HomeKarnatakaಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆ: ಪೊಲೀಸ್, ಸಿಐಡಿ, ಸಿಬಿಐ ಸೇರಿದಂತೆ 15 ಅಧಿಕಾರಿಗಳಿಗೆ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆ: ಪೊಲೀಸ್, ಸಿಐಡಿ, ಸಿಬಿಐ ಸೇರಿದಂತೆ 15 ಅಧಿಕಾರಿಗಳಿಗೆ ನೋಟಿಸ್ ಜಾರಿ

ಮಂಗಳೂರು: ಸುಪ್ರೀಂ ಕೋರ್ಟ್ ಆದೇಶದಂತೆ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ಚುರುಕುಗೊಂಡಿದೆ. ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಮುಖ ಬೆಳವಣಿಗೆಯೊಂದರಲ್ಲಿ, ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ 15ಕ್ಕೂ ಹೆಚ್ಚು ಅಧಿಕಾರಿ ಮತ್ತು ಸಿಬ್ಬಂದಿಗೆ ನೋಟಿಸ್ ಜಾರಿ ಮಾಡಿದೆ.

2012ರಲ್ಲಿ ನಡೆದ ಈ ಘಟನೆಯ ತನಿಖೆಯನ್ನು ಆರಂಭದಿಂದ ಅಂದರೆ ಬೆಳ್ತಂಗಡಿ ಪೊಲೀಸ್ ಠಾಣೆಯಿಂದ ಸಿಐಡಿ ಮತ್ತು ಸಿಬಿಐ ಹಂತದವರೆಗೂ ನಡೆಸಿದ ಎಲ್ಲ ಅಧಿಕಾರಿಗಳಿಗೆ ಸಮನ್ಸ್ ನೀಡಲಾಗಿದೆ. ಎಸ್‌ಐಟಿ ಈ ಅಧಿಕಾರಿಗಳನ್ನು ಸಿಆರ್‌ಪಿಸಿ ಸೆಕ್ಷನ್ 160ರ ಅಡಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಶುಕ್ರವಾರವೇ ವಿಚಾರಣೆಗೆ ಹಾಜರಾಗಲು ಆದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣದ ಮರು ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹಿಂದೆ ಸಂಗ್ರಹಿಸಲಾದ ದಾಖಲೆಗಳು ಮತ್ತು ಮಾಹಿತಿಗಳ ಆಧಾರದ ಮೇಲೆ, ಹಿಂದಿನ ತನಿಖೆಯಲ್ಲಿ ಭಾಗಿಯಾಗಿದ್ದವರ ವಿಚಾರಣೆ

ನಡೆಸಿ ಹೆಚ್ಚಿನ ಮಾಹಿತಿ ಕಲೆಹಾಕಲು ಮುಂದಾಗಿದೆ.

14 ವರ್ಷಗಳ ಹಿಂದೆ ಧರ್ಮಸ್ಥಳದ 17 ವರ್ಷದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದ್ದು, ಕರ್ನಾಟಕ ಸರ್ಕಾರ ಹೊಸದಾಗಿ ವಿಶೇಷ ತನಿಖಾ ತಂಡವನ್ನು (SIT) ರಚಿಸಿದೆ. ಹೊಸ ತನಿಖಾ ತಂಡಕ್ಕೆ 3 ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ವರದಿ ನೀಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಪ್ರಕರಣದ ತನಿಖೆಗಾಗಿ ಕರ್ನಾಟಕ ಸರ್ಕಾರ ಐವರು ಸದಸ್ಯರ ವಿಶೇಷ ತನಿಖಾ ತಂಡವನ್ನು ರಚಿಸಿದ್ದು, ಐಜಿಪಿ ಎನ್. ಶಶಿಕುಮಾರ್ ಅವರು ಈ ಎಸ್‌ಐಟಿ ಮುಖ್ಯಸ್ಥರಾಗಿದ್ದು, ತನಿಖೆ ಚುರುಕುಗೊಂಡಿದೆ.

ಈ ನಡುವೆ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ದಳ (ಎಸ್ಐಟಿ) ಮುಖ್ಯಸ್ಥರಾಗಿರುವ ಐಪಿಎಸ್ ಅಧಿಕಾರಿ ಶಶಿಕುಮಾರ್ ಅವರನ್ನು ಬದಲಿಸುವಂತೆ ‘ಬುರುಡೆ ಗ್ಯಾಂಗ್’ ಒತ್ತಾಯಿಸಿದೆ. ಮಂಗಳೂರಿನಲ್ಲಿ ಶಶಿಕುಮಾರ್ ಅವರು ಹಿಂದೆ ಕರ್ತವ್ಯ ನಿರ್ವಹಿಸಿದ್ದನ್ನು ಕಾರಣವಾಗಿಟ್ಟುಕೊಂಡು, ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ಕಷ್ಟವಾಗಬಹುದು ಎಂದು ಆ ಸಂಘಟನೆ ವಾದಿಸಿದೆ.

ಬುರುಡೆ ಗ್ಯಾಂಗ್ ಈ ಕುರಿತು ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದ್ದು, ಅದಕ್ಕೂ ಮುನ್ನ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಈ ಮನವಿಯ ನಂತರ, ಶಶಿಕುಮಾರ್ ಅವರ ಸ್ಥಾನಕ್ಕೆ ಚೇತನ್ ಸಿಂಗ್ ರಾಥೋಡ್ ಅವರನ್ನು ನೇಮಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular