ಶಿವಮೊಗ್ಗ: ಶಿವಮೊಗ್ಗದಲ್ಲಿ ಅ.29 ರಂದು ‘ಉದ್ಯೋಗ ಮೇಳ’ ಆಯೋಜಿಸಲಾಗಿದೆ. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅಕ್ಟೋಬರ್ 29 ರಂದು ಬೆಳಿಗ್ಗೆ 10 ಗಂಟೆಗೆ ‘ಉದ್ಯೋಗ ಮೇಳ’ವನ್ನು ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಯು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ.
ದಿನಾಂಕ: 29-10-2026 ರಂದು ಬೆಳಿಗ್ಗೆ 10:00 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಸಂದರ್ಶನ ನಡೆಯಲಿದೆ.
ಪಿ.ಯು.ಸಿ., ಐಟಿಐ, ಡಿಪ್ಲೋಮಾ ಮತ್ತು ಯಾವುದೇ ಪದವಿ ಪಡೆದ 18 ರಿಂದ 35 ವರ್ಷ ಒಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಆಧಾರ್ ಕಾರ್ಡ್ ಪ್ರತಿಯನ್ನು ತರಬೇಕಾಗಿ ವಿನಂತಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರನ್ನು ನೇರವಾಗಿ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆ: 9380663606ಗಳಿಗೆ ಕರೆ ಮಾಡಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಅ.30 ರಂದು ನೇರ ಸಂದರ್ಶನ
ಮಡಿಕೇರಿ: ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅಕ್ಟೋಬರ್ 30 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ನೇರಸಂದರ್ಶನ”ವನ್ನು ಆಯೋಜಿಸಲಾಗಿದೆ. ಈ ನೇರ ಸಂದರ್ಶನದಲ್ಲಿ Raxa Security Services Limited. ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಈ ನೇರ ಸಂದರ್ಶನದಲ್ಲಿ Raxa Security Services Limited. ಇವರು ರಾಕ್ಷಾ ಅಕಾಡೆಮಿ ಸೆಕ್ಯೂರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ನೇರ ಸಂದರ್ಶನದಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ., ಹಾಗೂ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಅರ್ಹತೆ: ಎತ್ತರ:167 ಸೆಂ.ಮೀ, ತೂಕ:50 ಕೆ.ಜಿ, ವಯೋಮಿತಿ: 18 ರಿಂದ 35 ವರ್ಷಗಳು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್– 8296020826 ಇವರನ್ನು ಸಂಪರ್ಕಿಸಬಹುದು ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.
ಉಚಿತ ಅಣಬೆ ಬೇಸಾಯ ತರಬೇತಿ
ಶಿವಮೊಗ್ಗ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ದಿನಾಂಕ: 12.11.2026 ರಿಂದ 10 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಮತ್ತು ಮಹಿಳೆಯರಿಗೆ ಉಚಿತ ಅಣಬೆ ಬೇಸಾಯ ತರಬೇತಿ ಶಿಬಿರವನ್ನು ಏರ್ಪಡಿಸಿದೆ.
ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 50 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

