HomeKarnatakaಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಏಕಾಏಕಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿದ್ದ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯಕ್ರಮದಲ್ಲಿ ಡಿಸಿಎಂ ಪರಮೇಶ್ವರ್ ಪಾಲ್ಗೊಂಡಿದ್ದರು. ಆಟಗಾರರಿಗೆ ಶುಭ ಕೋರಿದ್ದರು. ಇದೇ ವೇಳೆ ಅವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದ್ದಕ್ಕಿದ್ದಂತೆ ಆರೋಗ್ಯ ಏರುಪೇರಾದ ಕಾರಣ ಕುಟುಂಬಸ್ಥರು ಹಾಗೂ ಭದ್ರತಾ ಸಿಬ್ಬಂದಿ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದು ವೈದೇಹಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪರಮೇಶ್ವರ್‌ ಅನಾರೋಗ್ಯಕ್ಕೆ ಒಳಗಾದ ಹಿನ್ನೆಲೆಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌ ಆಸ್ಪತ್ರೆಗೆ ದೌಡಾಯಿಸಿ ಆರೋಗ್ಯ ವಿಚಾರಿಸಿದರು.

ಪರಮೇಶ್ವರ್ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಕ್ಷಣ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ವೈದೇಹಿ ಆಸ್ಪತ್ರೆಯ ಹಿರಿಯ ವೈದ್ಯರ ತಂಡವು ಸಚಿವರ ಆರೋಗ್ಯ ತಪಾಸಣೆ ನಡೆಸುತ್ತಿದ್ದು, ಅಗತ್ಯ ರಕ್ತ ಪರೀಕ್ಷೆ, ಇಸಿಜಿ ಸೇರಿದಂತೆ ವಿವಿಧ ವೈದ್ಯಕೀಯ ತಪಾಸಣೆಗಳಿಗೆ ಒಳಪಡಿಸಿದೆ.

ಹಠಾತ್ ಆರೋಗ್ಯ ಏರುಪೇರಾದ ಕಾರಣ ಕುಟುಂಬಸ್ಥರು ಹಾಗೂ ಭದ್ರತಾ ಸಿಬ್ಬಂದಿ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ಪರಮೇಶ್ವರ್‌ ಅನಾರೋಗ್ಯಕ್ಕೆ ಒಳಗಾದ ಹಿನ್ನೆಲೆಯಲ್ಲಿ ಸಿಎಂ ಡಿಕೆ ಶಿವಕುಮಾರ್‌ ಆಸ್ಪತ್ರೆಗೆ ದೌಡಾಯಿಸಿದ್ದಾರೆ.

ಆರೋಗ್ಯ ಸಚಿವ ಯು.ಟಿ.ಖಾದರ್, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಮೊದಲಾದ ಸಚಿವರು ಆಸ್ಪತ್ರೆಗೆ ತೆರಳಿ ಡಿಸಿಎಂ ಆರೋಗ್ಯ ವಿಚಾರಿಸಿದರು.

ಈ ವೇಳೆ ಮಾತನಾಡಿದ ಆರೋಗ್ಯ ಸಚಿವ ಯು.ಟಿ.ಖಾದರ್, ಕಾರ್ಯಕ್ರಮವೊಂದಲ್ಲಿ ಪಾಲ್ಗೊಂಡಿದ್ದ ವೇಳೆ ಡಿಸಿಎಂ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಿದೆ. ಹಾಗಾಗಿ ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆ ಮುಂದುವರೆದಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular