HomeKarnatakaಸ್ಟಿಂಗ್ ಆಪರೇಷನ್ ವಿವಾದ: ಕ್ಲೀನ್ ಚಿಟ್ ನೀಡಿದ ಸಿಸಿಬಿ

ಸ್ಟಿಂಗ್ ಆಪರೇಷನ್ ವಿವಾದ: ಕ್ಲೀನ್ ಚಿಟ್ ನೀಡಿದ ಸಿಸಿಬಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ವಿವಾದ ಅಂತಿಮ ಘಟ್ಟ ತಲುಪಿದ್ದು, ಹೊಸ ತಿರುವು ಪಡೆದುಕೊಂಡಿದೆ.

ಸ್ಟಿಂಗ್ ಆಪರೇಷನ್ ಕುರಿತು ತನಿಖೆ ನಡೆಸಿದ ಸಿಸಿಬಿ ಪೊಲೀಸರು ಇದೊಂದು ಕಟ್ಟುಕತೆ ಎಂಬ ತೀರ್ಮಾನಕ್ಕೆ ಬಂದಿರುವುದಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ವಿರುದ್ಧ ಕೇಳಿಬಂದಿದ್ದ ಆರೋಪಗಳಿಗೆ ಸಿಸಿಬಿ ಕ್ಲೀನ್‌ಚಿಟ್ ನೀಡಿದೆ ಎನ್ನಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ಕೆಲ ದಿನಗಳಿಂದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಆರೋಪ ರಾಜ್ಯ ರಾಜಕಾರಣದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರನ್ನು ಸ್ಟಿಂಗ್ ಆಪರೇಷನ್ ಮಾಡಲಾಗಿದೆ ಎಂಬ ವಿಚಾರ ಇಟ್ಟುಕೊಂಡು ವಾಗ್ದಾಳಿ ನಡೆಸಿದ್ದರು. ಈ ವಿಚಾರ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ನಡುವೆ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿತ್ತು. ಪ್ರಕರಣದ ಕುರಿತು ಸರ್ಕಾರದ ವತಿಯಿಂದಲೂ ತನಿಖೆ ಆರಂಭವಾಇತ್ತು.

ಈ ನಡುವೆ ಸ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಸ್ಟಿಂಗ್ ಆಪರೇಷನ್ ಆರೋಪ ಕಟ್ಟುಕತೆ ಎಂಬ ಪ್ರಾಥಮಿಕ ತೀರ್ಮಾನಕ್ಕೆ ಬಂದಿರುವುದಾಗಿ ತಿಳಿಸಿದೆ. ಈ ಬೆಳವಣಿಗೆಯಿಂದ ಸಿದ್ದರಾಮಯ್ಯ ಅವರಿಗೆ ಕೊಂಚ ನಿರಾಳವಾದಂತಾಗಿದೆ.

ಸಿಸಿಬಿ ನೀಡಿರುವ ಕ್ಲೀನ್ ಚಿಟ್ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸುತ್ತಿನ ವಾಕ್ಸಮರಕ್ಕೆ ವೇದಿಕೆ ಸಿದ್ಧವಾಗಿದೆ.

ಸಿಸಿಬಿ ವರದಿ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ತನಿಖೆಯ ಪ್ರಾಥಮಿಕ ಮಾಹಿತಿ ಪೊಲೀಸರಿಂದ ಲಭ್ಯವಾಗಿದೆ ಎಂದು ಹೇಳಿದ್ದಾರೆ. ಮಾಧ್ಯಮಗಳಲ್ಲಿ ದಿನಕ್ಕೊಂದು ಸುದ್ದಿ ಪ್ರಸಾರವಾಗುತ್ತಿದ್ದು, ಪರಿಶೀಲಿಸದ ಮಾಹಿತಿಗಳನ್ನು ಉಲ್ಲೇಖಿಸಲಾಗುತ್ತಿದೆ. ವಿರೋಧ ಪಕ್ಷಗಳು ತಮಗೆ ಬೇಕಾದ ರೀತಿಯಲ್ಲಿ ಪ್ರಕರಣವನ್ನು ನಿರೂಪಿಸುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

ತನಿಖೆಯ ಗೌಪ್ಯತೆಯನ್ನು ಕಾಪಾಡಿಕೊಂಡು ಪೊಲೀಸರು ಪ್ರಾಥಮಿಕ ಮಾಹಿತಿ ನೀಡಿದ್ದಾರೆ. ಸ್ಟಿಂಗ್ ಆಪರೇಷನ್‌ನಲ್ಲಿಯೂ ಕಟ್ಟುಕತೆ ಇರುವುದಾಗಿ ಪ್ರಾಥಮಿಕವಾಗಿ ತಿಳಿದುಬಂದಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಸಿದ್ದರಾಮಯ್ಯ ಅವರ ಬಳಿಯೂ ಇದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಇದೇ ವೇಳೆ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, ಆರೋಪಿಗಳನ್ನು ಎಲ್ಲಿ ಬಚ್ಚಿಟ್ಟಿದ್ದಾರೆ? ತಪ್ಪಿಲ್ಲದಿದ್ದರೆ ಅವರು ಯಾಕೆ ಪರಾರಿಯಾಗಿದ್ದಾರೆ? ಎಂದು ಪ್ರಶ್ನಿಸಿದ್ದಾರೆ. ದಿನಕ್ಕೊಂದು ಹೊಸ ಕಥೆ ಕಟ್ಟಲಾಗುತ್ತಿದೆ ಎಂದು ಕಿಡಿಕಾರಿದರು.

ಇದೇವೇಳೆ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಖರ್ಗೆ ಕುಟುಂಬ ಸಂಚು ರೂಪಿಸಿದೆ ಎಂಬ ಕುಮಾರಸ್ವಾಮಿ ಆರೋಪಕ್ಕೂ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಸಿದ್ದರಾಮಯ್ಯ ತಮ್ಮ ಪಕ್ಷದ ನಾಯಕರು. ಅವರು ಮುಖ್ಯಮಂತ್ರಿ ಆಗುವುದನ್ನು ಖರ್ಗೆ ಅವರು ಬಯಸಿರಲಿಲ್ಲ ಎಂದಾದರೆ ಅದನ್ನು ತಡೆಯಬಹುದಿತ್ತು. ಆದರೆ, ಖರ್ಗೆ ಅವರು ಯಾವತ್ತೂ ಪಕ್ಷದ ಸಿದ್ಧಾಂತ ಮತ್ತು ಪಕ್ಷದ ಪರವಾಗಿ ನಿಂತಿದ್ದಾರೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವುದಕ್ಕೆ ಕುಮಾರಸ್ವಾಮಿ ಅಡ್ಡಿಯಾಗಿದ್ದರು ಈ ಬಗ್ಗೆ ಅವರಿಗೆ ನೆನಪಿಲವೇ? ಎಂದು ತಿರುಗೇತು ನೀಡಿದ್ದಾರೆ.

ಇದೇ ವೇಳೆ ತಂದೆ ಸಿದ್ದರಾಮಯ್ಯ ವಿರುದ್ಧದ ಆರೋಪಗಳಿಗೆ ಸಿಸಿಬಿ ನೀಡಿರುವ ಸ್ಪಷ್ಟನೆ ಕುರಿತು ಪ್ರತಿಕ್ರಿಯಿಸಿರುವ ಸಚಿವ ಯತೀಂದ್ರ ಸಿದ್ದರಾಮಯ್ಯ, ಸ್ಟಿಂಗ್ ಆಪರೇಷನ್ ಕಟ್ಟುಕತೆ ಎಂಬುದನ್ನು ಅದನ್ನು ನಡೆಸಿದವರೇ ಹೇಳಿದ್ದರು ಎಂದು ತಿಳಿಸಿದ್ದಾರೆ. ಮುಸ್ಲಿಂ ಮಹಿಳೆಯೊಬ್ಬರು ಮಾತನಾಡಿರುವ ವಿಡಿಯೋ ನಕಲಿ ಎಂಬ ಮಾತುಗಳೂ ಕೇಳಿಬಂದಿದ್ದವು. ಸ್ಟಿಂಗ್ ಆಪರೇಷನ್ ನಡೆಸಿದವರ ತಪ್ಪಿನಷ್ಟೇ ವಿಡಿಯೋ ಹಂಚಿದವರ ತಪ್ಪೂ ಇದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸಚಿವರು ಸೇರಿದಂತೆ ಈ ಪ್ರಕರಣದಲ್ಲಿ ಯಾರೇ ಶಾಮೀಲಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular