ಪಾಕಿಸ್ತಾನದ ಲಾಹೋರ್‌ನ ಗದ್ದಾಫಿ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ತ್ರಿಕೋನ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಶ್ರೀಲಂಕಾ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗುತ್ತಿವೆ. ಈಗಾಗಲೇ ಪಾಕಿಸ್ತಾನ ಮತ್ತು ಶ್ರೀಲಂಕಾ ತಂಡಗಳು ಫೈನಲ್ ಹಂತಕ್ಕೇರಿದ್ದು, ಇಂದಿನ ಪಂದ್ಯವು ಉಭಯ ತಂಡಗಳಿಗೆ ಮಹತ್ವದ್ದಾಗಿದೆ. ಸರಣಿಯಲ್ಲಿ ಇದುವರೆಗೆ ಆಡಿದ ಮೂರೂ ಪಂದ್ಯಗಳನ್ನು ಸೋತಿರುವ ಹ್ಯಾರಿ ಬ್ರೂಕ್ ನೇತೃತ್ವದ ಇಂಗ್ಲೆಂಡ್ ತಂಡವು ತನ್ನ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ.
ಪಾಕಿಸ್ತಾನದ ನೆಲದಲ್ಲಿ ಇಂಗ್ಲೆಂಡ್ ತಂಡದ ಪ್ರದರ್ಶನವು ನಿರಾಶಾದಾಯಕವಾಗಿದ್ದು, ಸತತ ಆರು ಏಕದಿನ ಪಂದ್ಯಗಳಲ್ಲಿ ಸೋಲುಂಡಿದೆ. ಉಭಯ ತಂಡಗಳ ಮುಖಾಮುಖಿ ಇತಿಹಾಸವನ್ನು ನೋಡುವುದಾದರೆ, ಇದುವರೆಗೆ ಒಟ್ಟು 86 ಏಕದಿನ ಪಂದ್ಯಗಳಲ್ಲಿ ಆಡಿರುವ ಇಂಗ್ಲೆಂಡ್ 42 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಶ್ರೀಲಂಕಾ 40 ಪಂದ್ಯಗಳಲ್ಲಿ ಜಯಗಳಿಸಿದೆ. ಮೂರು ಪಂದ್ಯಗಳು ಫಲಿತಾಂಶವಿಲ್ಲದೆ ಅಂತ್ಯಗೊಂಡಿದ್ದರೆ, ಒಂದು ಪಂದ್ಯ ಟೈ ಆಗಿದೆ.
ಭಾರತದಲ್ಲಿ ಪಂದ್ಯದ ನೇರಪ್ರಸಾರ ವೀಕ್ಷಣೆ ಎಲ್ಲಿ? ಈ ತ್ರಿಕೋನ ಸರಣಿಯ ಪ್ರಸಾರ ಹಕ್ಕುಗಳನ್ನು ಭಾರತದ ಯಾವುದೇ ಪ್ರಮುಖ ದೂರದರ್ಶನ ಚಾನೆಲ್ ಖರೀದಿಸಿಲ್ಲ. ಹೀಗಾಗಿ ಭಾರತದಲ್ಲಿ ಟಿವಿ ಚಾನೆಲ್‌ಗಳಲ್ಲಿ ಪಂದ್ಯದ ನೇರಪ್ರಸಾರ ಲಭ್ಯವಿರುವುದಿಲ್ಲ. ಆದರೆ ಕ್ರಿಕೆಟ್ ಅಭಿಮಾನಿಗಳು ವೆಟೋ ಅಪ್ಲಿಕೇಶನ್ (Veto App) ಮೂಲಕ ಪಂದ್ಯದ ನೇರಪ್ರಸಾರವನ್ನು ಉಚಿತವಾಗಿ ವೀಕ್ಷಿಸಬಹುದಾಗಿದೆ.
ಉಭಯ ತಂಡಗಳ ಸಂಭಾವ್ಯ ಆಡುವ ಬಳಗ ಶ್ರೀಲಂಕಾ ತಂಡ: ಕಮಿಂದು ಮೆಂಡಿಸ್, ಅವಿಷ್ಕಾ ಫೆರ್ನಾಂಡೋ, ಕುಶಲ್ ಮೆಂಡಿಸ್ (ನಾಯಕ ಹಾಗೂ ವಿಕೆಟ್ ಕೀಪರ್), ಪವನ್ ರತ್ನಾಯಕೆ, ಸಹನ್ ಅರಾಚಿಗೆ, ಜಾನಿತ್ ಲಿಯಾನಗೆ, ದಸುನ್ ಶನಕ, ದುನಿತ್ ವೆಲ್ಲಾಲಗೆ, ದುಷ್ಮಂತ ಚಮೀರ, ದಿಲ್ಶನ್ ಮಧುಶಂಕ.
ಇಂಗ್ಲೆಂಡ್ ತಂಡ: ಟಾಮ್ ಬ್ಯಾಂಟನ್, ಬೆನ್ ಡಕೆಟ್, ಜೋ ರೂಟ್, ಹ್ಯಾರಿ ಬ್ರೂಕ್ (ನಾಯಕ), ಜೋರ್ಡಾನ್ ಕಾಕ್ಸ್ (ವಿಕೆಟ್ ಕೀಪರ್), ವಿಲ್ ಜಾಕ್ಸ್, ಸಮ್ ಕರನ್, ಗಸ್ ಅಟ್ಕಿನ್ಸನ್, ಲಿಯಾಮ್ ಡಾಸನ್, ಜೋಶ್ ಟಂಗ್, ಆದಿಲ್ ರಶೀದ್.

