HomeIndiaಹಸಿರು ಪಟಾಕಿ ಬಳಕೆ ಕಡ್ಡಾಯ: ನಿಷೇಧಿತ ಪಟಾಕಿ ಮಾರಾಟ, ಬಳಕೆಗೆ ಕಡಿವಾಣ – ರಾಮಲಿಂಗಾರೆಡ್ಡಿ

ಹಸಿರು ಪಟಾಕಿ ಬಳಕೆ ಕಡ್ಡಾಯ: ನಿಷೇಧಿತ ಪಟಾಕಿ ಮಾರಾಟ, ಬಳಕೆಗೆ ಕಡಿವಾಣ – ರಾಮಲಿಂಗಾರೆಡ್ಡಿ

ಬೆಂಗಳೂರು- ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿಗಳಿಂದ ಉಂಟಾಗುವ ವಾಯುಮಾಲಿನ್ಯ ಮತ್ತು ಪರಿಸರ ಹಾನಿ ತಡೆಗಟ್ಟಲು ಹಸಿರು ಪಟಾಕಿಗಳ ಬಳಕೆಯನ್ನು ಖಾತ್ರಿಪಡಿಸಲಾಗುವುದು. ನಿಷೇಧಿತ ಪಟಾಕಿಗಳನ್ನು ಬಳಸಿದರೆ ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಅರಣ್ಯ, ಪರಿಸರ ಹಾಗೂ ಜೀವಶಾಸ್ತ್ರ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಬೆಂಗಳೂರಿನ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿವರ್ಷದಂತೆ ಈ ಬಾರಿಯೂ ದೀಪಾವಳಿ ಹಬ್ಬ ಬರುತ್ತಿದೆ. ಚಿಕ್ಕಮಕ್ಕಳಿಗೆ ಪಟಾಕಿ ಸಿಡಿಸುವ ಆಸೆ ಇರುತ್ತದೆ. ನಾವೂ ಚಿಕ್ಕವರಿದ್ದಾಗ ಪಟಾಕಿ ಸಿಡಿಸುತ್ತಿದ್ದೆವು. ಆದರೆ ಇತ್ತೀಚಿನ ದಿನಗಳಲ್ಲಿ ಪಟಾಕಿಗಳ ಬಳಕೆ ಹೆಚ್ಚಾಗಿದ್ದು, ಇದರಿಂದ ಪರಿಸರಕ್ಕೆ ಸಾಕಷ್ಟು ಹಾನಿಯಾಗುತ್ತಿದೆ ಎಂದು ಹೇಳಿದರು.

ಪಟಾಕಿಗಳ ತಯಾರಿಕೆಯಲ್ಲಿ ಮೆಟಲ್, ಅಲ್ಯೂಮಿನಿಯಂ ಸೇರಿದಂತೆ ವಿವಿಧ ರಾಸಾಯನಿಕ ವಸ್ತುಗಳನ್ನು ಬಳಸಲಾಗುತ್ತಿದೆ. ಇದರಿಂದ ವಾಯುಮಾಲಿನ್ಯ ಹೆಚ್ಚಾಗುತ್ತಿದೆ. ಕೇಂದ್ರ ಸರ್ಕಾರ ಹಸಿರು ಪಟಾಕಿಗಳ ಬಳಕೆಗೆ ಸೂಚನೆ ನೀಡಿದೆ. ಆದರೆ ಹಸಿರು ಪಟಾಕಿಗಳಿಂದಲೂ ಸುಮಾರು ಶೇ.30ರಷ್ಟು ಮಾತ್ರ ಮಾಲಿನ್ಯವನ್ನು ನಿಯಂತ್ರಿಸಲು ಸಾಧ್ಯ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗಾಗಲೇ ಸುಪ್ರೀಂಕೋರ್ಟ್ ಕೂಡ ಪಟಾಕಿಗಳ ಬಳಕೆಗೆ ಸಂಬಂಧಿಸಿದಂತೆ ಹಲವು ಮಾರ್ಗಸೂಚಿಗಳನ್ನು ರೂಪಿಸಿದೆ. ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸುವುದು ಕಡ್ಡಾಯವಾಗಿದ್ದು, ರಾಜ್ಯದ ಪರಿಸರ ಇಲಾಖೆಯ ವತಿಯಿಂದಲೂ ಅಗತ್ಯ ನಿರ್ಬಂಧಗಳನ್ನು ಜಾರಿಗೊಳಿಸಲಾಗುತ್ತಿದೆ. ಹಸಿರು ಪಟಾಕಿಗಳ ಬಳಕೆಯನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಸಾರ್ವಜನಿಕರಲ್ಲಿ ಕರಪತ್ರ ಹಾಗೂ ಜಾಹೀರಾತುಗಳ ಮೂಲಕ ಜಾಗೃತಿ ಮೂಡಿಸಲಾಗುವುದು. ನಿಷೇಧಿತ ಪಟಾಕಿಗಳನ್ನು ಬಳಸುವುದು ಕಂಡುಬಂದರೆ ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪಟಾಕಿಗಳ ನಿಯಂತ್ರಣ ಮತ್ತು ಜಾಗೃತಿ

ಉದ್ದೇಶಪೂರ್ವಕ ಕೃತ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸ್ಟಿಂಗ್ ಪ್ರಕರಣದಲ್ಲಿ ಕ್ಲೀನ್‌ಚಿಟ್ ದೊರೆತಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಈ ಪ್ರಕರಣವನ್ನು ಉದ್ದೇಶಪೂರ್ವಕವಾಗಿ ಸೃಷ್ಟಿಸಲಾಗಿತ್ತು. ಸಿದ್ದರಾಮಯ್ಯ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಉದ್ದೇಶದಿಂದ ಇಂತಹ ಪ್ರಯತ್ನ ನಡೆಸಲಾಗಿತ್ತು ಎಂದು ಆರೋಪಿಸಿದರು.

ಸಿದ್ದರಾಮಯ್ಯ ಅವರ ವ್ಯಕ್ತಿತ್ವ ಎಂತಹದ್ದು ಎಂಬುದು ಎಲ್ಲರಿಗೂ ಗೊತ್ತಿದೆ. ಇದೀಗ ಆ ಪ್ರಕರಣ ಟುಸ್ ಪಟಾಕಿಯಾಗಿದೆ ಎಂಬುದು ಜನರಿಗೆ ತಿಳಿದಿದೆ. ಸತ್ಯ ಒಂದಲ್ಲ ಒಂದು ದಿನ ಹೊರಬಂದೇ ಬರುತ್ತದೆ. ರಾಜಕೀಯದಲ್ಲಿ ಇಂತಹ ಬೆಳವಣಿಗೆಗಳು ಸರಿಯಲ್ಲ. ವ್ಯಕ್ತಿಗಳ ಹೆಸರಿಗಾಗಲಿ, ಸಂಸ್ಥೆಗಳ ಹೆಸರಿಗಾಗಲಿ ಕಳಂಕ ತರುವ ಉದ್ದೇಶದಿಂದ ಯಾರೂ ಪ್ರಯತ್ನಿಸಬಾರದು ಎಂದು ರಾಮಲಿಂಗಾರೆಡ್ಡಿ ಹೇಳಿದರು

ಸ್ಟಿಂಗ್ ಪ್ರಕರಣ ಮತ್ತು ಶಿಕ್ಷಣ

ರಾಜ್ಯಮಟ್ಟದ ಪಕ್ಷಿ ಗಣತಿ

ರಾಜ್ಯಮಟ್ಟದ ಪಕ್ಷಿ ಗಣತಿ

ರಾಜ್ಯೋತ್ಸವದ ಸಂಭ್ರಮದ ಜೊತೆಗೆ ಪರಿಸರ ಮತ್ತು ಪಕ್ಷಿ ಸಂಪತ್ತಿನ ಮಹತ್ವ ಸಾರುವ ಉದ್ದೇಶದಿಂದ ಅಕ್ಟೋಬರ್ 30ರಿಂದ ನವೆಂಬರ್ 2ರವರೆಗೆ ರಾಜ್ಯಮಟ್ಟದ ಪಕ್ಷಿ ಗಣತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಬರ್ಡ್ ಕೌಂಟ್ ಇಂಡಿಯಾ, ಪಕ್ಷಿ ವೀಕ್ಷಕರ ಗುಂಪುಗಳು, ಸಂಶೋಧನಾ ಹಾಗೂ ಸಂರಕ್ಷಣಾ ಸಂಸ್ಥೆಗಳ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ರಾಜ್ಯದಲ್ಲಿ ಎಷ್ಟು ಪಕ್ಷಿಗಳಿವೆ ಎಂಬುದನ್ನು ನಿಖರವಾಗಿ ಮುಂಚಿತವಾಗಿ ಹೇಳಲು ಸಾಧ್ಯವಿಲ್ಲ. ಪಕ್ಷಿ ಗಣತಿ ಪೂರ್ಣಗೊಂಡ ಬಳಿಕ ಲಭ್ಯವಾಗುವ ಅಂಕಿ-ಅಂಶಗಳ ಆಧಾರದ ಮೇಲೆ ಮಾಹಿತಿ ನೀಡಲಾಗುವುದು. ಈ ಕಾರ್ಯಕ್ರಮದ ಮೂಲಕ ಪಕ್ಷಿಗಳ ವೈವಿಧ್ಯತೆ ಮತ್ತು ಅವುಗಳ ಸಂರಕ್ಷಣೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶವಿದೆ ಎಂದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular