HomeKarnatakaಪಿಜಿ ವೈದ್ಯಕೀಯ ಕೋರ್ಸ್ ಪ್ರವೇಶ: ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ

ಪಿಜಿ ವೈದ್ಯಕೀಯ ಕೋರ್ಸ್ ಪ್ರವೇಶ: ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ

ಬೆಂಗಳೂರು: PGNEET-26: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳ ಮೊದಲ ಸುತ್ತಿನ ಪ್ರವೇಶಕ್ಕೆ ಸಂಬಂಧಿಸಿದಂತೆ ಪರಿಷ್ಕೃತ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಪ್ರಕಟಿಸಿದೆ.

ಅಂತಿಮ ಫಲಿತಾಂಶದ ನಂತರ ಕಾಲೇಜು ಪ್ರವೇಶಕ್ಕೆ ವೇಳಾಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಎಂಬಿಎ, ಎಂಸಿಎ ಕೋರ್ಸ್ ಸೀಟು ಹಂಚಿಕೆ ಫಲಿತಾಂಶ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

PGCET: MBA- MCA- http://M.Tech ಕೋರ್ಸುಗಳ ಪ್ರವೇಶಕ್ಕೆ ಅಂತಿಮ ವಿಸ್ತೃತ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಪ್ರಕಟಿಸಿದೆ. ಪ್ರವೇಶ ಸಂಬಂಧದ ವೇಳಾಪಟ್ಟಿಯನ್ನು ಶನಿವಾರ ಪ್ರಕಟಿಸಲಾಗುತ್ತದೆ ಎಂದು ಹೇಳಲಾಗಿದೆ.

ಉಳಿಕೆ ಮೂಲ ವೃಂದದ ವಿವಿಧ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ ದಿನಾಂಕ ಪ್ರಕಟ

ಬೆಂಗಳೂರು: ಉಳಿಕೆ ಮೂಲ ವೃಂದದ ವಿವಿಧ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆಗಳ ದಿನಾಂಕಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಪ್ರಕಟಿಸಿದೆ.

ಕಾರಾಗೃಹ ಇಲಾಖೆಯ ವಾರ್ಡರ್ ಕಮ್ ನರ್ಸಿಂಗ್, ವಾರ್ಡರ್, ದ್ವಿತೀಯ ದರ್ಜೆ ಬೋಧಕರು ಗ್ರೇಡ್-2 ಹುದ್ದೆಗಳಿಗೆ ನ.20ರಂದು ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ.

ಕಾರಾಗೃಹ ಇಲಾಖೆಯ ವಾರ್ಡರ್, ದ್ವಿತೀಯ ದರ್ಜೆ ಬೋಧಕರು ಗ್ರೇಡ್ -2 ಒಟ್ಟು 576 ಹುದ್ದೆಗಳಿಗೆ ನ.21ರಂದು ಸಾಮಾನ್ಯ ಜ್ಞಾನ ಪರೀಕ್ಷೆ ನಡೆಯಲಿದೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲಾ ಶಿಕ್ಷಕರ 767 ಹುದ್ದೆಗಳಿಗೆ ನ.22ರಿಂದ 30ರವರೆಗೆ ವಿವಿಧ ವಿಷಯಗಳ ಪರೀಕ್ಷೆಗಳು ನಡೆಯಲಿವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಈ ದಿನಾಂಕಗಳಂದು ನಡೆಯುವ ಪರೀಕ್ಷೆಗಳಿಗೆ ಈಗಿನಿಂದಲೇ ತಯಾರಿ ಮಾಡಿಕೊಂಡು ಪರೀಕ್ಷೆ ಬರೆಯಲು ಕೋರಲಾಗಿದೆ.

ಕೆಇಎ ಸ್ಪರ್ಧಾತ್ಮಕ ಪರೀಕ್ಷೆಗಳ ವೇಳಾಪಟ್ಟಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(ಕೆಇಎ) ಉಳಿಕೆ ಮೂಲ ವೃಂದ(RPC) ಅಡಿಯಲ್ಲಿ ವಿವಿಧ ಇಲಾಖೆಗಳ ನೇಮಕಾತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. 2026ರ ನವೆಂಬರ್ 20ರಿಂದ ನವೆಂಬರ್ 30ರವರೆಗೆ ವಿವಿಧ ಹಂತಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ವೇಳಾಪಟ್ಟಿಯನ್ನು ಗಮನಿಸುವಂತೆ ಪ್ರಾಧಿಕಾರ ಸೂಚಿಸಿದೆ.

ಕೆಇಎ ನವೆಂಬರ್ 5ರಂದು ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಕಾರಾಗೃಹ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸೇರಿದಂತೆ ವಿವಿಧ ಇಲಾಖೆಗಳ ಹುದ್ದೆಗಳಿಗೆ ಪರೀಕ್ಷೆಗಳನ್ನು ನಡೆಸಲಾಗುತ್ತದೆ.

ನ.20 ರಂದು ಕಾರಾಗೃಹ ಇಲಾಖೆ – ವಾರ್ಡರ್ ಕಮ್ ನರ್ಸಿಂಗ್, ವಾರ್ಡರ್(ವೀಕ್ಷಕರು), ದ್ವಿತೀಯ ದರ್ಜೆ ಬೋಧಕರು ಗ್ರೇಡ್-2 ಹಾಗೂ ಕೆಇಎ ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ ಕನ್ನಡ ಭಾಷಾ ಪರೀಕ್ಷೆ

ನ.21 ರಂದು ಕಾರಾಗೃಹ ಇಲಾಖೆ – ವಾರ್ಡರ್(ವೀಕ್ಷಕರು), ದ್ವಿತೀಯ ದರ್ಜೆ ಬೋಧಕರು ಗ್ರೇಡ್-2 ಸಾಮಾನ್ಯ ಜ್ಞಾನ ಪತ್ರಿಕೆ

ನ.22 ರಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸಾಮಾನ್ಯ ಜ್ಞಾನ ಪತ್ರಿಕೆ-1 ಹಾಗೂ ಕನ್ನಡ ಮತ್ತು ವಿಜ್ಞಾನ ನಿರ್ದಿಷ್ಟ ಪತ್ರಿಕೆ-2

ನ.27 ರಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ – ಗಣಕಯಂತ್ರ ಶಿಕ್ಷಕರು, ಹಿಂದಿ ಮತ್ತು ಗಣಿತ ವಿಷಯಗಳ ಹುದ್ದೆಗಳು ನಿರ್ದಿಷ್ಟ ಪತ್ರಿಕೆ-2

ನ.29 ರಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ – ಇಂಗ್ಲಿಷ್ ಮತ್ತು ದೈಹಿಕ ಶಿಕ್ಷಣ ನಿರ್ದಿಷ್ಟ ಪತ್ರಿಕೆ-2

ನ.30 ರಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ – ಸಮಾಜ ವಿಜ್ಞಾನ ನಿರ್ದಿಷ್ಟ ಪತ್ರಿಕೆ-2

ಪರೀಕ್ಷಾ ಸಮಯ ಮತ್ತು ಅಂಕಗಳು

* ನವೆಂಬರ್ 20ರಂದು ಕನ್ನಡ ಭಾಷಾ ಪರೀಕ್ಷೆ ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ನಡೆಯಲಿದೆ. ಒಟ್ಟು 150 ಅಂಕಗಳು.

* ನವೆಂಬರ್ 21ರಂದು ಸಾಮಾನ್ಯ ಜ್ಞಾನ ಪರೀಕ್ಷೆ ಮಧ್ಯಾಹ್ನ 3ರಿಂದ ಸಂಜೆ 4.30ರವರೆಗೆ ನಡೆಯಲಿದ್ದು, 100 ಅಂಕಗಳಿಗೆ ಪರೀಕ್ಷೆ ಇರಲಿದೆ.

* ನವೆಂಬರ್ 22ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ಪತ್ರಿಕೆ-1 ಹಾಗೂ ಮಧ್ಯಾಹ್ನ 2.30ರಿಂದ ಸಂಜೆ 4.30ರವರೆಗೆ ಪತ್ರಿಕೆ-2 ಪರೀಕ್ಷೆ ನಡೆಯಲಿದೆ.

* ನವೆಂಬರ್ 27 ಮತ್ತು 29ರಂದು ಬೆಳಗ್ಗೆ ಹಾಗೂ ಮಧ್ಯಾಹ್ನದ ಅವಧಿಯಲ್ಲಿ ವಿಷಯವಾರು ಪರೀಕ್ಷೆಗಳು ನಡೆಯಲಿವೆ.

* ನವೆಂಬರ್ 30ರಂದು ಸಮಾಜ ವಿಜ್ಞಾನ ವಿಷಯದ ಪರೀಕ್ಷೆ ನಡೆಯಲಿದೆ.

ಅಭ್ಯರ್ಥಿಗಳಿಗೆ ಕೆಇಎ ಮಹತ್ವದ ಸೂಚನೆಗಳು

ಪರೀಕ್ಷಾ ಕೇಂದ್ರಕ್ಕೆ ಎರಡು ಗಂಟೆ ಮುಂಚಿತವಾಗಿ ಹಾಜರಾಗಬೇಕು

ಪರೀಕ್ಷಾ ಕೇಂದ್ರದಲ್ಲಿ ಫ್ರಿಸ್ಕಿಂಗ್ (ತಪಾಸಣೆ) ಮತ್ತು ಮುಖಚಹರೆ ಪರಿಶೀಲನೆ ನಡೆಸಿದ ಬಳಿಕವೇ ಅಭ್ಯರ್ಥಿಗಳಿಗೆ ಪ್ರವೇಶ ನೀಡಲಾಗುತ್ತದೆ. ಹೀಗಾಗಿ ಅಭ್ಯರ್ಥಿಗಳು ಪರೀಕ್ಷೆ ಆರಂಭವಾಗುವ ಸಮಯಕ್ಕಿಂತ ಎರಡು ಗಂಟೆ ಮುಂಚಿತವಾಗಿ ಕೇಂದ್ರದೊಳಗೆ ಹಾಜರಿರಬೇಕು.

ತಪ್ಪು ಉತ್ತರಕ್ಕೆ ಋಣಾತ್ಮಕ ಮೌಲ್ಯಮಾಪನ

ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನ ಜಾರಿಯಲ್ಲಿರುತ್ತದೆ. ಪ್ರತಿ ತಪ್ಪು ಉತ್ತರಕ್ಕೆ ನಿಗದಿತ ಅಂಕಗಳ ಶೇ.25ರಷ್ಟು ಅಂದರೆ 0.25 ಅಂಕಗಳನ್ನು ಕಡಿತಗೊಳಿಸಲಾಗುತ್ತದೆ.

ಉತ್ತರಿಸದ ಪ್ರಶ್ನೆಗಳಿಗೆ ಐದನೇ ಆಯ್ಕೆ ಕಡ್ಡಾಯ

ಉತ್ತರಿಸದೇ ಉಳಿದ ಪ್ರಶ್ನೆಗಳಿಗೆ ಐದನೇ ಆಯ್ಕೆ ಅಥವಾ ವೃತ್ತವನ್ನು ಶೇಡ್ ಮಾಡಲು ಕೊನೆಯ ಬೆಲ್ ಆದ ನಂತರ ಹೆಚ್ಚುವರಿಯಾಗಿ ಐದು ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ. ಯಾವುದೇ ಆಯ್ಕೆ ಅಥವಾ ವೃತ್ತವನ್ನು ಶೇಡ್ ಮಾಡದಿದ್ದರೆ ಅಂತಹ ಪ್ರಶ್ನೆಗೆ 0.25 ಅಂಕ ಕಡಿತಗೊಳಿಸಲಾಗುತ್ತದೆ.

ಕನ್ನಡ ಭಾಷಾ ಪರೀಕ್ಷೆಗೆ ಋಣಾತ್ಮಕ ಮೌಲ್ಯಮಾಪನವಿಲ್ಲ

ಕನ್ನಡ ಭಾಷಾ ಪರೀಕ್ಷೆಗೆ ಮಾತ್ರ ಋಣಾತ್ಮಕ ಮೌಲ್ಯಮಾಪನ ಅನ್ವಯಿಸುವುದಿಲ್ಲ ಎಂದು ಕೆಇಎ ಸ್ಪಷ್ಟಪಡಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular