HomeKarnatakaಡಿಸಿಎಂ ಪರಮೇಶ್ವರ್’ಗೆ ಏನಾಗಿತ್ತು ? ಅನಾರೋಗ್ಯದ ಬಗ್ಗೆ ಸ್ವತಃ ಸ್ಪಷ್ಟನೆ ನೀಡಿದ ಉಪಮುಖ್ಯಮಂತ್ರಿ

ಡಿಸಿಎಂ ಪರಮೇಶ್ವರ್’ಗೆ ಏನಾಗಿತ್ತು ? ಅನಾರೋಗ್ಯದ ಬಗ್ಗೆ ಸ್ವತಃ ಸ್ಪಷ್ಟನೆ ನೀಡಿದ ಉಪಮುಖ್ಯಮಂತ್ರಿ

ಬೆಂಗಳೂರು: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರ ಆರೋಗ್ಯ ಸ್ಥಿರವಾಗಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಸ್ವತಃ ಪರಮೇಶ್ವರ್ ತಿಳಿಸಿದ್ದಾರೆ.

ಮಂಗಳವಾರ (ಅಕ್ಟೋಬರ್ 27) ಬೆಂಗಳೂರಿನ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್‌ ಆಯೋಜಿಸಿದ್ದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ವೇಳೆ ಪರಮೇಶ್ವರ್ ಅವರಿಗೆ ಹೃದಯ ಬಡಿತ ಹೆಚ್ಚಾದ ಕಾರಣ ಅಸ್ವಸ್ಥತೆ ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ವೈದೇಹಿ ಆಸ್ಪತ್ರೆಗೆ ಕರೆದೊಯ್ದು ಅಗತ್ಯ ವೈದ್ಯಕೀಯ ಚಿಕಿತ್ಸೆ ನೀಡಲಾಯಿತು.

ಪರಮೇಶ್ವರ್ ಆರೋಗ್ಯದ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಸ್ಪತ್ರೆಗೆ ಭೇಟಿ ನೀಡಿ ಪರಮೇಶ್ವರ್ ಅವರ ಆರೋಗ್ಯ ವಿಚಾರಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ರಕ್ತದೊತ್ತಡ ಸಾಮಾನ್ಯ ಸ್ಥಿತಿಯಲ್ಲಿದೆ ಮತ್ತು ಹೃದಯಕ್ಕೆ ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ. ಮುನ್ನೆಚ್ಚರಿಕೆಯ ಕ್ರಮವಾಗಿ ಒಂದು ದಿನ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರಿಗೆ ಸಲಹೆ ನೀಡಿರುವುದಾಗಿಯೂ ಹೇಳಿದ್ದಾರೆ.

“ಯಾರೂ ಆತಂಕಪಡುವ ಅಗತ್ಯವಿಲ್ಲ” ಎಂದ ಡಿಸಿಎಂ

ತಮ್ಮ ಆರೋಗ್ಯದ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಪರಮೇಶ್ವರ್, ಕ್ರೀಡಾಕೂಟದ ವೇಳೆ ಹೃದಯ ಬಡಿತ ಹೆಚ್ಚಾದ ಕಾರಣ ತಕ್ಷಣ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದೇನೆ ಎಂದು ತಿಳಿಸಿದ್ದಾರೆ.

ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಎಲ್ಲ ಹಿತೈಷಿಗಳಿಗೆ ಅವರು ಧನ್ಯವಾದ ಅರ್ಪಿಸಿದ್ದಾರೆ.ಅಲ್ಲದೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇತರ ರೋಗಿಗಳಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ತಮ್ಮನ್ನು ಭೇಟಿಯಾಗಲು ಸಾರ್ವಜನಿಕರು ಆಸ್ಪತ್ರೆಗೆ ಬರಬಾರದು ಎಂದು ಮನವಿ ಮಾಡಿದ್ದಾರೆ.

ಕೊಪ್ಪಳ ಜಿಲ್ಲೆ: ಎಸ್‌ಐಆರ್ ಬಳಿಕ ಅಂತಿಮ ಮತದಾರರ ಪಟ್ಟಿಯಲ್ಲಿ 10,59,164 ಜನರು

ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ, ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026ರ ಪ್ರಕ್ರಿಯೆ ಜಿಲ್ಲೆಯಲ್ಲಿ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯಲ್ಲಿ 5,27,459 ಪುರುಷ ಮತದಾರರು, 5,31,641 ಮಹಿಳಾ ಮತದಾರರು ಹಾಗೂ 64 ತೃತಿಯ ಲಿಂಗಿಗಳು ಸೇರಿ ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 10,59,164 ಮತದಾರರಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಹೇಳಿದರು.

ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಕ್ಟೋಬರ್ 27ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.

ಕೊಪ್ಪಳ ಜಿಲ್ಲೆಯಲ್ಲಿ ಸಹ ಕಳೆದ ಜೂನ್ ದಿಂದ ಎಸ್‌ಐಆರ್ ಪ್ರಕ್ರಿಯೆ ಆರಂಭವಾಗಿತ್ತು. ಇದೀಗ ಅಕ್ಟೋಬರ್ 27ರಂದು

ಅಂತಿಮ ಮತದಾರರ ಪಟ್ಟಿಯನ್ನು ಪ್ರಚುರಪಡಿಸಲಾಗಿದೆ. ಎಸ್‌ಐಆರ್ ಬಳಿಕ ಕೊಪ್ಪಳ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರವಾರು 60-ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ 1,09,826 ಪುರುಷರು ಹಾಗೂ 1,07,076 ಮಹಿಳೆಯರು ಮತ್ತು 9 ಜನ ಇತರೆ ಸೇರಿ ಒಟ್ಟು 2,16,911 ಮತದಾರರಿದ್ದಾರೆ. 61-ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ 1,04,457 ಪುರುಷರು ಹಾಗೂ 1,07,451 ಮಹಿಳೆಯರು ಮತ್ತು 13 ಇತರೆ ಸೇರಿ ಒಟ್ಟು 2,11,921 ಮತದಾರರಿದ್ದಾರೆ. 62-ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ 93,506 ಪುರುಷರು ಹಾಗೂ 95,638 ಮಹಿಳೆಯರು ಮತ್ತು ಇತರೆ 15 ಸೇರಿ ಒಟ್ಟು 1,89,159 ಮತದಾರರಿದ್ದಾರೆ. 63-ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ 1,05,360 ಪುರುಷರು ಹಾಗೂ 1,04,939 ಮಹಿಳೆಯರು ಮತ್ತು 11 ಜನ ಇತರೆ ಸೇರಿ ಒಟ್ಟು 2,10,310 ಮತದಾರರಿದ್ದಾರೆ. 64-ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ 1,14,310 ಪುರುಷರು ಹಾಗೂ 1,16,537 ಮಹಿಳೆಯರು ಮತ್ತು 16 ಇತರೆ ಸೇರಿ ಒಟ್ಟು 2,30,863 ಮತದಾರರಿದ್ದಾರೆ ಎಂದು ಅವರು ಕ್ಷೇತ್ರವಾರು ಮತದಾರರ ಮಾಹಿತಿ ನೀಡಿದರು.

ಅಂತಿಮ ಮತದಾರರ ಪಟ್ಟಿಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ 11,808 ಪುರುಷರು, 9,702 ಮಹಿಳೆ ಹಾಗೂ 1 ಇತರೆ ಸೇರಿ ಒಟ್ಟು 21,511 ಜನ ಯುವ ಮತದಾರರಿದ್ದಾರೆ. 8,897 ಪುರುಷರು, 6,357 ಮಹಿಳೆಯರು ಹಾಗೂ 1 ಇತರೆ ಸೇರಿ ಒಟ್ಟು 15,255 ವಿಕಲಚೇತನ ಮತದಾರರು ಇದ್ದಾರೆ. 2,326 ಪುರುಷರು ಹಾಗೂ 5,247 ಮಹಿಳೆಯರು ಸೇರಿ ಒಟ್ಟು 6,053 ಹಿರಿಯ ನಾಗರಿಕ (85 ವರ್ಷ ಮೇಲ್ಪಟ್ಟ) ಮತದಾರರಿದ್ದಾರೆ. ಮತ್ತು 494 ಪುರುಷರು ಹಾಗೂ 27 ಮಹಿಳೆಯರು ಸೇರಿ ಒಟ್ಟು 521 ಸೇವಾ ಮತದಾರರು ಇದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದ ಅರ್ಹ ವ್ಯಕ್ತಿಗಳು ನಮೂನೆ-6ರ ಮೂಲಕ ಅರ್ಜಿ ಸಲ್ಲಿಸಬಹುದು. ಮತದಾರರ ಪಟ್ಟಿಯಲ್ಲಿ ಹೆಸರನ್ನು ತೆಗೆದುಹಾಕಲು ನಮೂನೆ-7ರ ಮೂಲಕ ಅರ್ಜಿ ಸಲ್ಲಿಸಬಹುದು. ಮತದಾರರ ಪಟ್ಟಿಯಲ್ಲಿನ ವಿವರ/ನಮೂದುಗಳಲ್ಲಿ ತಿದ್ದುಪಡಿ ಅಗತ್ಯವಿದ್ದರೆ ನಮೂನೆ-8ರ ಮೂಲಕ ಅರ್ಜಿ ಸಲ್ಲಿಸಬಹುದು. ನಮೂನೆ-6 ಹೊಸ ಮತದಾರರಾಗಿ ನೋಂದಾಯಿಸಲು, ನಮೂನೆ-6ಎ ಹೊಸ ಸಾಗರೋತ್ತರ ಮತದಾರರಾಗಿ ನೋಂದಾಯಿಸಲು, ನಮೂನೆ-7 ಹೆಸರು ತೆಗೆದುಹಾಕುವಿಕೆ, ನಮೂನೆ-8 ನಿವಾಸ ಸ್ಥಳ ಬದಲಾವಣೆ/ ನಮೂದುಗಳ ತಿದ್ದುಪಡಿ/ ಎಪಿಕ್ ಬದಲಾವಣೆ/ ಪಿಡಬ್ಲ್ಯೂಡಿ ಗುರುತು ದಾಖಲಿಸುವುದು, ಆನ್‌ಲೈನ್‌ನಲ್ಲಿ ಸಲ್ಲಿಸಲು ಇಸಿಐ ನೆಟ್ ಆ್ಯಪ್ (ECINet App) ಮೂಲಕ ಲಾಗಿನ್ ಮಾಡಿ ಅಥವಾ https://voters.eci.gov.in ಗೆ ಭೇಟಿ ನೀಡಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular