HomeIndiaಶೂ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಬೆಂಕಿ ಅವಘಡ: ನಾಲ್ವರು ದುರ್ಮರಣ

ಶೂ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಬೆಂಕಿ ಅವಘಡ: ನಾಲ್ವರು ದುರ್ಮರಣ

ನವದೆಹಲಿ: ಶೂ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ದುರಂತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

ಇಲ್ಲಿನ ಮಂಗೋಲ್‌ಪುರಿಯಲ್ಲಿರುವ ಶೂ ಕಾರ್ಖಾನೆಯೊಂದರಲ್ಲಿ ಈ ದುರಂತ ಸಂಭವಿಸಿದೆ. ಅಗ್ನಿ ಅವಘಡದಿಂದ ನಾಲ್ವರು ಸಾವನ್ನಪ್ಪಿದ್ದಾರೆ. ಮಂಗೋಲ್‌ಪುರಿ ಕೈಗಾರಿಕಾ ಪ್ರದೇಶದ (Mangolpuri Industrial Area) ಹಂತ-1ರಲ್ಲಿರುವ ಶೂ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರ್ಖಾನೆಯ ಒಳಗೆ ಪ್ರಜ್ಞಾಹೀನರಾಗಿ ಪತ್ತೆಯಾದ ಗಾಯಾಳುಗಳನ್ನು ತಕ್ಷಣವೇ ಮಂಗೋಲ್‌ಪುರಿಯ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ವೈದ್ಯರು ನಾಲ್ವರು ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದ್ದಾರೆ. ಉಳಿದ ಇಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಕಿ ಅವಘಡದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಬೆಂಕಿಯನ್ನು ಹತೋಟಿಗೆ ತರಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಟ್ಟಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಬೆಂಕಿ ಕಾಣಿಸಿಕೊಂಡಾಗ ಕಾರ್ಖಾನೆಯ ಒಳಗೆ ಸುಮಾರು 20 ರಿಂದ 25 ಮಂದಿ ಇದ್ದರು. ಇವರಲ್ಲಿ 18 ರಿಂದ 19 ಮಂದಿ ಹೊರಬರುವಲ್ಲಿ ಯಶಸ್ವಿಯಾದರು, ಆದರೆ ಆರು ಮಂದಿ ಕಟ್ಟಡದ ಒಳಗೆ ಸಿಲುಕಿಕೊಂಡರು ಎಂದು ತಿಳಿದುಬಂದಿದೆ.

ಗ್ರೌಂಡ್‌ ಫ್ಲೋರ್‌ನಲ್ಲಿ ಹೊತ್ತಿಕೊಂಡ ಬೆಂಕಿ, ಮೂರನೇ ಮಹಡಿಯವರೆಗೂ ವ್ಯಾಪಿಸಿತ್ತು. ಪಾದರಕ್ಷೆ ತಯಾರಿಕೆಯಲ್ಲಿ ಬಳಸಲಾಗುವ ರಾಸಾಯನಿಕಗಳು ಮತ್ತು ಕಚ್ಚಾ ವಸ್ತುಗಳು ಇದ್ದಿದ್ದರಿಂದ ಬೆಂಕಿ ವೇಗವಾಗಿ ಹರಡಿರಬಹುದು ಎಂದು ಶಂಕಿಸಲಾಗಿದೆ. ಸದ್ಯ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ತಹಬದಿಗೆ ತಂದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular