HomeKarnatakaBREAKING : ಶಾಸಕ ಕೆ.ವೈ. ನಂಜೇಗೌಡರಿಗೆ ಬಿಗ್ ರಿಲೀಫ್! E.D ದಾಖಲಿಸಿದ್ದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

BREAKING : ಶಾಸಕ ಕೆ.ವೈ. ನಂಜೇಗೌಡರಿಗೆ ಬಿಗ್ ರಿಲೀಫ್! E.D ದಾಖಲಿಸಿದ್ದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು : ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ವಿರುದ್ಧ ಜಾರಿ ನಿರ್ದೇಶನಾಲಯ (ED) ದಾಖಲಿಸಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಶಾಸಕರ ವಿರುದ್ಧದ ಇಡಿ ತನಿಖೆಗೆ ಸಂಬಂಧಿಸಿದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.

ಅಕ್ರಮ ಭೂ ಮಂಜೂರಾತಿಗೆ ಸಂಬಂಧಿಸಿದಂತೆ ಕೆ.ವೈ. ನಂಜೇಗೌಡ ವಿರುದ್ಧ ಈ ಹಿಂದೆ ಪೊಲೀಸ್ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣವನ್ನು ಆಧಾರವಾಗಿಟ್ಟುಕೊಂಡು ಜಾರಿ ನಿರ್ದೇಶನಾಲಯ (ED) ತನಿಖೆ ಆರಂಭಿಸಿ ದಾಳಿ ನಡೆಸಿತ್ತು. ಈ ಸಂದರ್ಭದಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಕೋಮುಲ್) ನೇಮಕಾತಿ ಹಗರಣದ ಬಗ್ಗೆಯೂ ಇಡಿ ತನಿಖೆ ನಡೆಸಿ ಖಾಸಗಿ ದೂರು ದಾಖಲಿಸಿತ್ತು.

ಪೊಲೀಸರ ಬಿ ರಿಪೋರ್ಟ್‌ಗೆ ಕೋರ್ಟ್ ಅಂಗೀಕಾರ

ಅಕ್ರಮ ಭೂ ಮಂಜೂರಾತಿಗೆ ಸಂಬಂಧಿಸಿದ ಮೂಲ ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸಿ ಬಿ ರಿಪೋರ್ಟ್ ಸಲ್ಲಿಸಿದ್ದರು. ಈ ಬಿ ರಿಪೋರ್ಟ್ ಅನ್ನು ನ್ಯಾಯಾಲಯವೂ ಅಂಗೀಕರಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದನ್ನೇ ಆಧಾರವಾಗಿಟ್ಟುಕೊಂಡು ಕೆ.ವೈ. ನಂಜೇಗೌಡ ಪರವಾಗಿ ಹಿರಿಯ ವಕೀಲ ಕಿರಣ್ ಜವಳಿ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದರು. ಮೂಲ ಪ್ರಕರಣದಲ್ಲಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದು, ಅದನ್ನು ನ್ಯಾಯಾಲಯ ಅಂಗೀಕರಿಸಿರುವುದರಿಂದ ಜಾರಿ ನಿರ್ದೇಶನಾಲಯಕ್ಕೆ ಪ್ರತ್ಯೇಕವಾಗಿ ತನಿಖೆ ನಡೆಸುವ ವ್ಯಾಪ್ತಿ ಇಲ್ಲ ಎಂದು ಅವರು ವಾದಿಸಿದರು.

ಇಡಿ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶ

ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಕರ್ನಾಟಕ ಹೈಕೋರ್ಟ್ ಪೀಠ, ಕೆ.ವೈ. ನಂಜೇಗೌಡ ವಿರುದ್ಧ ಇಡಿ ದಾಖಲಿಸಿದ್ದ ಪ್ರಕರಣವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.ಈ ಆದೇಶದಿಂದ ಮಾಲೂರು ಶಾಸಕ ಕೆ.ವೈ. ನಂಜೇಗೌಡ ಅವರಿಗೆ ಕಾನೂನು ಹೋರಾಟದಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದೆ.

*ಭಾರತೀಯ ಸೇನೆ ಸೇವಾ ಉಚಿತ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2026-27 ನೇ ಸಾಲಿನ 2 ನೇ ತಂಡ (ಬಾಲಕರಿಗೆ ಮಾತ್ರ)ಕ್ಕಾಗಿ ಆಯ್ಕೆ ಪೂರ್ವ ಸಿದ್ದತೆ ಬಗ್ಗೆ ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಆಯಾ ಜಿಲ್ಲೆಯ ಜಿಲ್ಲಾ/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೊಂದಾಯಿತ ಅಂಚೆಯ ಮೂಲಕ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಆನೆಗುಂಡಿ ರಸ್ತೆ, ಬಿಜೈ ಕಾಪಿಕಾಡ್, ಮಂಗಳೂರು ತಾಲೂಕು, ದಕ್ಷಿಣ ಕನ್ನಡ ಜಿಲ್ಲೆ-575004 ಇಲ್ಲಿಗೆ ದಿ:03/12/2026 ರೊಳಗಾಗಿ ಸಲ್ಲಿಸುವುದು.

ಅರ್ಜಿ ಸಲ್ಲಿಸಲು ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಟ ವಾರ್ಷಿಕ ಆದಾಯ ಮಿತಿ ಪ್ರವರ್ಗ-1ಕ್ಕೆ ರೂ.2.50 ಲಕ್ಷ ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗಳಿಗೆ ರೂ. 1 ಲಕ್ಷ ಒಳಗೊಂಡಿರಬೇಕು. ಅಭ್ಯರ್ಥಿಯು 10 ನೇ ತರಗತಿಯನ್ನು ಉತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಟ 33 ಅಂಕಗಳು ಮತ್ತು ಸರಾಸರಿ ಶೇ.45 ರಷ್ಟು ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಂ ಇದ್ದಲ್ಲಿ ಮೇಲ್ಕಂಡಂತೆ ಸಮಾನವಾದ ಗ್ರೇಡ್ ಪಡೆದಿರಬೇಕು. ಜನ್ಮ ದಿನಾಂಕ ಮತ್ತು ವಯಸ್ಸು 03/12/2026ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯು 03/12/2006 ರಿಂದ 03/12/2009 ರ ನಡುವಿನ ಅವಧಿಯಲ್ಲಿ ಜನಿಸಿರಬೇಕು. ಅಭ್ಯರ್ಥಿಗಳು ರ‍್ಯಾಲಿಯಲ್ಲಿ 10ನೇ ತರಗತಿ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳ ಮೂಲದಾಖಲೆಗಳೊಂದಿಗೆ ಭಾಗವಹಿಸುವುದು.

ಅಭ್ಯರ್ಥಿಗಳಿಗೆ ತರಬೇತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳಿಗೆ ತರಬೇತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ.:0824-2225078/ 08182-222129 ಗಳನ್ನು ಸಂಪರ್ಕಿಸುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular