HomeKarnatakaBREAKING: ಪತ್ನಿ ಹಾಗೂ ಇಬ್ಬರ ಮಕ್ಕಳ ಸಾವು ಕಂಡು ಪತಿ ಆಘಾತ: ರೈಲಿಗೆ ತಲೆಕೊಟ್ಟು...

BREAKING: ಪತ್ನಿ ಹಾಗೂ ಇಬ್ಬರ ಮಕ್ಕಳ ಸಾವು ಕಂಡು ಪತಿ ಆಘಾತ: ರೈಲಿಗೆ ತಲೆಕೊಟ್ಟು ಆತ್ಮಹತ್ಯೆ: ರಾಯಚೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ರಾಯಚೂರು: ರಾಯಚೂರಿನ ಮನೆಯೊಂದರಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳು ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದು, ಇದನ್ನು ಕಂಡ ಪತಿ ಕೂಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.

ರಾಯಚೂರುನ ಜಲಾಲನಗರದಲ್ಲಿ ಈ ಘಟನೆ ನಡೆದಿದೆ. ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ರಾತ್ರಿ ಮನೆಯಲ್ಲಿ ತಂದೆ-ತಾಯಿ ಮೂವರು ಮಕ್ಕಳು ಒಂದೇ ಬೆಡ್ ರೂಮ್ ನಲ್ಲಿ ಮಲಗಿದ್ದವರು ಬೆಳಗಾಗುವಷ್ಟರಲ್ಲಿ ತಾಯಿ ಇಬ್ಬರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ವಿಷಯ ತಿಳಿದ ತಂದೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತರನ್ನು ಅರುಣಾ (41), ಮಗ ಶ್ಲೋಕ (8), ಮಗಳು ಖುಷಿ (4) ಹಾಗೂ ಪತಿ ವಿಷ್ಣು ಮಲ್ಲೇಶ್ ಎಂದು ಗುರುತಿಸಲಾಗಿದೆ. ಹಿರಿಯ ಮಗ ಸುಹಾಸ್ ಮಾತ್ರ ಜೀವಂತವಾಗಿ ಬದುಕುಳಿದಿದ್ದಾನೆ.

ನಿನ್ನೆ ರಾತ್ರಿ ಐವರೂ ಒಂದೇ ಬೆಡ್ ರೂಮ್ ನಲ್ಲಿ ಮಲಗಿದ್ದರು. ಹಿರಿಯ ಮಗ ಸುಹಾಸ್ ಮುಂಜಾನೆ ಎದ್ದು ನೋಡಿದಾಗ ಬೆಡ್ ರೂಮ್ ನಲ್ಲಿ ಯಾರೂ ಇರಲಿಲ್ಲ. ಮತ್ತೊಂದು ಬೆಡ್ ರೂಮ್ ಗೆ ಹೋಗಿ ನೋಡಿದಾಗ ತಾಯಿ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿದ್ದರು. ತಕ್ಷಣ ಸುಹಾಸ್ ತಂದೆ ವಿಷ್ಣುಗೆ ಕರೆ ಮಾಡಿದ್ದಾನೆ. ವಿಷ್ಣು ಮನೆಗೆ ಬಂದು ನೋಡಿದಾಗ ತಾಯಿ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿರುವುದು ಕಂಡು ಶಾಕ್ ಆಗಿದ್ದಾರೆ.

ತೀವ್ರವಾಗಿ ಮನನೊಂಡು ಮನೆಯಿಂದ ಹೊರ ಹೋದ ವಿಷ್ಣು ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಾಯಿ ಹಾಗೂ ಇಬ್ಬರು ಮಕ್ಕಳ ಸಾವು ಹಾಗೂ ಪತಿ ಆತ್ಮಹತ್ಯೆ ಹಲವು ಅನುಮಾನಕ್ಕೆ ಕಾರಣವಾಗಿದೆ. ಒಂದೇ ಕುಟುಂಬದ ನಾಲ್ವರ ಸಾವಿಗೆ ನಿಖರ ಕಾರಣ ಪೊಲೀಸ್ ತನಿಖೆ ಬಳಿಕವೇ ಗೊತ್ತಾಗಬೇಕಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular