HomeKarnatakaಪಿಂಚಣಿದಾರರಿಗೆ ಗುಡ್ ನ್ಯೂಸ್: ಮನೆಬಾಗಿಲಿಗೆ ಡಿಜಿಟಲ್ ಜೀವನ ಪ್ರಮಾಣ ಪತ್ರ ಸೌಲಭ್ಯ: ಅಂಚೆ ಇಲಾಖೆಯಿಂದ ಹೊಸ...

ಪಿಂಚಣಿದಾರರಿಗೆ ಗುಡ್ ನ್ಯೂಸ್: ಮನೆಬಾಗಿಲಿಗೆ ಡಿಜಿಟಲ್ ಜೀವನ ಪ್ರಮಾಣ ಪತ್ರ ಸೌಲಭ್ಯ: ಅಂಚೆ ಇಲಾಖೆಯಿಂದ ಹೊಸ ಉಪಕ್ರಮ

ಕೇಂದ್ರ, ರಾಜ್ಯ ಸರ್ಕಾರಿ ಪಿಂಚಣಿದಾರರು, ಕುಟುಂಬ ಪಿಂಚಣಿದಾರರು, ಸೈನಿಕರು ಹಾಗೂ ನೌಕರರ ಭವಿಷ್ಯನಿಧಿ (ಇಪಿಎಫ್ಒ) ಪಿಂಚಣಿದಾರರಿಗೆ ಡಿಜಿಟಲ್ ಜೀವನ ಪ್ರಮಾಣ ಪತ್ರವನ್ನು ತಮ್ಮ ಮನೆಬಾಗಿಲಿನಲ್ಲೇ ಸಲ್ಲಿಸಲು ಭಾರತೀಯ ಅಂಚೆ ಇಲಾಖೆಯು ವಿಶೇಷ ವ್ಯವಸ್ಥೆ ಕಲ್ಪಿಸಿದೆ.

ಪಿಂಚಣಿದಾರರು ತಮ್ಮ ಜೀವನ ಪ್ರಮಾಣ ಪತ್ರ ಸಲ್ಲಿಸಲು ಎದುರಿಸುತ್ತಿರುವ ತೊಂದರೆಗಳನ್ನು ನಿವಾರಿಸಲು ‘ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್’ ಮೂಲಕ ಈ ಸೌಲಭ್ಯವನ್ನು ಒದಗಿಸಲಾಗುತ್ತಿದೆ. ಪೋಸ್ಟ್‌ ಮ್ಯಾನ್ ಅಥವಾ ಬಯೋಮೆಟ್ರಿಕ್ ದೃಢೀಕರಣ ಹಾಗೂ ಫೇಸ್ ಆರ್‌ಡಿ ಆ್ಯಪ್ ತಂತ್ರಜ್ಞಾನ ಬಳಸಿ ಜೀವನ್ ಪ್ರಮಾಣ ಪೋರ್ಟಲ್ ಮೂಲಕ ಕೆಲವೇ ನಿಮಿಷಗಳಲ್ಲಿ ಡಿಜಿಟಲ್ ಲೈಫ್ ಪ್ರಮಾಣ ಪತ್ರವನ್ನು ಸಲ್ಲಿಸಬಹುದಾಗಿದೆ.

ಈ ಸೇವೆ ಪಡೆಯಲು ಪಿಂಚಣಿದಾರರು ತಮ್ಮ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ಪಿಪಿಒ ಸಂಖ್ಯೆ ಮತ್ತು ಬ್ಯಾಂಕ್ ಖಾತೆಯ ವಿವರಗಳನ್ನು ಒದಗಿಸಿ, ಬಯೋಮೆಟ್ರಿಕ್ ವೆರಿಫೈ ಮಾಡಬೇಕಾಗುತ್ತದೆ. ಜಿಎಸ್‌ಟಿ ಸೇರಿದಂತೆ ಕೇವಲ ರೂ. 70 ಶುಲ್ಕ ಪಾವತಿಸಿ, ಹತ್ತಿರದ ಅಂಚೆ ಕಚೇರಿ ಅಥವಾ ಮನೆಗೆ ಬರುವ ಪೋಸ್ಟ್‌ ಮ್ಯಾನ್ ಮೂಲಕ ಈ ಸೌಲಭ್ಯದ ಪ್ರಯೋಜನ ಪಡೆದುಕೊಳ್ಳುವಂತೆ ಕರ್ನಾಟಕ ಅಂಚೆ ವೃತ್ತದ ಮುಖ್ಯ ಅಂಚೆ ಮಹಾನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾಜಿ ಸೈನಿಕರಿಗೆ ಸ್ಪರ್ಶ್ ಸಹಾಯತಾ ಶಿಬಿರ

ಶಿವಮೊಗ್ಗ: ಪಿ.ಸಿ.ಡಿ.ಎ ಪ್ರತಿನಿಧಿಗಳಿಂದ ಮಾಜಿ ಸೈನಿಕರು ಮತ್ತು ಅವಲಂಬಿತರು ಹಾಗೂ ವೀರನಾರಿಯರು ಇವರುಗಳಿಗಾಗಿ  ಸ್ಪರ್ಶ್ ಸಹಾಯತಾ ಶಿಬಿರವನ್ನು ಮಲ್ಟಿ ಪರ್ಪಸ್ ಹಾಲ್, ಪಿ.ಸಿ.ಡಿ.ಎ, ಬೆಂಗಳೂರು ಇಲ್ಲಿ ನವೆಂಬರ್ 04 ಮತ್ತು 05 ನವೆಂಬರ್  ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಆಯೋಜಿಸಲಾಗಿದೆ.

ಮಾಜಿ ಸೈನಿಕರು ಮತ್ತು ಅವಲಂಬಿತರು ಹಾಗೂ ವೀರ ನಾರಿಯರು ಸ್ಪರ್ಶ್ ಸಂಬಂಧಿಸಿದಂತೆ ಹಾಗೂ ಜೀವನ ಪ್ರಮಾಣ ಪತ್ರ ಸಲ್ಲಿಸುವ ಕುರಿತ ಸೂಕ್ತ ಸಲಹೆ ಮತ್ತು ಪರಿಹಾರಕ್ಕಾಗಿ ಸಂಬಂಧಿತ ಎಲ್ಲಾ ಪೂರಕ ದಾಖಲೆಗಳೊಂದಿಗೆ ಭಾಗವಹಿಸಲು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ(ಪ್ರ) ಡಾ. ಸಿ.ಎ ಹಿರೇಮಠ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಉಚಿತ ಅಣಬೆ ಬೇಸಾಯ ತರಬೇತಿ

ಶಿವಮೊಗ್ಗ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ದಿನಾಂಕ: 12.11.2026 ರಿಂದ 10 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಮತ್ತು ಮಹಿಳೆಯರಿಗೆ ಉಚಿತ ಅಣಬೆ ಬೇಸಾಯ ತರಬೇತಿ ಶಿಬಿರವನ್ನು ಏರ್ಪಡಿಸಿದೆ.

ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 50 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular