ಡೆಹ್ರಾಡೂನ್: ಉತ್ತರಾಖಂಡದಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಪೈಲಟ್ ಸೇರಿ ಆರು ಜನರು ಸಾವನ್ನಪ್ಪಿದ್ದು, ಅವರಲ್ಲಿ ಐವರು ಬೆಂಗಳೂರು ಮೂಲದವರಾಗಿದ್ದಾರೆ.
ಬೆಂಗಳೂರಿನ ಸಿಸಿಬಿ ಇನ್ಸ್ ಪೆಕ್ಟರ್ ಅರುಣ್ ಸಾಅಲಂಕೆ ಸೇರಿದಂತೆ ಬೆಂಗಳೂರು ಮೂಲದ ಐವರು ಮೃತಪಟ್ಟಿದ್ದಾರೆ. ನಾಲ್ವರು ಸ್ನೇಹಿತರ ಜೊತೆಗೆ ಅರುಣ್ ಸಾಲಂಕೆ ಛಾರ್ ಧಾಮ್ ಯಾತ್ರೆಗೆ ತೆರಳಿದ್ದರು. ಬದರಿನಾಥ ದೇವರ ದರ್ಶನ ಪಡೆದು ಹೆಲಿಕಾಪ್ಟರ್ ನಲ್ಲಿ ಜೊಶಿಮಠದತ್ತ ವಾಪಸ್ ಆಗುತ್ತಿದ್ದಾಗ ಚಮೋಲಿ ಜಿಲ್ಲೆಯ ಬಳಿ ಹೆಲಿಕಾಪ್ಟರ್ ಪತನಗೊಂಡಿದೆ.
ಜೋಶಿಮಠದ ಕಣಿವೆಯತ್ತ ಹೆಲಿಕಾಪ್ಟರ್ ಬರುತ್ತಿದ್ದಂತೆ ವಿಮಾನ ನಾಪತ್ತೆಯಾಗಿದ್ದು, ಸಂಪರ್ಕ ಕಡಿತಗೊಂಡಿದೆ. ಚಮೋಲಿ ಜಿಲ್ಲೆಯಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ. ಪೈಲಟ್ ಸೇರಿ ಬೆಂಗಳೂರಿನ ಐವರು ಸೇರಿದಂತೆ ಒಟ್ಟು ಆರು ಜನರು ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಸಿಸಿಬಿ ಪೊಲೀಸ್ ಇನ್ಸ್‌ಪೆಕ್ಟರ್ ಕೂಡ ಒಬ್ಬರಾಗಿದ್ದಾರೆ. ಪೊಲೀಸ್ ಇನ್ಸ್ಪೆಕ್ಟರ್ ಅರುಣ್ ಸಾಲಂಕಿ ಸಾವನ್ನಪ್ಪಿದ್ದಾರೆ. ಸ್ನೇಹಿತರು ಹಾಗೂ ಕುಟುಂಬಸ್ಥರೊಂದಿಗೆ ಚಾರ್‌ಧಾಮ್ ಪ್ರವಾಸಕ್ಕೆ ತೆರಳಿದ್ದ ಅರುಣ್ ಸಾಲಂಕಿ ದುರಂತದಲ್ಲಿ ಸಾವಿಗೀಡಾಗಿದ್ದಾರೆ. ಮೃತ ಅರುಣ್ ಸಾಲಂಕಿ ಅವರಿಗೆ ಇಬ್ಬರು ಮಕ್ಕಳಿದ್ದಾರೆ ಎಂದು ತಿಳಿದುಬಂದಿದೆ.
ಹೆಲಿಕಾಪ್ಟರ್ ದುರಂತದಲ್ಲಿ ಮಡಿದವರನ್ನು ಪೈಲಟ್ ಹಿಮಾಂಶು ಹಾಗೂ ಅವರ ಜೊತೆಗಿದ್ದ ಬೆಂಗಳೂರು ಮೂಲದ ಇನ್ಸ್ ಪೆಕ್ಟರ್ ಅರುಣ್, ಪ್ರತಾಪ, ಶಂಕರ್ ಗೌಡ, ಸುಧೀರ್, ಕೆ ಹೆಎಸ್ ನಟರಾಜ ಎಂದು ಗುರುತಿಸಲಾಗಿದೆ.
ಇನ್ನೂ ಘಟನೆ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿರುವ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರು, ಜೋಶಿಮಠ ಸಮೀಪದ ಚಾಯೀ ಗ್ರಾಮದ ಬಳಿ ಸಂಭವಿಸಿರುವ ಹೆಲಿಕಾಪ್ಟರ್ ಅಪಘಾತ ನಿಜಕ್ಕೂ ದುರದೃಷ್ಟಕರ. ಈ ಬಗ್ಗೆ ಮಾಹಿತಿ ಬಂದಿದೆ. ಜಿಲ್ಲಾಡಳಿತ, ವಿಪತ್ತು ನಿರ್ವಹಣಾ ಇಲಾಖೆ ಮತ್ತು ಎಸ್‌ಡಿಆರ್‌ಎಫ್ ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ನಾನು ಇಡೀ ಘಟನೆಯನ್ನ ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇನೆ. ಗಂಭೀರವಾಗಿ ಗಾಯಗೊಂಡವರನ್ನ ಉತ್ತಮ ಚಿಕಿತ್ಸೆಗಾಗಿ ತಕ್ಷಣವೇ ಏರ್ ಲಿಫ್ಟ್ ಮಾಡಲು ಸೂಚನೆ ನೀಡಲಾಗಿದೆ. ಪ್ರಯಾಣಿಕರು ಸುರಕ್ಷಿತವಾಗಿ ಮರಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಹೆಲಿಕಾಪ್ಟರ್ ಪತನದಲ್ಲಿ ಸಾವನ್ನಪ್ಪಿದ ಅರುಣ್ ಸಾಲಂಕೆ ಬೆಳಗಾವಿ ಮೂಲದ ಅಥಣಿ ತಾಲೂಕಿನ ಅರಟಾಳ ಮೂಲದವರು 2007ರ ಬ್ಯಾಚ್ ನ ಪೊಲೀಸ್ ಅಧಿಕಾರಿ. ಆರಂಭದಲ್ಲಿ ದೆಹಲಿಯಲ್ಲಿ ಗುಪ್ತಚರ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ್ದರು. ಅರಟಾಳ ಗ್ರಾಮದಲ್ಲಿ ಕುಟುಂಬದವದವರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

