HomeLatest Newsಇಶಾನ್ ಕಿಶನ್ ಗಾಯದ ಕುರಿತು ಬಿಸಿಬಿಸಿ ಅಪ್ಡೇಟ್ ನೀಡಿದ ಬಿಸಿಸಿಐ: ಪ್ಲೇಯಿಂಗ್ 11ನಲ್ಲಿ ಯಾರಿಗೆ ಚಾನ್ಸ್?

ಇಶಾನ್ ಕಿಶನ್ ಗಾಯದ ಕುರಿತು ಬಿಸಿಬಿಸಿ ಅಪ್ಡೇಟ್ ನೀಡಿದ ಬಿಸಿಸಿಐ: ಪ್ಲೇಯಿಂಗ್ 11ನಲ್ಲಿ ಯಾರಿಗೆ ಚಾನ್ಸ್?

ನ್ಯೂಜಿಲೆಂಡ್ ವಿರುದ್ಧ ವೆಲ್ಲಿಂಗ್ಟನ್‌ನಲ್ಲಿ ಮಂಗಳವಾರ ನಡೆಯಲಿರುವ ಮೂರನೇ ಟಿ೨೦ ಪಂದ್ಯದಿಂದ ಭಾರತದ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಹೊರಬಿದ್ದಿದ್ದಾರೆ. ತೊಡೆಯ ಸಣ್ಣ ಸ್ನಾಯು ಸೆಳೆತದ ಸಮಸ್ಯೆಯಿಂದ ಬಳಲುತ್ತಿರುವ ಅವರು, ಪಂದ್ಯಾವಳಿಯ ಮೊದಲ ಪಂದ್ಯದಲ್ಲೇ ಗಾಯಗೊಂಡಿದ್ದರು. ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ಈ ನಿರ್ಣಾಯಕ ಪಂದ್ಯದಿಂದ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಗಾಯಗೊಂಡಿರುವ ಇಶಾನ್ ಕಿಶನ್ ಬದಲಿಗೆ ಕುಮಾರ್ ಕುಶಾಗ್ರ ಅವರನ್ನು ಕವರ್ ಬ್ಯಾಟರ್ ಆಗಿ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಸರಣಿಯ ಆರಂಭಿಕ ಪಂದ್ಯದಲ್ಲಿ ಗಾಯಗೊಂಡಿದ್ದ ಇಶಾನ್ ಕಿಶನ್, ಎರಡನೇ ಟಿ೨೦ ಪಂದ್ಯಕ್ಕೂ ಲಭ್ಯವಿರಲಿಲ್ಲ. ವಿಶ್ವಕಪ್ ಗೆಲುವಿನ ನಂತರ ಭಾರತೀಯ ತಂಡಕ್ಕೆ ಪುನರಾಗಮನ ಮಾಡಿದ್ದ ಈ ಎಡಗೈ ಬ್ಯಾಟರ್ ತಂಡದ ಪ್ರಮುಖ ಅಸ್ತ್ರವಾಗಿದ್ದರು. ಕಿಶನ್ ಗೈರುಹಾಜರಿಯಿಂದಾಗಿ ಕ್ರೈಸ್ಟ್‌ಚರ್ಚ್‌ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಹದಿನೈದು ವರ್ಷದ ವೈಭವ್ ಸೂರ್ಯವಂಶಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಕೇವಲ ನಾಲ್ಕು ರನ್ ಗಳಿಸಲಷ್ಟೇ ಶಕ್ತರಾಗಿದ್ದರು.

ಮುಂದಿನ ಪಂದ್ಯದಲ್ಲೂ ವೈಭವ್ ಅವರಿಗೆ ಅವಕಾಶ ನೀಡಲಾಗುತ್ತದೆಯೇ ಅಥವಾ ಶಿವಂ ದುಬೆ ತಂಡದಲ್ಲಿ ಜಾಗ ಪಡೆಯಲಿದ್ದಾರೆಯೇ ಎಂಬುದು ಕುತೂಹಲ ಮೂಡಿಸಿದೆ. ಪ್ರಸ್ತುತ ಭಾರತ ತಂಡವು ಸರಣಿಯಲ್ಲಿ ಮುನ್ನಡೆ ಸಾಧಿಸಿದ್ದು, ಪಂದ್ಯದ ಗೆಲುವಿನ ಸಂಭ್ರಮಾಚರಣೆಯಲ್ಲಿ ಗಾಯದ ನಡುವೆಯೂ ಇಶಾನ್ ಕಿಶನ್ ಅವರು ಸಂಜು ಸ್ಯಾಮ್ಸನ್ ಅವರನ್ನು ಎತ್ತಿ ಸಂಭ್ರಮಿಸಿದ ಕ್ಷಣಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular