HomeKarnatakaಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರಿವು ನವೀಕರಣ ಸಾಲ ಪಡೆಯಲು ಆನ್‌ಲೈನ್ ಅರ್ಜಿ ಆಹ್ವಾನ

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರಿವು ನವೀಕರಣ ಸಾಲ ಪಡೆಯಲು ಆನ್‌ಲೈನ್ ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನ ‘ಅರಿವು’ (ನವೀಕರಣ) ಸಾಲ ಯೋಜನೆಯಡಿ ವಿದ್ಯಾಭ್ಯಾಸ ಸಾಲಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿರುವ ಸಿಇಟಿ/ ನೀಟ್/ ಪಿಜಿಸಿಇಟಿ/ ಪಿಜಿನೀಟ್/ಡಿಸಿಇಟಿ ಮೂಲಕ ಪದವಿ ಮತ್ತು ಸ್ನಾತಕೋತ್ತರ ವೃತ್ತಿಪರ ಕೋರ್ಸ್ಗಳಾದ ಎಂಬಿಬಿಎಸ್, ಬಿಡಿಎಸ್, ಬಿಇ/ಬಿಟೆಕ್, ಬಿ-ಆಯುಷ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಅರ್ಗಿಕಲ್ಚರಲ್ ಸೈನ್ಸ್, ವೆಟರ್ನರಿ ಫಾರ್ಮಾ ಸೈನ್ಸ್ ಇಂತಹ ಕೋರ್ಸ್ಗಳಿಗೆ ಆಯ್ಕೆಯಾಗಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ವಿದ್ಯಾರ್ಥಿಗಳು ನಿಗಮದಿಂದ ಹಿಂದಿನ ವರ್ಷದಲ್ಲಿ ಪಡೆದ ಸಾಲದ ಮೊತ್ತಕ್ಕೆ ಶೇ.12 ರಷ್ಟು ಹಣವನ್ನು ಆನ್‌ಲೈನ್ ಮುಖಾಂತರ ಪಾವತಿಸಿಬೇಕಾಗಿರುತ್ತದೆ.

ಈ ಹಿಂದೆ ಕೆಇಎ ನಿಂದ ಆಯ್ಕೆಯಾಗಿದ್ದು, ಬೇರೆ ಬೇರೆ ವರ್ಷಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು( ಕ್ರಿಶ್ಚಿಯನ್ ಹೊರತುಪಡಿಸಿ) ಅರಿವು ವಿದ್ಯಾಭ್ಯಾಸ ಸಾಲ ಪಡೆಯದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಸಹ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದ್ದು, ನವೀಕರಣ ಮೊತ್ತವನ್ನು ಪಾವತಿಸುವ ಅಗತ್ಯವಿರುವುದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಸಕ್ತರು ಅರ್ಜಿಯನ್ನುhttps://kmdconline.karnataka.gov.in ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಭರ್ತಿ ಮಾಡಿ ನಂತರ ಮೂಲ ಇಂಡೆಮ್ನಿಟಿ ಬಾಂಡ್ ಮತ್ತು ಸಾಲಕ್ಕೆ ಸಂಬಂಧಿಸಿದ ಅಗತ್ಯ ದಾಖಲೆಗಳನ್ನು ನ.15 ರೊಳಗಾಗಿ ಸಲ್ಲಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08182-228262 ನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೆಟ್ರಿಕ್ ನಂತರದ ಸೌಲಭ್ಯಗಳ ಅರ್ಜಿ ಅವಧಿ ವಿಸ್ತರಣೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ನವೆಂಬರ್ 30ರವರೆಗೆ ವಿಸ್ತರಿಸಿದೆ.

ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು https://ssp.postmatric.karnataka.gov.in ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರದ ಆದೇಶಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ https://bcwd.karnataka.gov.in ವೆಬ್‌ಸೈಟ್ ಅನ್ನು ಭೇಟಿ ಮಾಡಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ 8050770004 ಅಥವಾ ಇಮೇಲ್ [email protected] ಅನ್ನು ಸಂಪರ್ಕಿಸಬಹುದಾಗಿದ್ದು, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿಗಾಗಿ [email protected] ಅಥವಾ ದೂರವಾಣಿ ಸಂಖ್ಯೆ 1902 ಅನ್ನು ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಕೆ.ಐ.ಸಿ.ಎಂ ನಲ್ಲಿ ‘ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್’ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಹಾಗೂ ಶಿವಮೊಗ್ಗದ 2ನೇ ಹಂತದ ವಿನೋಬನಗರದಲ್ಲಿರುವ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ (ಕೆ.ಐ.ಸಿ.ಎಮ್) ಸಂಸ್ಥೆಯ ವತಿಯಿಂದ 6 ತಿಂಗಳ ಅವಧಿಯ ‘ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್’ ತರಬೇತಿಯು ನವೆಂಬರ್ 14 ರಿಂದ ಪ್ರಾರಂಭವಾಗಲಿದೆ.

ಈ ಕೋರ್ಸ್‌ಗೆ ಬಿ.ಕಾಂ, ಬಿ.ಬಿ.ಎಂ ಅಥವಾ ಲೆಕ್ಕಶಾಸ್ತ್ರವನ್ನು ಐಚ್ಛಿಕ ವಿಷಯವನ್ನಾಗಿ ಒಳಗೊಂಡ ಇತರ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಸಾಮಾನ್ಯ ಅಭ್ಯರ್ಥಿಗಳಿಗೆ ಪ್ರವೇಶ ಶುಲ್ಕ ರೂ.9,500/- ಇದ್ದು, ಬಿಪಿಎಲ್ ಹಾಗೂ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರಲಿದೆ.

ಈ ತರಬೇತಿಯಲ್ಲಿ ಸಹಕಾರ ಕ್ಷೇತ್ರ ಮತ್ತು ಲೆಕ್ಕ ಪತ್ರ ನಿರ್ವಹಣೆಯ ಜ್ಞಾನ, ಲೆಕ್ಕ ಪರಿಶೋಧನೆ, ಟ್ಯಾಲಿ ಹಾಗೂ ಡಿಜಿಟಲ್ ಅಕೌಂಟಿಂಗ್ ಕೌಶಲ್ಯಗಳನ್ನು ಕಲಿಸಲಾಗುತ್ತದೆ. ಇದು ಸಹಕಾರ ಸಂಘ/ಸಂಸ್ಥೆಗಳಲ್ಲಿ ಹಾಗೂ ಖಾಸಗಿ ರಂಗದಲ್ಲಿ ಉದ್ಯೋಗ ಮತ್ತು ಸ್ವಯಂ ಉದ್ಯೋಗ ಕಂಡುಕೊಳ್ಳಲು ಸಹಕಾರಿಯಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್ 13 ಕೊನೆಯ ದಿನಾಂಕವಾಗಿದೆ. ಆನ್‌ಲೈನ್ ಮೂಲಕ https://dca.kscfl.in ಲಿಂಕ್ ಬಳಸಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9449075746, 8310554752, 9845068191, ಅಥವಾ 7026246493 ಅನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಾಂಶುಪಾಲರು ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular