HomeKarnatakaಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ವಿವಿಧ ಆರ್ಥಿಕ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ವಿವಿಧ ಆರ್ಥಿಕ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮವು 2026-27 ನೇ ಸಾಲಿಗೆ ವಿವಿಧ ಯೋಜನೆಗಳಡಿ ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಸಲ್ಲಿಸಲು ನ.30 ರಂದು ಕೊನೆಯ ದಿನವಾಗಿದ್ದು, 2023-24, 2024-25 ಮತ್ತು 2025-26 ನೇ ಸಾಲಿನಲ್ಲಿ ಆನ್‌ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿದವರು ಮತ್ತೊಮ್ಮೆ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ವಿವಿಧ ಆರ್ಥಿಕ ಯೋಜನೆಗಳಾದ ನೇರಸಾಲ ಯೋಜನೆ, ಕುರಿ ಸಾಕಾಣಿಕೆ ಯೋಜನೆ, ಬ್ಯಾಂಕ್ ಸಹಾಯದೊಂದಿಗೆ ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ, ಫಾಸ್ಟ್ ಫುಡ್ ಟ್ರಕ್ ಟ್ರೈಲರ್/ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್, ಮೈಕ್ರೋಕ್ರೆಡಿಟ್ ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆ (1 ರಿಂದ 5 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರುಗಳಿಗೆ) ಹಾಗೂ ಭೂ ಒಡೆತನ ಯೋಜನೆಗಳಿಗೆ ಸೇವಾ ಸಿಂಧು https://sevaone.karnataka.gov.in/services/ ಪೋರ್ಟಲ್ ಮೂಲಕ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್, ಕಲ್ಯಾಣ ಮಿತ್ರ ಸಹಾಯವಾಣಿ ಸಂ.:9482300400 ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಜಿಲ್ಲಾ ಪಂಚಾಯತ್ ಕಾರ್ಯಾಲಯ, ಕುವೆಂಪು ರಸ್ತೆ, ಶಿವಮೊಗ್ಗ ಇಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಗ್ರಾಮೀಣ ಜೀವನ ಪರಿಚಯಿಸುವ ಮಹತ್ವಾಕಾಂಕ್ಷಿ ಯೋಜನೆ ;”ಡಿ.ಕೆ. ಶಿವಕುಮಾರ್ ಅವರಿಂದ ಕಾರ್ಯಕ್ರಮಕ್ಕೆ ಚಾಲನೆ

ನಗರ ಪ್ರದೇಶದ ಶಾಲಾ ವಿದ್ಯಾರ್ಥಿಗಳಿಗೆ ಗ್ರಾಮೀಣ ಜೀವನದ ನೈಜ ಅನುಭವ ನೀಡುವ ಮಾನ್ಯ ಮುಖ್ಯಮಂತ್ರಿಗಳ ಮಹತ್ವಾಕಾಂಕ್ಷಿ ಯೋಜನೆಯಾ ‘ಗ್ರಾಮಾನುಭವ’ ಕಾರ್ಯಕ್ರಮಕ್ಕೆ ನವೆಂಬರ್ 01ರ ಕನ್ನಡ ರಾಜ್ಯೋತ್ಸವದಂದು ಅಧಿಕೃತವಾಗಿ ಚಾಲನೆ ದೊರೆಯಲಿದೆ.

​ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು ಈ ಕುರಿತು ಮಾಹಿತಿ ನೀಡಿದ್ದು, ನವೆಂಬರ್ 1 ರಂದು ಬೆಳಿಗ್ಗೆ 8:00 ಗಂಟೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಏಕಕಾಲಕ್ಕೆ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು.

​ಕಾರ್ಯಕ್ರಮದ ಮುಖ್ಯ ಉದ್ದೇಶ ಹಾಗೂ ವೈಶಿಷ್ಟ್ಯಗಳು:

​ಗುರಿ ಹೊಂದಿದ ವಿದ್ಯಾರ್ಥಿಗಳು: ನಗರ ಪ್ರದೇಶದ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 8, 9 ಮತ್ತು 11ನೇ ತರಗತಿಯ ವಿದ್ಯಾರ್ಥಿಗಳಿಗೆ ಈ ಯೋಜನೆಯನ್ನು ತಲುಪಿಸಲಾಗುತ್ತಿದೆ. ​ಪ್ರಾಯೋಗಿಕ ಕಲಿಕೆ: ತರಗತಿಯ ಕಲಿಕೆಯನ್ನು ಗ್ರಾಮೀಣ ಸಮುದಾಯದ ನೈಜ ಜೀವನದೊಂದಿಗೆ ಬೆಸೆಯುವುದು ಇದರ ಪ್ರಮುಖ ಉದ್ದೇಶವಾಗಿದೆ.

​ನೇರ ಅನುಭವ: ಶೈಕ್ಷಣಿಕ ಭೇಟಿಗಳ ಮೂಲಕ ವಿದ್ಯಾರ್ಥಿಗಳು ರೈತರು, ಕುಶಲಕರ್ಮಿಗಳು, ಪಶುಸಂಗೋಪನೆದಾರರು ಹಾಗೂ ಗ್ರಾಮೀಣ ಉದ್ಯಮಿಗಳೊಂದಿಗೆ ನೇರವಾಗಿ ಸಂವಾದ ನಡೆಸಿ ಕಲಿಯಲಿದ್ದಾರೆ.

​ಮೌಲ್ಯವರ್ಧನೆ: ಈ ಕಾರ್ಯಕ್ರಮವು ಮಕ್ಕಳಲ್ಲಿ ಶ್ರಮದ ಘನತೆ, ರೈತರ ಬಗ್ಗೆ ಗೌರವ, ಕೃಷಿ, ಸಾಂಪ್ರದಾಯಿಕ ಜ್ಞಾನ, ಸ್ಥಳೀಯ ಸಂಸ್ಕೃತಿ ಮತ್ತು ಸುಸ್ಥಿರ ಜೀವನಶೈಲಿಯ ಅರಿವನ್ನು ಮೂಡಿಸಲಿದೆ.

​ಕರ್ನಾಟಕದ ಅಭಿವೃದ್ಧಿಯಲ್ಲಿ ಹಳ್ಳಿಗಳ ಪಾತ್ರವನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡುವ ಹಾಗೂ ಕಲಿಕೆಯನ್ನು ಹೆಚ್ಚು ಅನುಭವಾಧಾರಿತ ಮತ್ತು ಅರ್ಥಪೂರ್ಣವಾಗಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular