HomeIndiaರೈಲು ಸಂಪರ್ಕ ವ್ಯವಸ್ಥೆಗೆ ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಮಹತ್ವದ ಕೊಡುಗೆ, ಗೇಮ್ ಚೇಂಜರ್:...

ರೈಲು ಸಂಪರ್ಕ ವ್ಯವಸ್ಥೆಗೆ ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಮಹತ್ವದ ಕೊಡುಗೆ, ಗೇಮ್ ಚೇಂಜರ್: ಪ್ರಧಾನಿ ಮೋದಿ

ನವದೆಹಲಿ: ರೈಲು ಸಂಪರ್ಕ ವ್ಯವಸ್ಥೆಗೆ ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಒಂದು ಪ್ರಮುಖ ಉತ್ತೇಜನವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ.

ಬೆಂಗಳೂರು ಮತ್ತು ಮುಂಬೈ ನಡುವಿನ ಸಂಪರ್ಕಕ್ಕೆ ಈ ವಂದೇ ಭಾರತ್ ಸ್ಲೀಪರ್ ರೈಲು ಮತ್ತೊಂದು ಮಹತ್ವದ ಕೊಡುಗೆಯಾಗಿದ್ದು, ಇದು ಪ್ರಯಾಣವನ್ನು ಹೆಚ್ಚು ಅನುಕೂಲಕರವಾಗಿಸುವುದಲ್ಲದೆ, ರಾಜ್ಯಗಳ ನಡುವಿನ ಸಂಪರ್ಕವನ್ನೂ ಬಲಪಡಿಸುತ್ತದೆ ಎಂದು ಹೇಳಿದ್ದಾರೆ. ಈ ಸೇವೆಯು ಕರ್ನಾಟಕ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದ ಜನರಿಗೆ, ವಿಶೇಷವಾಗಿ ಯುವಕರು, ಐಟಿ ವೃತ್ತಿಪರರು ಮತ್ತು ವಿದ್ಯಾರ್ಥಿಗಳಿಗೆ ಪ್ರಯೋಜನಕಾರಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಉತ್ತಮ ರೈಲು ಸಂಪರ್ಕದತ್ತ ಮತ್ತೊಂದು ಹೆಜ್ಜೆ; ಅದೂ ತಂತ್ರಜ್ಞಾನ ಮತ್ತು ನಾವೀನ್ಯತೆಯ ನಗರವಾದ ಬೆಂಗಳೂರಿನಿಂದ!

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ಮತ್ತು ಮುಂಬೈ ನಡುವಿನ ಸಂಪರ್ಕ ವ್ಯವಸ್ಥೆಯಲ್ಲಿ ‘ವಂದೇ ಭಾರತ್ ಸ್ಲೀಪರ್ ರೈಲು’ ಒಂದು ಮಹತ್ವದ ಬದಲಾವಣೆಯನ್ನು (ಗೇಮ್ ಚೇಂಜರ್) ತರಲಿದೆ.

ಈ ರೈಲು ಕರ್ನಾಟಕ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರಗಳಿಗೆ ಅನುಕೂಲ ಕಲ್ಪಿಸಲಿದ್ದು, ವಿಶೇಷವಾಗಿ ಯುವಕರು, ಐಟಿ ವೃತ್ತಿಪರರು ಮತ್ತು ವಿದ್ಯಾರ್ಥಿಗಳಿಗೆ ಹೆಚ್ಚು ಪ್ರಯೋಜನಕಾರಿಯಾಗಲಿದೆ ಎಂದು ಪ್ರಧಾನಿಯವರು ‘ಎಕ್ಸ್’ (X) ನಲ್ಲಿ ಪೋಸ್ಟ್ ಮಾಡಿದ್ದಾರೆ:

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಚಾಲನೆ

ಬೆಂಗಳೂರು: ರಾಜ್ಯದ ರೈಲು ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಕನ್ನಡ ರಾಜ್ಯೋತ್ಸವದ ದಿನದಂದು ಬಂಪರ್ ಗಿಫ್ಟ್ ನೀಡಿದೆ. ಬೆಂಗಳೂರು ಮತ್ತು ಮುಂಬೈ ನಡುವೆ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಚಾಲನೆ ನೀಡಲಾಗಿದೆ. ಇದರ ಬೆನ್ನಲ್ಲೇ, ರಾಜ್ಯಕ್ಕೆ ಮತ್ತೊಂದು ಹೊಸ ವಂದೇ ಭಾರತ್ ರೈಲು ಘೋಷಿಸಲಾಗಿದೆ.

ಬೆಂಗಳೂರಿನ ಸಂಗೊಳ್ಳಿರಾಯಣ್ಣ ರೈಲು ನಿಲ್ದಾಣದಲ್ಲಿ ಕೇದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ, ಪ್ರಲ್ಹಾದ್ ಜೋಶಿ, ವಿಸೋಮಣ್ಣ, ಶೋಭಾ ಕರಂದ್ಲಾಜೆ ಅವರೊಂದಿಗೆ ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಚಾಲನೆ ನೀಡಿದರು.

ಈ ವೇಳೆ ಮಾತನಡಿದ ಸಚಿವ ಅಶ್ವಿನಿ ವೈಷ್ಣವ್, ಹುಬ್ಬಳ್ಳಿ ಮೂಲಕ ಸಂಚರಿಸುವ ಮತ್ತೊಂದು ವಂದೇ ಭಾರತ್ ಸ್ಲೀಪರ್ ರೈಲನ್ನು ಘೋಷಿಸಿದರು. ಇದರೊಂದಿಗೆ ಉತ್ತರ ಕರ್ನಾಟಕದ ಪ್ರಯಾಣಿಕರಿಗೂ ವೇಗದ ರೈಲು ಸಂಪರ್ಕ ಸಿಗುವ ನಿರೀಕ್ಷೆಯಿದೆ.

ಇದೇ ಸಂದರ್ಭದಲ್ಲಿ ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಚೇರ್ ಕಾರ್ ರೈಲನ್ನು ಕೆಲವೇ ವಾರಗಳಲ್ಲಿ ಆರಂಭಿಸುವುದಾಗಿಯೂ ತಿಳಿಸಿದ್ದಾರೆ. ಅಲ್ಲದೆ, ಬೆಂಗಳೂರು-ಪುಣೆ ಬುಲೆಟ್ ರೈಲು ಕಾರಿಡಾರ್ ಸೇರಿದಂತೆ ದಕ್ಷಿಣ ಭಾರತದ ಭವಿಷ್ಯದ ಹೈಸ್ಪೀಡ್ ರೈಲು ಸಂಪರ್ಕದ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

ಹುಬ್ಬಳ್ಳಿ ಮೂಲಕ ಎರಡನೇ ಬೆಂಗಳೂರು-ಮುಂಬೈ ಸ್ಲೀಪರ್ ರೈಲು:

ಬೆಂಗಳೂರು ಮತ್ತು ಮುಂಬೈ ನಡುವಿನ ಎರಡನೇ ವಂದೇ ಭಾರತ್ ಸ್ಲೀಪರ್ ರೈಲು ಹುಬ್ಬಳ್ಳಿ ಮೂಲಕ ಸಂಚರಿಸಲಿದೆ. ಈ ರೈಲು ಬೆಂಗಳೂರಿನಿಂದ ಹೊರಟು ಉತ್ತರ ಕರ್ನಾಟಕದ ಪ್ರಮುಖ ಪ್ರದೇಶಗಳನ್ನು ಸಂಪರ್ಕಿಸಿ, ಪುಣೆ ಮೂಲಕ ಮುಂಬೈ ತಲುಪುವ ಯೋಜನೆ ಇದೆ ಎಂದು ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಈ ಮಾರ್ಗದಿಂದ ಹುಬ್ಬಳ್ಳಿ ಸೇರಿದಂತೆ ಉತ್ತರ ಕರ್ನಾಟಕದ ಪ್ರಯಾಣಿಕರಿಗೆ ಮುಂಬೈ ಮತ್ತು ಪುಣೆಗೆ ತೆರಳಲು ಅನುಕೂಲವಾಗಲಿದೆ. ಈಗಾಗಲೇ ಮೊದಲ ಸ್ಲೀಪರ್ ರೈಲು ಕಲಬುರಗಿ ಮಾರ್ಗವಾಗಿ ಸಂಚರಿಸುವಂತೆ ಯೋಜಿಸಲಾಗಿದ್ದು, ಎರಡನೇ ರೈಲು ಬೇರೆ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ಉದ್ದೇಶ ಹೊಂದಿದೆ.

ಸ್ಲೀಪರ್ ರೈಲಿನ ವೈಷಿಷ್ಟ್ಯ:

ಈ ರೈಲು ಸಾಮಾನ್ಯ ಹಗಲು ಪ್ರಯಾಣದ ರೈಲುಗಳಿಗಿಂತ ಭಿನ್ನವಾಗಿ ರಾತ್ರಿ ಪ್ರಯಾಣಕ್ಕೆ ಅನುಕೂಲವಾಗುವಂತೆ ವಿನ್ಯಾಸಗೊಳಿಸಲಾಗಿದೆ. – ಒಟ್ಟು 16 ಸಂಪೂರ್ಣ ಹವಾನಿಯಂತ್ರಿತ ಬೋಗಿಗಳು. – ಸುಮಾರು 823 ಪ್ರಯಾಣಿಕರಿಗೆ ಮಲಗುವ ವ್ಯವಸ್ಥೆ. – ಬೆಂಗಳೂರು-ಮುಂಬೈ ನಡುವಿನ ಸುಮಾರು 1,118 ಕಿ.ಮೀ. ಪ್ರಯಾಣ. – ಪ್ರಯಾಣದ ಅವಧಿ ಸುಮಾರು 16 ಗಂಟೆಗಳು.  ವಾರದಲ್ಲಿ ಆರು ದಿನ ಸಂಚಾರ. 3AC, 2AC ಮತ್ತು ಫಸ್ಟ್ ಎಸಿ ವಿಭಾಗಗಳ ವ್ಯವಸ್ಥೆ. ಈ ರೈಲಿನಿಂದ ಈಗಿನ ರೈಲು ಪ್ರಯಾಣಕ್ಕೆ ಹೋಲಿಸಿದರೆ ಸುಮಾರು 6ರಿಂದ 8 ಗಂಟೆಗಳವರೆಗೆ ಸಮಯ ಉಳಿತಾಯವಾಗುವ ನಿರೀಕ್ಷೆಯಿದೆ. ನಿಯಮಿತ ವಾಣಿಜ್ಯ ಸೇವೆ ನವೆಂಬರ್ 3ರಿಂದ ಆರಂಭವಾಗಲಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular