HomeKarnatakaರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ದೀಪಾವಳಿ ಹಬ್ಬಕ್ಕೆ ವಿಶೇಷ ರೈಲು ಸಂಚಾರ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ದೀಪಾವಳಿ ಹಬ್ಬಕ್ಕೆ ವಿಶೇಷ ರೈಲು ಸಂಚಾರ

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿಗೆ ದಿನಗಣನೆ ಆರಂಭವಾಗಿದೆ. ಹಬ್ಬಕ್ಕಾಗಿ ಬೆಂಗಳೂರಿನಿಂದ ಊರುಗಳಿಗೆ ಹೋಗುವ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲು ಹಾಗೂ ಸಂಚಾರ ದಟ್ಟಣೆ ಕಡಿಮೆ ಮಾಡಲು ರೈಲ್ವೆ ಇಲಾಖೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಿದೆ.

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು ಕಂಟೋನ್ಮೆಂಟ್ ಮತ್ತು ತಿರುವನಂತಪುರಂ ನಾರ್ತ್ ನಡುವೆ ವಿಶೇಷ ರೈಲು ಬಿಡಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು – ತಿರುವನಂತಪುರ ವಿಶೇಷ ರೈಲು ಟೈಮಿಂಗ್ಸ್ – ರೈಲು ಸಂಖ್ಯೆ 06575 ಶುಕ್ರವಾರ ಸಂಜೆ 4.40ಕ್ಕೆ ಬೆಂಗಳೂರು ಕಂಟೋನ್ಮೆಂಟ್‌ನಿಂದ ಹೊರಟು, ಮರುದಿನ ಬೆಳಗ್ಗೆ 10.30ಕ್ಕೆ ತಿರುವನಂತಪುರಂ ನಾರ್ತ್ ತಲುಪಲಿದೆ.

ಹಿಂತಿರುಗುವ ರೈಲು ಸಂಖ್ಯೆ 06576 ಶನಿವಾರ ಮಧ್ಯಾಹ್ನ 12.40ಕ್ಕೆ ತಿರುವನಂತಪುರಂ ನಾರ್ತ್‌ನಿಂದ ಹೊರಟು, ಭಾನುವಾರ ಬೆಳಗ್ಗೆ 6 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.

ರೈಲು ಸಂಚಾರದಲ್ಲಿ ಬದಲಾವಣೆ ಇರುವುದರಿಂದ ಪ್ರಯಾಣಿಕರು ತಮ್ಮ ಪ್ರಯಾಣ ಆರಂಭಿಸುವ ಮೊದಲು ರೈಲಿನ ವೇಳಾಪಟ್ಟಿ ಮತ್ತು ಸಂಚಾರ ಸ್ಥಿತಿಯನ್ನು ಪರಿಶೀಲಿಸಿಕೊಳ್ಳುವುದು ಸೂಕ್ತ ಎಂದು ರೈಲ್ವೆ ಇಲಾಖೆಯ ಪ್ರಕಟಣೆ ತಿಳಿಸಿದೆ.

ಪ್ರಯಾಣಿಕರ ಗಮನಕ್ಕೆ: ಬೆಂಗಳೂರು- ಅನಂತಪುರ- ಹೌರಾ ರೈಲು ಸಂಚಾರ ದಿಢೀರ್ ರದ್ದು

ಬೆಂಗಳೂರು: ರೈಲು ಹಳಿ ನವೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಇಂದು (ನವೆಂಬರ್ 3ರಂದು) ಅನಂತಪುರ ಮೆಮು ರೈಲುಗಳ ಸಂಚಾರದಲ್ಲಿ ಬದಲಾವಣೆಯಾಗಿದೆ. ಈ ಬಗ್ಗೆ ರೈಲ್ವೆ ಇಲಕಹೆ ಮಾಹಿತಿ ನೀಡಿದೆ.

ರೈಲ್ವೆ ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್ ರದ್ದಾಗಿದೆ. ರೈಲು ಹಳಿ ನವೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ನವೆಂಬರ್ 3ರಂದು ಬೆಂಗಳೂರು-ಅನಂತಪುರ ಮೆಮು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಇದರ ಜೊತೆಗೆ, ಎಸ್‌ಎಂವಿಟಿ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಸಂಚಾರ ರದ್ದುಗೊಳಿಸಲಾಗಿದೆ.

ಇನ್ನು ಬೆಂಗಳೂರು-ಅನಂತಪುರ ಮೆಮು ರೈಲು ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಪೆನುಕೊಂಡ ಮತ್ತು ರಂಗೇಪಲ್ಲಿ ನಡುವಿನ ರೈಲು ಹಳಿ ನವೀಕರಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ರೈಲು ಸಂಖ್ಯೆ 66559 ಕೆಎಸ್‌ಆರ್ ಬೆಂಗಳೂರು-ಅನಂತಪುರ ಮೆಮು ರೈಲನ್ನು ಮಂಗಳವಾರ ಹಿಂದೂಪುರದಿಂದ ಅನಂತಪುರದವರೆಗಿನ ಮಾರ್ಗದಲ್ಲಿ ರದ್ದುಗೊಳಿಸಲಾಗಿದೆ.

ರೈಲು ಸಂಖ್ಯೆ 66560 ಅನಂತಪುರ-ಕೆಎಸ್‌ಆರ್ ಬೆಂಗಳೂರು ಮೆಮು ರೈಲನ್ನು ಅನಂತಪುರದಿಂದ ಹಿಂದೂಪುರದವರೆಗೆ ರದ್ದುಗೊಳಿಸಲಾಗಿದೆ.

ಅದೇ ರೀತಿ ರೈಲು ಸಂಖ್ಯೆ 12864 ಎಸ್‌ಎಂವಿಟಿ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ ಸಂಚಾರವನ್ನೂ ನವೆಂಬರ್ 3ರಂದು ರದ್ದುಗೊಳಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular