ಬೆಂಗಳೂರು: ರಾಜ್ಯದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಬಾಕಿ ಉಳಿದಿದ್ದ ಮೂರು ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಒಟ್ಟಿಗೆ ಬಿಡುಗಡೆ ಮಾಡಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆದೇಶಿಸಿದ್ದಾರೆ. 34, 35 ಮತ್ತು 36ನೇ ಕಂತುಗಳ ಒಟ್ಟು 6 ಸಾವಿರ ರೂಪಾಯಿಗಳನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲು ಕ್ರಮ ಕೈಗೊಳ್ಳಲಾಗಿದೆ.
ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಯರಿಗೆ ಪ್ರತಿ ತಿಂಗಳು 2,000 ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತಿದೆ. ಆದರೆ ಕಳೆದ ಕೆಲವು ತಿಂಗಳಿಂದ ಹಲವು ಫಲಾನುಭವಿಗಳಿಗೆ ಹಣ ಜಮೆಯಾಗದೆ ಬಾಕಿ ಉಳಿದಿತ್ತು. ಇದರಿಂದಾಗಿ ಮಹಿಳೆಯರು ಮುಂದಿನ ಕಂತಿನ ಹಣಕ್ಕಾಗಿ ಕಾಯುತ್ತಿದ್ದರು. ಇದೀಗ ಮೂರು ಕಂತುಗಳ ಹಣವನ್ನು ಒಟ್ಟಿಗೆ ಬಿಡುಗಡೆ ಮಾಡಲು ಸರ್ಕಾರ ನಿರ್ಧರಿಸಿರುವುದು ಫಲಾನುಭವಿಗಳಲ್ಲಿ ಸಂತಸ ಮೂಡಿಸಿದೆ.
₹7,405.86 ಕೋಟಿ ಬಿಡುಗಡೆಗೆ ಆದೇಶ
ಮಾಹಿತಿ ಪ್ರಕಾರ, ಗೃಹಲಕ್ಷ್ಮಿ ಯೋಜನೆಯಡಿ 34, 35 ಮತ್ತು 36ನೇ ಕಂತುಗಳಿಗೆ ಸಂಬಂಧಿಸಿದಂತೆ ಒಟ್ಟು 7,405.86 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲು ಆದೇಶಿಸಲಾಗಿದೆ. ಮೂರು ಕಂತುಗಳ ಹಣ ಬಿಡುಗಡೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ. ಪ್ರತಿ ಫಲಾನುಭವಿಗೆ ಮೂರು ತಿಂಗಳ ತಲಾ 2,000 ರೂಪಾಯಿಗಳಂತೆ ಒಟ್ಟು 6,000 ರೂಪಾಯಿ ದೊರೆಯಲಿದೆ.
ಇಲ್ಲಿಯವರೆಗೆ ರಾಜ್ಯ ಸರ್ಕಾರ 33 ಕಂತಿನವರೆಗೆ ಹಣವನ್ನು ಪಾವತಿ ಮಾಡಿತ್ತು. ಇದೀಗ 34, 35 ಮತ್ತು 36ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದೆ. ಅಕ್ಟೋಬರ್ ವರೆಗೆ ರಾಜ್ಯದ 1.24 ಕೋಟಿ ಮಹಿಳೆಯರಿಗೆ ಇದರ ಲಾಭ ಆಗಿದೆ. ಇಲ್ಲಿಯವರೆಗೆ ಸರ್ಕಾರ ಈ ಯೋಜನೆಗಾಗಿ ಬರೋಬ್ಬರಿ 86,838.36 ಕೋಟಿ ರೂಪಾಯಿ ಹಣ ವಿನಿಯೋಗಿಸಿದೆ. ಅಂದರೆ ಪ್ರತಿ ಮನೆಯ ಯಜಮಾನಿಗೆ ತಲಾ 72,000 ರೂಪಾಯಿ ಹಣ ಜಮೆ ಆಗಿದೆ. ಈಗ 34ನೇ ಕಂತಿನ 2500 ಕೋಟಿ ರೂ., 35ನೇ ಕಂತಿನ 2452.93 ಕೋಟಿ ರೂ. ಮತ್ತು 36ನೇ ಕಂತಿನ 2452.93 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿದೆ.
ಮಹಿಳೆಯರ ಖಾತೆಗೆ ಒಟ್ಟಿಗೆ ಹಣ ಜಮೆ
ಈವರೆಗೆ ಗೃಹಲಕ್ಷ್ಮಿ ಯೋಜನೆಯಡಿ 33 ಕಂತುಗಳ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ಇದೀಗ 34, 35 ಮತ್ತು 36ನೇ ಕಂತುಗಳ ಹಣವನ್ನು ಒಟ್ಟಿಗೆ ಜಮೆ ಮಾಡಲು ಸರ್ಕಾರ ಮುಂದಾಗಿದೆ. ಹಣ ಬಿಡುಗಡೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಲಿದೆ.
ದೀಪಾವಳಿ ಸಂದರ್ಭದಲ್ಲಿ ಮಹಿಳೆಯರಿಗೆ ನೆರವು
ರಾಜ್ಯ ಸರ್ಕಾರದ ಪ್ರಮುಖ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯೂ ಒಂದಾಗಿದೆ. ಕುಟುಂಬದ ಮಹಿಳಾ ಯಜಮಾನಿಯರಿಗೆ ಪ್ರತಿ ತಿಂಗಳು 2,000 ರೂಪಾಯಿ ನೀಡುವ ಮೂಲಕ ಕುಟುಂಬದ ಆರ್ಥಿಕ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ಈ ಯೋಜನೆ ಜಾರಿಗೊಳಿಸಲಾಗಿದೆ.
ಒಟ್ಟಿನಲ್ಲಿ, ಹಲವು ತಿಂಗಳಿಂದ ಗೃಹಲಕ್ಷ್ಮಿ ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರಿಗೆ ಮೂರು ಕಂತುಗಳ ಹಣ ಬಿಡುಗಡೆ ನಿರ್ಧಾರ ನಿರಾಳತೆ ತಂದಿದೆ.
ಇದೀಗ ಸರ್ಕಾರ ಒಟ್ಟಿಗೆ ಮೂರು ಕಂತುಗಳ ಹಣವನ್ನು ಒಟ್ಟಿಗೆ ಜಮೆ ಮಾಡಿದೆ. ದೀಪಾವಳಿ ಹಬ್ಬದ ಸಂಭ್ರಮದಲ್ಲಿರುವ ಮನೆಯ ಯಜಮಾನಿಗೆ ಸರ್ಕಾರ ಖುಷಿ ಸುದ್ದಿಯನ್ನ ನೀಡಿದೆ. ಪಡಿತರ ಚೀಟಿಯಲ್ಲಿ ಯಾರು ಮನೆಯ ಯಜಮಾನಿ ಎಂದು ಗುರುತಿಸಲಾಗುತ್ತದೆಯೋ ಅವರಿಗೆ ಗೃಹಲಕ್ಷ್ಮಿ ಯೋಜನೆಯಡಿ 2 ಸಾವಿರ ರೂ. ನೀಡಲಾಗುವುದು. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳು ಅಥವಾ ಸೇವಾ ಸಿಂಧು ಪೋರ್ಟಲ್ ಮೂಲಕ ಉಚಿತವಾಗಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಬಹುದು.

