HomeIndiaಆರು ರಾಜ್ಯಗಳಲ್ಲಿ ರ್ಅರ್ನಬ್ ಚಂಡಮಾರುತದ ಅಬ್ಬರ: 8 ಜನರು ದುರ್ಮರಣ; ಜನಜೀವನ ಸಂಪೂರ್ಣ ಅಸ್ತವ್ಯಸ್ತ

ಆರು ರಾಜ್ಯಗಳಲ್ಲಿ ರ್ಅರ್ನಬ್ ಚಂಡಮಾರುತದ ಅಬ್ಬರ: 8 ಜನರು ದುರ್ಮರಣ; ಜನಜೀವನ ಸಂಪೂರ್ಣ ಅಸ್ತವ್ಯಸ್ತ

ಹೈದರಾಬಾದ್: ಅರ್ನಬ್ ಚಂಡಮಾರುತ ಆಂಧ್ರಪ್ರದೇಶದಲ್ಲಿ ಭಾರಿ ಅನಾಹುತ ಸೃಷ್ಟಿಸಿದೆ. ಆಂಧ್ರದ ಕರಾವಳಿ ಪ್ರದೇಶಗಳಲ್ಲಿ ಗಂಟೆಗೆ 150ರಿಂದ 180 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುತ್ತಿದ್ದು, ಚಂಡಮಾರುತದ ಪರಿಣಾಮ ಇದುವರೆಗೆ 8 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಚಂಡಮಾರುತದ ತೀವ್ರತೆಗೆ ಸಮುದ್ರದಲ್ಲಿ ಬೃಹತ್ ಅಲೆಗಳು ಎದ್ದಿದ್ದು, ಸಾವಿರಾರು ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ. ಭಾರೀ ಗಾಳಿ ಮತ್ತು ಪ್ರತಿಕೂಲ ಹವಾಮಾನದಿಂದ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಲಾಗಿದ್ದು, ಹತ್ತಕ್ಕೂ ಹೆಚ್ಚು ರೈಲುಗಳ ಸಂಚಾರದಲ್ಲಿ ವ್ಯತ್ಯಯವುಂಟಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಂಡಮಾರುತದಿಂದ ಮನೆಗಳಿಗೆ ಹಾನಿಯಾಗಿದ್ದು, ಸಾವಿರಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಕೃಷಿ ಭೂಮಿಗಳಲ್ಲಿ ನೀರು ನುಗ್ಗಿದ ಪರಿಣಾಮ ಬೆಳೆಗಳು ನಾಶವಾಗಿದ್ದು, ರೈತರು ಭಾರೀ ನಷ್ಟ ಅನುಭವಿಸುವ ಆತಂಕ ಎದುರಾಗಿದೆ.

ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಅರ್ನಬ್ ತನ್ನ ರೌದ್ರರೂಪವನ್ನು ತೋರಿಸಿದೆ. ಗಂಟೆಗೆ 150 ರಿಂದ 180 ಕಿಲೋಮೀಟರ್ ವೇಗದಲ್ಲಿ ಅಪ್ಪಳಿಸಿದ ಈ ಚಂಡಮಾರುತದ ಪ್ರಭಾವದಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಸಾವಿರಾರು ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿವೆ. ಸಮುದ್ರದಲ್ಲಿ ರಕ್ಕಸ ಗಾತ್ರದ ಅಲೆಗಳು ಭೋರ್ಗರೆಯುತ್ತಿದ್ದು, ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಚಂಡಮಾರುತದ ಪರಿಣಾಮವಾಗಿ ವಿಮಾನ ಸೇವೆಗಳು ಹಾಗೂ ಹತ್ತಕ್ಕೂ ಹೆಚ್ಚು ರೈಲುಗಳ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

ವಿಶಾಖಪಟ್ಟಣಂನಲ್ಲಿ, ಹಳೆಯ ಗೋಶಾಲೆಯೊಂದರ ಬಳಿ ವಿದ್ಯುತ್ ಕಂಬವೊಂದು ಕುಸಿದು ಬಿದ್ದಿದ್ದರಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಮತ್ತೊಂದು ಘಟನೆಯಲ್ಲಿ, ಸಿಂಹಾಚಲಂನ ಬಾಲಾಜಿ ನಗರದ ಬಳಿ ಬಿಂದು ಎಂಬ ವಿವಾಹಿತ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮಾಹಿತಿ ತಿಳಿದ ಕೂಡಲೇ ಗೋಪಾಲಪಟ್ಟಣಂ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪಶ್ಚಿಮ ಗೋದಾವರಿ ಜಿಲ್ಲೆಯ ಭೀಮವರಂನಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಚರ್ಚೊಂದರ ಬಳಿ ಮರವೊಂದು ಬಿದ್ದಿದ್ದರಿಂದ ಚೊಕ್ಕ ಕಿಶೋರ್ (45) ಎಂಬುವರು ಮೃತಪಟ್ಟರೆ, ಬೊಂಡದಾವರಿ ಬೀದಿಯಲ್ಲಿ ವಿದ್ಯುತ್ ಕಂಬವೊಂದು ಕುಸಿದು ಬಿದ್ದಿದ್ದರಿಂದ ರಾಂಬಾಬು (34) ಎಂಬುವರು ಪ್ರಾಣ ಕಳೆದುಕೊಂಡಿದ್ದಾರೆ.

ಓಡಿಶಾದಲ್ಲೂ ಚಂಡಮಾರುತದ ಅಬ್ಬರ ಜೋರಾಗಿಯೇ ಇದೆ. ಇದರಿಂದ ಉಂಟಾಗಬಹುದಾದ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು, ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ. ಒಡಿಶಾದ ರಾಜ್ಯ ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಸುರೇಶ್ ಪೂಜಾರಿ ಅವರು, ಇಲ್ಲಿಯವರೆಗೆ ಸುಮಾರು 1 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಮಲ್ಕನ್‌ಗಿರಿ, ಗಜಪತಿ, ಗಂಜಾಂ, ಕೋರಾಪುಟ್, ನಬರಂಗ್‌ಪುರ ಮತ್ತು ರಾಯಗಡ ಸೇರಿದಂತೆ ದಕ್ಷಿಣ ಒಡಿಶಾದ ವಿವಿಧ ಜಿಲ್ಲೆಗಳಲ್ಲಿ ಚಂಡಮಾರುತದ ಪ್ರಭಾವ ಕಂಡುಬರುತ್ತಿದೆ. ರಾಜ್ಯ ಸರ್ಕಾರ ಈ ಜಿಲ್ಲೆಗಳ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಹೇಳಿದ್ದಾರೆ.

ಜನರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಸಂಭವನೀಯ ಹಾನಿಯನ್ನು ಕಡಿಮೆ ಮಾಡಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇಲ್ಲಿಯವರೆಗೆ ಯಾವುದೇ ದೊಡ್ಡ ಪ್ರಮಾಣದ ಹಾನಿಯ ವರದಿಗಳು ಬಂದಿಲ್ಲ. ನಾಳೆಯಿಂದ ಚಂಡಮಾರುತದ ಪ್ರಭಾವವು ಕ್ರಮೇಣ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಸಚಿವರು ತಿಳಿಸಿದ್ದಾರೆ.

ಬೆರ್ಹಾಂಪುರ ಮುನ್ಸಿಪಲ್ ಕಾರ್ಪೊರೇಷನ್ (BMC) ವ್ಯಾಪ್ತಿಯಲ್ಲಿ 225 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಮಂಗಳವಾರ ದಿನವಿಡೀ ಮಳೆ ಸುರಿದಿದ್ದು ಸಂಜೆಯ ವೇಳೆಗೆ ಅದರ ತೀವ್ರತೆ ಹೆಚ್ಚಾಯಿತು. ಈಗಾಗಲೇ BMC ವ್ಯಾಪ್ತಿಯಲ್ಲಿ ಜಲಾವೃತವಾಗುವ ಸಾಧ್ಯತೆಯಿರುವ ಪ್ರದೇಶಗಳಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಸಿದ್ಧರಾಗಿರಲು ಹಾಗೂ ತಾತ್ಕಾಲಿಕ ಆಶ್ರಯ ತಾಣಗಳಲ್ಲಿ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಲು ಸೂಚನೆ ನೀಡಲಾಗಿದೆ.

ಅರ್ನಬ್ ಚಂಡಮಾರುತಕ್ಕೆ ಈವರೆಗೆ 8 ಜನರು ಸಾವನ್ನಪ್ಪಿರುವ ವರದಿಯಾಗಿದೆ. ಅರ್ನಬ್ ಚಂಡಮಾರುತದ ಪ್ರಭಾವ ಒಡಿಶಾ, ತೆಲಂಗಾಣ ಮತ್ತು ಗುಜರಾತ್ ಸೇರಿದಂತೆ ಆರು ರಾಜ್ಯಗಳ ಕರಾವಳಿ ಪ್ರದೇಶಗಳಿಗೂ ತಟ್ಟಿದೆ. ಈ ಎಲ್ಲಾ ರಾಜ್ಯಗಳಲ್ಲಿ ಈಗಾಗಲೇ ಹೈ ಅಲರ್ಟ್ ಘೋಷಿಸಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ.

ಚಂಡಮಾರುತದಿಂದಾಗಿ ಸಾವಿರಾರು ಜನರು ತಮ್ಮ ಮನೆಮಠಗಳನ್ನು ಕಳೆದುಕೊಂಡಿದ್ದು, ನಿರಾಶ್ರಿತರಾಗಿದ್ದಾರೆ. ಇವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular