HomeIndiaಕಾವೇರಿ ನೀರು ಹಂಚೆಯಲ್ಲಿ ರಾಜ್ಯಕ್ಕೆ ಮತ್ತೆ ಆಘಾತ: ತಮಿಳುನಾಡಿಗೆ 3,000 ಕ್ಯೂಸೆಕ್ ನೀರು ಹರಿಸಲು CWRC...

ಕಾವೇರಿ ನೀರು ಹಂಚೆಯಲ್ಲಿ ರಾಜ್ಯಕ್ಕೆ ಮತ್ತೆ ಆಘಾತ: ತಮಿಳುನಾಡಿಗೆ 3,000 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,000 ಕ್ಯೂಸೆಕ್ ನೀರನ್ನು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ದೆಹಲಿಯಲ್ಲಿ ನಡೆದ CWRC ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ರಾಜ್ಯದಲ್ಲಿ ಈಗಾಗಲೇ ಕುಡಿಯುವ ನೀರಿಗೆ ಅಭಾವ ಎದುರಾಗಿರುವಾಗ ಈ ಶಿಫಾರಸು ತೀವ್ರ ಕಳವಳಕ್ಕೆ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಕ್ಟೋಬರ್ 23ರಿಂದ ಕರ್ನಾಟಕವು ಕಾವೇರಿ ನದಿ ನೀರು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಪ್ರತಿದಿನ 3,000 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚಿಸಿದ್ದರೂ, ಕರ್ನಾಟಕ ನೀರು ಹರಿಸಿಲ್ಲ ಎಂದು ತಮಿಳುನಾಡು ಆರೋಪಿಸಿತ್ತು. ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಸುಪ್ರೀಂ ಕೋರ್ಟ್‌ಗೆ ತುರ್ತು ಮನವಿ ಮಾಡಿ ಮಾಡಿತ್ತು.

ಕಾವೇರಿ ನೀರು ಹರಿಸದ ಕಾರಣ 4 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಬೆಳೆ ಹಾನಿಯಾಗಿದೆ ಎಂದು ತಮಿಳುನಾಡು ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದರು. ಕಾವೇರಿ ವಿವಾದದ ವಿಚಾರಣೆಯನ್ನ ತ್ವರಿತವಾಗಿ ಕೈಗೆತ್ತಿಕೊಳ್ಳುವಂತೆ ತಮಿಳುನಾಡು ಮನವಿ ಮಾಡಿತ್ತು. ಮನವಿಯನ್ನು ಪರಿಶೀಲಿಸುವುದಾಗಿ ಮುಖ್ಯ ನ್ಯಾಯಮೂರ್ತಿಗಳ ಪೀಠ ಭರವಸೆ ಕೊಟ್ಟಿತ್ತು. ಈ ಬೆನ್ನಲ್ಲೇ ಕಾವೇರಿ ನೀರು ನಿಯಂತ್ರಣ ಸಮಿತಿ ನೀರು ಹರಿಸುವಂತೆ ಶಿಫಾರಸು ಮಾಡಿದೆ.

ಇತ್ತ ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಮಟ್ಟ ಸಂಪೂರ್ಣ ಕುಸಿದಿದೆ. ಈ ಭಾಗದ ರೈತರಿಗೆ ಹಾಗೂ ಸ್ಥಳೀಯರ್ಗೆ ಕುಡಿಯುವ ನೀರಿಗೂ ಹಾಹಾಕಾರ ಎದುರಾಗುವ ಸಾಧ್ಯತೆ ದಟ್ಟವಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ನವೆಂಬರ್ ಆರಂಭದಲ್ಲೇ 99 ಅಡಿಗೆ ಕುಸಿದಿದ್ದು, ಬೇಸಿಗೆ ಸಮೀಪಿಸುವ ಮುನ್ನವೇ ಜಲಕಂಟಕ ಎದುರಾಗುವ ಭೀತಿಯಿದೆ.

ಇಂತಹ ಸಂದರ್ಭದಲ್ಲಿ ಇನ್ನೂ 15 ದಿನಗಳ ಕಾಲ ತಮಿಳುನಾಡಿಗೆ 3000 ಕ್ಯೂಸೆಕ್ಸ್ ನೀರು ಹರಿಸುವಂತೆ ಶಿಫಾರಸು ಮಾಡಿರುವುದು ಕಾವೇರಿಕೊಳ್ಳದ ರೈತರ ಆಕ್ರೋಶಕ್ಕೆ ಕಾರಣವಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular