅವರು ಜನವರಿ 7ರಂದು ಪ್ರಕರಣದ ಕಿಂಗ್ ಪಿನ್ ಕನ್ನಾಳೆಗೆ ಎಚ್‌ಪಿ ಪೆನ್‌ಡ್ರೈವ್‌ ಮೂಲಕ ನೀಡಿದ್ದರು ಎಂಬುದು ಆರೋಪವಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular