HomeEntertainmentಕರ್ನಾಟಕದಲ್ಲಿ ‘ರಾಮಾಯಣ’ ರಿಲೀಸ್ ಜವಾಬ್ದಾರಿ ವಹಿಸಿಕೊಂಡ ಯಶ್: ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಮೂಲಕ ಬಿಗ್ ಪ್ಲಾನ್!

ಕರ್ನಾಟಕದಲ್ಲಿ ‘ರಾಮಾಯಣ’ ರಿಲೀಸ್ ಜವಾಬ್ದಾರಿ ವಹಿಸಿಕೊಂಡ ಯಶ್: ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಮೂಲಕ ಬಿಗ್ ಪ್ಲಾನ್!

ಭಾರತೀಯ ಚಿತ್ರರಂಗದ ಅತ್ಯಂತ ನಿರೀಕ್ಷಿತ ಮಹಾಕಾವ್ಯ ಆಧಾರಿತ ‘ರಾಮಾಯಣ: ರೈಸ್ ಆಫ್ ಎ ಲೆಜೆಂಡ್’ ಸಿನಿಮಾದ ಜವಾಬ್ದಾರಿಯನ್ನು ರಾಕಿಂಗ್ ಸ್ಟಾರ್ ಯಶ್ ಮತ್ತಷ್ಟು ವಿಸ್ತರಿಸಿದ್ದಾರೆ. ಈ ಬಿಗ್ ಬಜೆಟ್ ಸಿನಿಮಾದಲ್ಲಿ ಅಭಿನಯಿಸುವುದರ ಜೊತೆಗೆ ಸಹ-ನಿರ್ಮಾಪಕರಾಗಿಯೂ ಕೆಲಸ ಮಾಡುತ್ತಿರುವ ಯಶ್, ಇದೀಗ ತಮ್ಮ ತಾಯ್ನಾಡು ಕರ್ನಾಟಕದಲ್ಲಿ ಈ ಚಿತ್ರದ ವಿತರಣೆಯ ದೊಡ್ಡ ಹೊಣೆಯನ್ನು ವಹಿಸಿಕೊಂಡಿದ್ದಾರೆ.

ತಮ್ಮ ಸ್ವಂತ ನಿರ್ಮಾಣ ಸಂಸ್ಥೆಯಾದ ‘ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್’ ಬ್ಯಾನರ್ ಅಡಿಯಲ್ಲಿ ಯಶ್ ಈ ಚಿತ್ರವನ್ನು ರಾಜ್ಯದಾದ್ಯಂತ ಅತ್ಯಂತ ಬೃಹತ್ ಪ್ರಮಾಣದಲ್ಲಿ ಚಿತ್ರಮಂದಿರಗಳಿಗೆ ತರಲಿದ್ದಾರೆ. ‘ಟಾಕ್ಸಿಕ್’ ಸಿನಿಮಾದ ನಂತರ ವಿತರಣಾ ರಂಗದಲ್ಲಿ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಸಂಸ್ಥೆ ಕೈಗೆತ್ತಿಕೊಂಡಿರುವ ಎರಡನೇ ಪ್ರಮುಖ ಸಿನಿಮಾ ಇದಾಗಿದೆ. ನಿತೀಶ್ ತಿವಾರಿ ನಿರ್ದೇಶನದಲ್ಲಿ ಹಾಗೂ ನಮಿತ್ ಮಲ್ಹೋತ್ರಾ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಈ ದೃಶ್ಯಕಾವ್ಯವು ದೇಶಾದ್ಯಂತ ಭಾರೀ ಕುತೂಹಲ ಮೂಡಿಸಿದೆ.

ಈ ಅದ್ಭುತ ಪೌರಾಣಿಕ ಚಿತ್ರದಲ್ಲಿ ಶ್ರೀರಾಮನಾಗಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ ಹಾಗೂ ಹನುಮಂತನ ಪಾತ್ರದಲ್ಲಿ ಸನ್ನಿ ಡಿಯೋಲ್ ಅಭಿನಯಿಸಿದ್ದಾರೆ. ಇನ್ನು ಭಾರತೀಯ ಮತ್ತು ಜಾಗತಿಕ ಮಟ್ಟದ ಸಂಗೀತ ದಿಗ್ಗಜರಾದ ಎ. ಆರ್. ರಹಮಾನ್ ಹಾಗೂ ಹಾನ್ಸ್ ಝಿಮ್ಮರ್ ಈ ಚಿತ್ರಕ್ಕೆ ಹಿನ್ನೆಲೆ ಸಂಗೀತ ಒದಗಿಸುತ್ತಿರುವುದು ಸಿನಿಮಾದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಯಶ್ ವಿತರಣೆಗೆ ಇಳಿದಿರುವುದರಿಂದ ಕರ್ನಾಟಕದಲ್ಲಿ ರಾಮಾಯಣ ಸಿನಿಮಾಗೆ ಅಭೂತಪೂರ್ವ ಬಿಡುಗಡೆ ಸಿಗುವುದು ಖಚಿತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular