HomeIndiaಆಂಧ್ರಪ್ರದೇಶಕ್ಕೆ ಮತ್ತೊಂದು ಚಂಡಮಾರುತ ಭೀತಿ: ನವೆಂಬರ್ 2ರಂದು ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಆಂಧ್ರಪ್ರದೇಶಕ್ಕೆ ಮತ್ತೊಂದು ಚಂಡಮಾರುತ ಭೀತಿ: ನವೆಂಬರ್ 2ರಂದು ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಅಮರಾವತಿ: ಅರ್ನಬ್ ಚಂಡಮಾರುತದ ಬೆನ್ನಲ್ಲೇ ಇದೀಗ ದಕ್ಷಿಣ ಭಾರತಕ್ಕೆ ಮತ್ತೊಂದು ಚಂಡಮಾರುತದ ಆತಂಕ ಶುರುವಾಗಿದೆ. ಪ್ರಮುಖವಾಗಿ ಆಂಧ್ರಪ್ರದೇಶಕ್ಕೆ ಇನ್ನೊಂದು ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಕಹೆ ಮುನ್ಸೂಚನೆ ನೀಡಿದೆ.

ಅರ್ನಬ್ ಚಂಡಮಾರುತ ಆಂಧ್ರಪ್ರದೇಶದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿತ್ತು. ಈ ಪರಿಸ್ಥಿತಿಯಿಂದ ಸುಧಾರಿಸಿಕೊಳ್ಳುತ್ತಿದ್ದ ಹೊತ್ತಲ್ಲೇ ಇದೀಗ ಮತ್ತೊಂದು ಚಂಡಮಾರುತದ ಎಚ್ಚರಿಕೆ ನೀಡಲಾಗಿದೆ. ಆಂಧ್ರಪ್ರದೇಶದಲ್ಲಿ ನವೆಂಬರ್ 2ರಂದು ವಾಯುಭಾರ ಕುಸಿತವುಂಟಾಗಿ ಚಂಡಮಾರುತ ಬೀಸುವ ಸಾಅಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದ್ದು, ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತದ ಆತಂಕ ಎದುರಾಗಿದೆ. ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಪಶ್ಚಿಮ-ವಾಯವ್ಯ ದಿಕ್ಕಿನತ್ತ ಚಲಿಸುತ್ತಿದ್ದು, ನವೆಂಬರ್ 2ರ ವೇಳೆಗೆ ಆಂಧ್ರಪ್ರದೇಶ ಕರಾವಳಿಯ ಸಮೀಪ ವಾಯುಭಾರ ಕುಸಿತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ದಕ್ಷಿಣ ಅಂಡಮಾನ್ ಸಮುದ್ರ, ಅದಕ್ಕೆ ಹೊಂದಿಕೊಂಡಿರುವ ಉತ್ತರ ಅಂಡಮಾನ್ ಸಮುದ್ರ ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಪಶ್ಚಿಮ-ವಾಯವ್ಯ ದಿಕ್ಕಿನತ್ತ ಚಲಿಸಿ, ಇದೀಗ ಗುರುತಿಸಲ್ಪಟ್ಟ ವಾಯುಭಾರ ಕುಸಿತವಾಗಿ ಬದಲಾಗಿದೆ ಎಂದು ಹೇಳಲಾಗಿದೆ.

ಶನಿವಾರ ಇಂದು ಬೆಳಗ್ಗೆ 5.30ರ ವೇಳೆಗೆ ಈ ಹವಾಮಾನ ವ್ಯವಸ್ಥೆಯು ಆಗ್ನೇಯ ಬಂಗಾಳಕೊಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಸುತ್ತಮುತ್ತಲಿನ ಪ್ರದೇಶ ಹಾಗೂ ಅಂಡಮಾನ್ ಸಮುದ್ರದ ಮೇಲೆ ನೆಲೆಗೊಂಡಿತ್ತು ಎಂದು ಹವಾಮಾನ ಇಲಾಖೆ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಮುಂದಿನ 12 ಗಂಟೆಗಳಲ್ಲಿ ಈ ವಾಯುಭಾರ ಕುಸಿತವು ಅದೇ ಪ್ರದೇಶದಲ್ಲಿ ಪಶ್ಚಿಮ-ವಾಯವ್ಯ ದಿಕ್ಕಿನತ್ತ ಚಲಿಸಿ, ವಾಯುಭಾರ ಕುಸಿತದ ತೀವ್ರ ಸ್ವರೂಪವಾದ ವಾಯುಭಾರ ಕುಸಿತವಾಗಿ ಬದಲಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಈ ಹವಾಮಾನ ವ್ಯವಸ್ಥೆ ಮತ್ತಷ್ಟು ಬಲಗೊಂಡು ನವೆಂಬರ್ 2ರ ವೇಳೆಗೆ ಆಂಧ್ರಪ್ರದೇಶ ಕರಾವಳಿಯತ್ತ ತೀವ್ರಗೊಳ್ಳುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಚಂಡಮಾರುತ ಸಾಧ್ಯತೆ ಇದೆ ಎಂದು ಅಲರ್ಟ್ ಘೋಷಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular