HomeKarnatakaಮಗುವಿನ ಹೊಟ್ಟೆಯೊಳಗೆ ಭ್ರೂಣ: ಬಳ್ಳಾರಿ BMCRC ಯಲ್ಲಿ ಎರಡು ತಿಂಗಳ ಕಂದಮ್ಮನಿಗೆ ಅಪರೂಪದ ಶಸ್ತ್ರಚಿಕಿತ್ಸೆ ಯಶಸ್ವಿ

ಮಗುವಿನ ಹೊಟ್ಟೆಯೊಳಗೆ ಭ್ರೂಣ: ಬಳ್ಳಾರಿ BMCRC ಯಲ್ಲಿ ಎರಡು ತಿಂಗಳ ಕಂದಮ್ಮನಿಗೆ ಅಪರೂಪದ ಶಸ್ತ್ರಚಿಕಿತ್ಸೆ ಯಶಸ್ವಿ

ಬಳ್ಳಾರಿ: ನಗರದ ಬಿಎಂಸಿಆರ್‌ಸಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ(BMCRC) ವೈದ್ಯರ ತಂಡವು ಎರಡು ತಿಂಗಳ ಗಂಡು ಮಗುವಿನ ಹೊಟ್ಟೆಯಲ್ಲಿದ್ದ ಭ್ರೂಣವನ್ನು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದು ಮಗುವಿಗೆ ಮರುಜನ್ಮ ನೀಡಿದೆ. ವೈದ್ಯಕೀಯ ಲೋಕದಲ್ಲಿ ಅತ್ಯಂತ ಅಪರೂಪ ಎನಿಸಿಕೊಂಡಿರುವ ‘ಫೀಟಸ್ ಇನ್ ಫೀಟು’ ಪ್ರಕರಣ ಇದಾಗಿದೆ.

ಗರ್ಭಾವಸ್ಥೆಯಲ್ಲೇ ಪತ್ತೆ:

ಮಗು ಗರ್ಭದಲ್ಲಿದ್ದಾಗಲೇ ಬಿಎಂಸಿಆರ್‌ಸಿ ಯ ವಿಕಿರಣಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಸದಾಶಿವಗೌಡ ಅವರ ನೇತೃತ್ವದ ತಂಡವು ಈ ಅಪರೂಪದ ಸಮಸ್ಯೆಯನ್ನು ಪತ್ತೆಹಚ್ಚಿತ್ತು. ಎರಡು ತಿಂಗಳ ಹಿಂದೆ ಇದೇ ಆಸ್ಪತ್ರೆಯಲ್ಲಿ ಮಗು ಜನಿಸಿದ್ದು, ಜನನದ ನಂತರ ಅಗತ್ಯ ತಪಾಸಣೆಗಳನ್ನು ನಡೆಸಿ, ನಿಖರ ಯೋಜನೆಯೊಂದಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಪೂರ್ಣಗೊಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಕ್ಕಳ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಗಡ್ಡಿ ದಿವಾಕರ್ ಅವರ ನೇತೃತ್ವದಲ್ಲಿ ನಡೆದ ಈ ಸಂಕೀರ್ಣ ಕಾರ್ಯಾಚರಣೆಯಲ್ಲಿ ಡಾ. ಸಂಜೀವ್ ಜೋಶಿ, ಡಾ. ರಾಮ್ ಮೋಹನ್ ಮತ್ತು ಡಾ. ಅಶ್ವಿತಾ ಭಾಗವಹಿಸಿದ್ದರು. ಅರಿವಳಿಕೆ ವಿಭಾಗದ ಮುಖ್ಯಸ್ಥರಾದ ಡಾ. ಬಾಲಸುಬ್ರಹ್ಮಣ್ಯ, ಡಾ. ಪರಿಮಳಾ, ಡಾ. ನಿಜಾಮುದ್ದೀನ್, ಡಾ. ರಘುನಾಥ್, ಡಾ. ಮಧುಶ್ರೀ ಹಾಗೂ ಶುಶ್ರೂಷಕರಾದ ಪುಷ್ಪಲತಾ ಮತ್ತು ಸಲೀಂ ಪಾಷಾ ಅವರನ್ನೊಳಗೊಂಡ ತಂಡ ಯಶಸ್ವಿಯಾಗಿ ಸಹಕರಿಸಿದೆ.

ಏನಿದು ‘ಫೀಟಸ್ ಇನ್ ಫೀಟು’?:

ವೈದ್ಯಕೀಯ ವಿಜ್ಞಾನದ ಪ್ರಕಾರ, ಇದು ತಾಯಿಯ ಗರ್ಭದಲ್ಲಿ ಬೆಳವಣಿಗೆ ಹೊಂದದ ಅವಳಿ ಭ್ರೂಣವು ಇನ್ನೊಂದು ಮಗುವಿನ ದೇಹದೊಳಗೆ ಸೇರಿಕೊಳ್ಳುವ ಅತ್ಯಂತ ಅಪರೂಪದ ಜನ್ಮಜಾತ ಸ್ಥಿತಿ. ಸುಮಾರು ಐದು ಲಕ್ಷ ಜನನಗಳಲ್ಲಿ ಒಂದರಲ್ಲಿ ಮಾತ್ರ ಇಂತಹ ಪ್ರಕರಣಗಳು ಕಂಡುಬರುತ್ತವೆ. ಸರಿಯಾದ ಸಮಯದಲ್ಲಿ ಪತ್ತೆಹಚ್ಚಿ ಶಸ್ತ್ರಚಿಕಿತ್ಸೆ ನಡೆಸಿದರೆ ಮಗುವನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯ.

ಡಾ. ಗಡ್ಡಿ ದಿವಾಕರ್ ಅವರ ನೇತೃತ್ವದಲ್ಲಿ ಕಳೆದ 22 ವರ್ಷಗಳಿಂದ ಸುಧಾರಿತ ಮಕ್ಕಳ ಶಸ್ತ್ರಚಿಕಿತ್ಸೆಗಳು ನಡೆಯುತ್ತಿದ್ದು, 2008ರಲ್ಲೂ ಇಂತಹುದೇ ಪ್ರಕರಣವನ್ನು ವಿಮ್ಸ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನಿಭಾಯಿಸಲಾಗಿತ್ತು. ಆಸ್ಪತ್ರೆಯ ಡೀನ್ ಮತ್ತು ನಿರ್ದೇಶಕ ಡಾ. ಮರಿರಾಜ್, ಪ್ರಾಂಶುಪಾಲ ಡಾ. ಮಲ್ಲಿಕಾರ್ಜುನ ಎಂ., ವೈದ್ಯಕೀಯ ಅಧೀಕ್ಷಕ ಡಾ. ಅರುಣ್, ಮುಖ್ಯ ಆಡಳಿತಾಧಿಕಾರಿ ಡಾ. ನಯನಾ ಹಾಗೂ ಹಣಕಾಸು ಸಲಹೆಗಾರ ಮಹೇಶ್ ಅವರ ನಿರಂತರ ಬೆಂಬಲಕ್ಕೆ ವೈದ್ಯರ ತಂಡ ಕೃತಜ್ಞತೆ ಸಲ್ಲಿಸಿದೆ.

ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ 2026-27 ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಡಾ.ಬಿ.ಆರ್ ಅಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಅದರ ಅಧೀನದಲ್ಲಿ ಬರುವ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಭೋವಿ ಅಭಿವೃದ್ಧಿ ನಿಗಮ, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಹಾಗೂ ತಾಂಡ ಅಭಿವೃದ್ಧಿ ನಿಗಮಗಳಿಂದ ವಿವಿಧ ಯೋಜನೆಗಳಿಗೆ ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವಿವಿಧ ಯೋಜನೆಗಳು:

ನಿಗಮದ ವಿವಿಧ ಯೋಜನೆಗಳ ಸೌಲಭ್ಯಗಳಾದ ಸ್ವಯಂ ಉದ್ಯೋಗ ನೇರ ಸಾಲ ಕುರಿಸಾಕಾಣಿಕೆ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ (ಸ್ವಾವಲಂಬಿ ಸಾರಥಿ ಯೋಜನೆ) (ಫಾಸ್ಟ್ ಪುಡ್ ಟ್ರಕ್ ಟ್ರೆöÊಲರ್ / ಮೊಬೈಲ್ ಕಿಚನ್ ಪುಡ್ ಕಿಯೋಸ್) (ಹೈನುಗಾರಿಕೆ ಹಾಗೂ ಇತರೆ ಉದ್ದೇಶ), ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ (ಮಹಿಳಾ ಸ್ವ-ಸಹಾಯ ಗುಂಪುಗಳಿಗೆ), ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಹುದಾಗಿದೆ.

ಅರ್ಹ ಫಲಾನುಭವಿಗಳು ನವೆಂಬರ್ 30 ರೊಳಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಅರ್ಜಿಗಳನ್ನು ಕರ್ನಾಟಕ ಸರ್ಕಾರದ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಅಥವಾ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಸಂಬAಧಪಟ್ಟ ಸೇವಾ ಕೇಂದ್ರಗಳಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊ.8050854106, 8050854107 ಮತ್ತು 8050854108 ಗೆ ಸಂಪರ್ಕಿಸಬಹುದು ಎಂದು ನಿಗಮದ ಬಳ್ಳಾರಿ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular