HomeKarnatakaBREAKING : ರಾಜ್ಯ ಸರ್ಕಾರದಿಂದ ಐವರು IAS ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ |Transfer

BREAKING : ರಾಜ್ಯ ಸರ್ಕಾರದಿಂದ ಐವರು IAS ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ |Transfer

ಬೆಂಗಳೂರು: ಕರ್ನಾಟಕ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಐವರು ಐಎಎಸ್ ಅಧಿಕಾರಿಗಳ ವರ್ಗಾವಣೆ ಹಾಗೂ ಹುದ್ದೆ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಅಕ್ಟೋಬರ್ 30, 2026ರಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಈ ಕುರಿತು ಅಧಿಕೃತ ಅಧಿಸೂಚನೆ ಪ್ರಕಟಿಸಿದೆ.

ಅಧಿಸೂಚನೆಯ ಪ್ರಕಾರ, ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾಗಿದ್ದ ಸುರಳ್ಕರ್ ವಿಕಾಸ್ ಕಿಶೋರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ, ಹಿಂದುಳಿದ ವರ್ಗಗಳ ಆಯುಕ್ತರಾಗಿ ನೇಮಕ ಮಾಡಲಾಗಿದೆ.

ಕರ್ನಾಟಕ ಗೃಹ ಮಂಡಳಿಯ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿರುವ ಕೆ.ಎ. ದಯಾನಂದ್ ಅವರನ್ನು ಅದೇ ಹುದ್ದೆಯಲ್ಲಿ ಮುಂದುವರಿಸಲಾಗಿದೆ. ಈ ಹಿಂದೆ ಅಕ್ಟೋಬರ್ 17ರಂದು ಹೊರಡಿಸಿದ್ದ ಅಧಿಸೂಚನೆಗೆ ಭಾಗಶಃ ತಿದ್ದುಪಡಿ ಮಾಡಿ ಈ ಆದೇಶ ಹೊರಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹುದ್ದೆ ನಿರೀಕ್ಷೆಯಲ್ಲಿದ್ದ 2013ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ವೆಂಕಟ್ ರಾಜ್ ಅವರನ್ನು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಪಾಟೀಲ್ ಯಲಗೌಡ ಶಿವನಗೌಡ ಅವರ ಬಳಿ ಇದ್ದ ಹೆಚ್ಚುವರಿ ಪ್ರಭಾರವನ್ನು ಹಿಂಪಡೆಯಲಾಗಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತರಾಗಿದ್ದ ಶಿಲ್ಪಾ ನಾಗ್ ಸಿ.ಟಿ. ಅವರನ್ನು ವರ್ಗಾವಣೆ ಮಾಡಿ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಕೇಂದ್ರ ಸರ್ಕಾರದ ನಿಯೋಜನೆಗೆ ತೆರಳುತ್ತಿರುವ ಡಾ. ರಾಜೇಂದ್ರ ಕೆ.ವಿ. ಅವರ ಸ್ಥಾನಕ್ಕೆ ಇವರನ್ನು ನೇಮಿಸಲಾಗಿದೆ.

ಕಲಬುರಗಿ ನಗರ ಪಾಲಿಕೆ ಆಯುಕ್ತರಾಗಿದ್ದ 2020ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಶಿಂಧೆ ಅವಿನಾಶ್ ಸಂಜೀವನ್ ಅವರನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಇದರ ಜೊತೆಗೆ ಕಲಬುರಗಿಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರ ಹುದ್ದೆಯ ಹೆಚ್ಚುವರಿ ಪ್ರಭಾರವನ್ನೂ ಅವರಿಗೆ ವಹಿಸಲಾಗಿದೆ. ಈ ಹಿಂದೆ ಈ ಜವಾಬ್ದಾರಿ ಹೊಂದಿದ್ದ ರಾಹುಲ್ ಶರಣಪ್ಪ ಸಂಕನೂರು ಅವರಿಂದ ಹೆಚ್ಚುವರಿ ಪ್ರಭಾರವನ್ನು ಹಿಂಪಡೆಯಲಾಗಿದೆ.

ಅಕ್ಟೋಬರ್ 30ರಂದು ಹೊರಡಿಸಿರುವ ಈ ವರ್ಗಾವಣೆ ಆದೇಶಗಳು ತಕ್ಷಣದಿಂದ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಅನ್ವಯವಾಗಲಿವೆ.

 

📄 Official Documents / Supporting Documents

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular