HomeKarnatakaಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ 43 ಗ್ರಾಮ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ 43 ಗ್ರಾಮ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ 43 ಗ್ರಾಮ ಒನ್ ಕೇಂದ್ರಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ‘ಗ್ರಾಮ ಒನ್’ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಗ್ರಾಮೀಣ ಭಾಗದ ಜನರಿಗೆ ಸರ್ಕಾರದ ಹಲವಾರು ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ.

ಈ ನಿಟ್ಟಿನಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಸರ್ಕಾರದ ನೂತನ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.ಅರ್ಜಿ ಸಲ್ಲಿಸಲು ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಅಧಿಕೃತ ವೆಬ್‌ಸೈಟ್ https://Sevaone.karnataka.gov.in/services/login ನಲ್ಲಿ ಆನ್‌ಲೈನ್ ಮೂಲಕ ಮಾತ್ರವೇ ಸಲ್ಲಿಸತಕ್ಕದ್ದು. ಬೇರೆ ಯಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಆನ್‌ಲೈನ್ ಅರ್ಜಿ ಸಲ್ಲಿಸಲು 2026ರ ನವೆಂಬರ್ 15 ಕೊನೆಯ ದಿನಾಂಕವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆ.ಐ.ಸಿ.ಎಂ ನಲ್ಲಿ ‘ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್’ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಹಾಗೂ ಶಿವಮೊಗ್ಗದ 2ನೇ ಹಂತದ ವಿನೋಬನಗರದಲ್ಲಿರುವ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ (ಕೆ.ಐ.ಸಿ.ಎಮ್) ಸಂಸ್ಥೆಯ ವತಿಯಿಂದ 6 ತಿಂಗಳ ಅವಧಿಯ ‘ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್’ ತರಬೇತಿಯು ನವೆಂಬರ್ 14 ರಿಂದ ಪ್ರಾರಂಭವಾಗಲಿದೆ.

ಈ ಕೋರ್ಸ್‌ಗೆ ಬಿ.ಕಾಂ, ಬಿ.ಬಿ.ಎಂ ಅಥವಾ ಲೆಕ್ಕಶಾಸ್ತ್ರವನ್ನು ಐಚ್ಛಿಕ ವಿಷಯವನ್ನಾಗಿ ಒಳಗೊಂಡ ಇತರ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಸಾಮಾನ್ಯ ಅಭ್ಯರ್ಥಿಗಳಿಗೆ ಪ್ರವೇಶ ಶುಲ್ಕ ರೂ.9,500/- ಇದ್ದು, ಬಿಪಿಎಲ್ ಹಾಗೂ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರಲಿದೆ.

ಈ ತರಬೇತಿಯಲ್ಲಿ ಸಹಕಾರ ಕ್ಷೇತ್ರ ಮತ್ತು ಲೆಕ್ಕ ಪತ್ರ ನಿರ್ವಹಣೆಯ ಜ್ಞಾನ, ಲೆಕ್ಕ ಪರಿಶೋಧನೆ, ಟ್ಯಾಲಿ ಹಾಗೂ ಡಿಜಿಟಲ್ ಅಕೌಂಟಿಂಗ್ ಕೌಶಲ್ಯಗಳನ್ನು ಕಲಿಸಲಾಗುತ್ತದೆ. ಇದು ಸಹಕಾರ ಸಂಘ/ಸಂಸ್ಥೆಗಳಲ್ಲಿ ಹಾಗೂ ಖಾಸಗಿ ರಂಗದಲ್ಲಿ ಉದ್ಯೋಗ ಮತ್ತು ಸ್ವಯಂ ಉದ್ಯೋಗ ಕಂಡುಕೊಳ್ಳಲು ಸಹಕಾರಿಯಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್ 13 ಕೊನೆಯ ದಿನಾಂಕವಾಗಿದೆ. ಆನ್‌ಲೈನ್ ಮೂಲಕ https://dca.kscfl.in ಲಿಂಕ್ ಬಳಸಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9449075746, 8310554752, 9845068191, ಅಥವಾ 7026246493 ಅನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಾಂಶುಪಾಲರು ತಿಳಿಸಿದ್ದಾರೆ.

ಲಿಡ್ಕರ್: ವಿವಿಧ ಯೋಜನೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ

ಡಾ. ಬಾಬು ಜನಜೀವನ ರಾಮ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ವತಿಯಿಂದ ಪರಿಶಿಷ್ಟ ಜಾತಿ ಆದಿ ಕರ್ನಾಟಕ, ಆದಿ ಮಾದಿಗ, ಚಮ್ಮಾರ, ಡೋರ, ಸಮಗಾರ ಮೋಚಿ ಜನಾಂಗದವರಿಗೆ 2025-26ನೇ ಸಾಲಿನ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಸ್ವಾವಲಂಬಿ/ ಸಂಚಾರಿ ಮಾರಾಟ ಮಳಿಗೆ, ನೇರ ಸಾಲ ಯೋಜನೆ, ಚರ್ಮಶಿಲ್ಪಿ ಯೋಜನೆ, ಮಹಿಳಾ ಕುಶಲಕರ್ಮಿಗಳಿಗೆ ಕಾಯಕ ಸ್ಪೂರ್ತಿ ಯೋಜನೆ, ಪಾದುಕೆ ಕುಟೀರ ಯೋಜನೆ, ಮಾರುಕಟ್ಟೆ ಸಹಾಯ ಯೋಜನೆ, ವಸತಿ ಯೋಜನೆ ಹಾಗೂ ಕೌಶಲ ಅಭಿವೃದ್ಧಿ ಮತ್ತು ಆದಾಯ ಗಳಿಕೆ ತರಬೇತಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್ ಲಿಂಕ್ ಮೂಲಕ ನ.28 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.:9380501076 ನ್ನು ಸಂಪರ್ಕಿಸುವಂತೆ ಲಿಡ್ಕರ್ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular