HomeIndiaಬೆಂಗಳೂರಿನಿಂದ ಚೆನ್ನೈಗೆ ಹೊರಟ ರೈಲಿನಲ್ಲಿ ಪವರ್ ಬ್ಯಾಂಕ್ ಸ್ಫೋಟ; ತಪ್ಪಿದ ಭಾರೀ ಅನಾಹುತ

ಬೆಂಗಳೂರಿನಿಂದ ಚೆನ್ನೈಗೆ ಹೊರಟ ರೈಲಿನಲ್ಲಿ ಪವರ್ ಬ್ಯಾಂಕ್ ಸ್ಫೋಟ; ತಪ್ಪಿದ ಭಾರೀ ಅನಾಹುತ

ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್‌ ರೈಲಿನ ಜನರಲ್ ಬೋಗಿಯಲ್ಲಿ ರಾತ್ರಿ 10.40ರ ಸುಮಾರಿಗೆ ಪವರ್ ಬ್ಯಾಂಕ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಸೀಟುಗಳಿಗೂ ವ್ಯಾಪಿಸುತ್ತಿದ್ದಂತೆ ಪ್ರಯಾಣಿಕರು ಆತಂಕದಿಂದ ಕಂಗಾಲಾಗಿದ್ದಾರೆ. ಅದೃಷ್ಟವಶಾತ್, ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ.

ರೈಲುಗಳಲ್ಲಿ ರಾತ್ರಿ ವೇಳೆ ಮೊಬೈಲ್ ಚಾರ್ಜಿಂಗ್ ಮಾಡುವುದನ್ನು ನಿರ್ಬಂಧಿಸಿ ರೈಲ್ವೆ ಇಲಾಖೆ ಮಾರ್ಗಸೂಚಿ ಹೊರಡಿಸಿದ ಕೇವಲ ಎರಡು ದಿನಗಳಲ್ಲೇ ಮತ್ತೊಂದು ಆತಂಕಕಾರಿ ಘಟನೆ ನಡೆದಿದೆ. ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪವರ್ ಬ್ಯಾಂಕ್ ಸ್ಫೋಟಗೊಂಡಿದ್ದು, ರೈಲಿನಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಬೆಂಗಳೂರಿನಿಂದ ಚೆನ್ನೈ ಸೆಂಟ್ರಲ್‌ಗೆ ಹೊರಟಿದ್ದ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ರೈಲು ಕೃಷ್ಣರಾಜಪುರಂ, ಬಂಗಾರಪೇಟೆ, ಕುಪ್ಪಂ ಹಾಗೂ ಜೋಲಾರ್‌ಪೇಟೆ ನಿಲ್ದಾಣಗಳನ್ನು ದಾಟಿ ಕಾಟ್ಪಾಡಿ ರೈಲು ನಿಲ್ದಾಣದ ಸಮೀಪ ತಲುಪಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ರಾತ್ರಿ ಸುಮಾರು 10.40ಕ್ಕೆ ರೈಲಿನ ಜನರಲ್ ಬೋಗಿಯಲ್ಲಿ ಭಾರೀ ಸ್ಫೋಟದ ಸದ್ದು ಕೇಳಿಸಿದೆ. ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ ಫೋನ್‌ಗೆ ಪವರ್ ಬ್ಯಾಂಕ್ ಮೂಲಕ ಚಾರ್ಜ್ ಹಾಕುತ್ತಿದ್ದ ಸಂದರ್ಭದಲ್ಲಿ ಅದು ಏಕಾಏಕಿ ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ.

ಪವರ್ ಬ್ಯಾಂಕ್ ಸ್ಫೋಟದ ತೀವ್ರತೆಗೆ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೋಗಿಯಲ್ಲಿದ್ದ ಸೀಟುಗಳಿಗೂ ವ್ಯಾಪಿಸಿದೆ. ಇದರಿಂದ ರೈಲಿನಲ್ಲಿದ್ದ ಪ್ರಯಾಣಿಕರು ಆತಂಕಗೊಂಡು ಕಿರುಚಾಡಿದ್ದಾರೆ. ಘಟನೆಯಿಂದ ಬೋಗಿಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕಾಟ್ಪಾಡಿ ರೈಲ್ವೆ ನಿಲ್ದಾಣದ ಪೊಲೀಸರು ತಕ್ಷಣ ರೈಲಿನ ಬಳಿಗೆ ಧಾವಿಸಿ ಪರಿಶೀಲನೆ ನಡೆಸಿದರು. ಬಳಿಕ ಬೆಂಕಿಯನ್ನು ನಂದಿಸುವ ಕಾರ್ಯ ಕೈಗೊಂಡರು. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾರಿಗೂ ಯಾವುದೇ ಗಾಯವಾಗಿಲ್ಲ ಅಥವಾ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ರೈಲುಗಳಲ್ಲಿ ರಾತ್ರಿ ವೇಳೆ ಮೊಬೈಲ್ ಚಾರ್ಜಿಂಗ್ ಮಾಡುವುದನ್ನು ನಿರ್ಬಂಧಿಸುವ ಕುರಿತು ರೈಲ್ವೆ ಇಲಾಖೆ ಮಾರ್ಗಸೂಚಿ ಹೊರಡಿಸಿದ ಬೆನ್ನಲ್ಲೇ ಈ ಘಟನೆ ನಡೆದಿರುವುದು ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ. ಪವರ್ ಬ್ಯಾಂಕ್‌ಗಳ ಬಳಕೆ ಹಾಗೂ ಅವುಗಳ ಸುರಕ್ಷತೆಯ ಬಗ್ಗೆಯೂ ಮತ್ತೊಮ್ಮೆ ಚರ್ಚೆ ಆರಂಭವಾಗಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular