HomeKarnatakaಸ್ಟಿಂಗ್ ಆಪರೇಷನ್ ಪ್ರಕರಣ: ಕೃಪಾ ಆಳ್ವಾ ಸೇರಿ ಮೂವರಿಗೆ ಮಧ್ಯಂತರ ಜಾಮೀನು ಮಂಜೂರು

ಸ್ಟಿಂಗ್ ಆಪರೇಷನ್ ಪ್ರಕರಣ: ಕೃಪಾ ಆಳ್ವಾ ಸೇರಿ ಮೂವರಿಗೆ ಮಧ್ಯಂತರ ಜಾಮೀನು ಮಂಜೂರು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಪ್ರಮುಖವಾಗಿ ಕೇಳಿಬಂದ ವ್ಯಕ್ತಿಗೆ ಜಾಮೀನು ಮಂಝೂರು ಮಾಡಲಾಗಿದೆ.

ಸ್ಟಿಂಗ್ ಆಪರೇಷನ್ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ, ಕಾಂಗ್ರೆಸ್​​​ನಿಂದ ಅಮಾನತುಗೊಂಡಿರುವ ಕೃಪಾ ಆಳ್ವಾ ಸೇರಿದಂತೆ ಮೂವರಿಗೆ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೃಪಾ ಆಳ್ವಾ, ವಿನೋದ್ ಕುಮಾರ್ ಹಾಗೂ ಪ್ರಶಾಂತ್ ಕುಮಾರ್ ಸೇರಿ ಮೂವರಿಗೆ ಬೆಂಗಳೂರಿನ 66ನೇ ಸಿಸಿಹೆಚ್ ಕೋರ್ಟ್​ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಸ್ಟಿಂಗ್ ಆಪರೇಷನ್ ಗೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯನವರು ದೂರು ನೀಡಿದ್ದರು. ಈ ದೂರಿನ ಅನ್ವಯ ಸಿಸಿಬಿ ಪೊಲೀಸರು, ಕೃಪಾ ಆಳ್ವಾ, ವಿನೋದ್ ಕುಮಾರ್ ಹಾಗೂ ಪ್ರಶಾಂತ್ ಕುಮಾರ್ ಸೇರಿದಂತೆ ಹಲವರನ್ನು ವಿಚಾರಣೆಗೊಳಪಡಿಸಿ ಕೆಲ ಮಾಹಿತಿಯನ್ನು ಕಲೆ ಹಾಕಿದ್ದಾರೆ. ಆದರೆ ಬಂಧನದ ಭೀತಿ ಹಿನ್ನೆಲೆಯಲ್ಲಿದ್ದ ಮೂವರು ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದರು.

ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ಸಮ್ಮತಿಸಿದ್ದು,ಪೊಲೀಸರ ತನಿಖೆಗೆ ಸಹಕರಿಸಬೇಕು ಹಾಗೇ ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದೆ.

ಇದೇ ಪ್ರಕರಣದಲ್ಲಿ ಅಕ್ಟೋಬರ್ 23ರಂದು ಖಾಸಗಿ ಸುದ್ದಿವಾಹಿನಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ ಅವರಿಗೆ ಬೆಂಗಳೂರಿನ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿತ್ತು. ಇನ್ನು ಈ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು, ಈ ಮೂವರನ್ನು ವಿಚಾರಣೆ ನಡೆಸಿದ್ದರು. ಆದ್ರೆ, ಬಂಧನದ ಭೀತಿ ಹಿನ್ನೆಲೆಯಲ್ಲಿ ವಿಚಾರಣೆಗೊಳಲಾಗಿದ್ದ ಕೃಪಾ ಆಳ್ವಾ, ವಿನೋದ್ ಕುಮಾರ್ ಹಾಗೂ ಪ್ರಶಾಂತ್ ಕುಮಾರ್ ಅವರು ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಮೂವರಿಗೂ ಷರತ್ತುಬದ್ಧ ಜಾಮೀನು ನೀಡಿದೆ.

ಇನ್ನು ಸ್ಟಿಂಗ್ ಆಪರೇಷನ್ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯನವರು ಬಹಿರಂಗವಾಗಿಯೇ ಕೃಪಾ ಆಳ್ವಾರ ಹೆಸರು ಹೇಳಿದ್ದರು. ಇದರ ಬೆನ್ನಲ್ಲೇ ಕೃಪಾ ಆಳ್ವಾ ಖುದ್ದಾಗಿ ಸಿಸಿಬಿ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಿದ್ದರು. ಬಳಿಕ ಅವರು ಏಕಾಏಕಿ ವಿದೇಶಕ್ಕೆ ಹಾರಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular