HomeKarnatakaದೀಪಾವಳಿ ಹಬ್ಬಕ್ಕೆ ಊರಿಗೆ ಹೋಗುತ್ತಿರುವ ಪ್ರಯಾಣಿಕರಿಗೆ ಟಿಕೆಟ್ ದರ ಏರಿಕೆ ಬಿಸಿ: ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿಯಿಂದ...

ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗುತ್ತಿರುವ ಪ್ರಯಾಣಿಕರಿಗೆ ಟಿಕೆಟ್ ದರ ಏರಿಕೆ ಬಿಸಿ: ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿಯಿಂದ 2,600 ಹೆಚ್ಚುವರಿ ಬಸ್‌

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಬಸ್ ದರ ಏರಿಕೆ ಬಿಸಿ ತಟ್ಟಿದೆ. ಈಗಾಗಲೇ ನಾಲ್ಕು ನಿಗಮಗಳ ಸಾರಿಗೆ ಬಸ್ ಗಳು ಟಿಕೆಟ್ ದರದಲ್ಲಿ ಭಾರಿ ಏರಿಕೆ ಮಾಡಿದ್ದರೆ ಮತ್ತೊಂದೆಡೆ ಖಾಸಗಿ ಬಸ್ ಮಾಲೀಕರು ಹಬ್ಬದ ಸಂದರ್ಭವನ್ನೇ ಬಳಸಿಕೊಂಡು ಮನಬಂದಂತೆ ಟಿಕೆಟ್ ದರ ಏರಿಸಿದ್ದಾರೆ.

ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಚಾರದ ಅನುಕೂಲಕ್ಕಾಗಿ ಕೆಎಸ್​ಆರ್​ಟಿಸಿ 2,600 ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸಿದೆ. ಹಬ್ಬಕ್ಕಾಗಿ ಜನರು ನಿನ್ನೆಯಿಂದಲೇ (ನ.06) ಊರಿನತ್ತ ಮುಖ ಮಾಡಿದ್ದು, ನಗರದ ಮೆಜೆಸ್ಟಿಕ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಭಾರೀ ಪ್ರಮಾಣದಲ್ಲಿ ಜನಸಂದಣಿ ಕಂಡುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಭಾನುವಾರದಿಂದ ಬೆಳಕಿನ ಹಬ್ಬ ದೀಪಾವಳಿ ಆರಂಭವಾಗಲಿದ್ದು, ಬೆಂಗಳೂರಿನ ಮೆಜೆಸ್ಟಿಕ್ ಸೇರಿದಂತೆ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಜನಜಂಗುಳಿಯಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಹಾಗೂ ಸಂಚಾರ ದಟ್ಟಣೆ ತಗ್ಗಿಸಲು ಹೆಚ್ಚುವರಿ ಬಸ್ ಗಳನ್ನು ಬಿಡಲಾಗುತ್ತಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕೆಎಸ್​ಆರ್​ಟಿಸಿ ಚೀಫ್ ಟ್ರಾಫಿಕ್ ಮ್ಯಾನೇಜರ್ ಪ್ರಭಾಕರ ರೆಡ್ಡಿ, ಇಂದಿನಿಂದ ಬೆಂಗಳೂರಿನಿಂದ ರಾಜ್ಯದ ಹಾಗೂ ಅಂತರರಾಜ್ಯದ ವಿವಿಧ ಸ್ಥಳಗಳಿಗೆ 2,600 ಹೆಚ್ಚುವರಿ ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಈ ಹೆಚ್ಚುವರಿ ಬಸ್ಸುಗಳು ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆಯ ಸ್ಯಾಟ್‌ಲೈಟ್ ಬಸ್ ನಿಲ್ದಾಣ ಹಾಗೂ ಶಾಂತಿನಗರ ಬಿಎಂಟಿಸಿ ಬಸ್ ಸ್ಟ್ಯಾಂಡ್‌ಗಳಿಂದ ಸಂಚಾರ ನಡೆಸಲಿವೆ ಎಂದು ತಿಳಿಸಿದ್ದಾರೆ.

ಹಬ್ಬದ ಸಾಲು ಸಾಲು ರಜೆಗಳನ್ನು ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಸ್ ಮಾಲೀಕರು ಊರಿಗೆ ಹೊರಡುವವರಿಂದ ದುಪ್ಪಟ್ಟು ದರ ವಸೂಲಿಗೆ ಇಳಿದಿದ್ದಾರೆ. ಎಂದಿಗಿಂತ ಎರಡ್ಮೂರು ಪಟ್ಟು ಹೆಚ್ಚು ದರ ನಿಗದಿಪಡಿಸಲಾಗಿದೆ.

ಯಾವ ಊರುಗಳಿಗೆ ಎಷ್ಟು ದರ ಇಲ್ಲಿದೆ ಪಟ್ಟಿ:

ಬೆಂಗಳೂರು-ಚಿಕ್ಕಮಗಳೂರು

ಹಿಂದಿನ ದರ-366-618

ಇಂದಿನ ದರ-1000-1836

ಬೆಂಗಳೂರು-ಮಂಗಳೂರು

ಹಿಂದಿನ ದರ-496-1157

ಇಂದಿನ ದರ-1785-4999

ಬೆಂಗಳೂರು-ಧಾರವಾಡ

ಹಿಂದಿನ ದರ-389-1300

ಇಂದಿನ ದರ-1400-7000

ಬೆಂಗಳೂರು-ಹುಬ್ಬಳ್ಳಿ

ಹಿಂದಿನ ದರ-660-1700

ಇಂದಿನ ದರ-1989-8000

ಬೆಂಗಳೂರು- ಕಾರವಾರ

ಹಿಂದಿನ ದರ-542-900

ಇಂದಿನ ದರ-1690-6999

ಬೆಂಗಳೂರು-ಕಲ್ಬುರ್ಗಿ

ಹಿಂದಿನ ದರ-699-1400

ಇಂದಿನ ದರ-1699-4000

ಬೆಂಗಳೂರು-ಶಿವಮೊಗ್ಗ

ಹಿಂದಿನ ದರ-450-1100

ಇಂದಿನ ದರ-1199-2297

ಬೆಂಗಳೂರು-ಧರ್ಮಸ್ಥಳ

ಹಿಂದಿನ ದರ-530-999

ಇಂದಿನ ದರ-1199-1800

ಬೆಂಗಳೂರು-ಮೈಸೂರು

ಹಿಂದಿನ ದರ-350-1000

ಇಂದಿನ ದರ-450-2200

ಬೆಂಗಳೂರು-ಕೊಡಗು

ಹಿಂದಿನ ದರ-499-900

ಇಂದಿನ ದರ-850-2706

ಕೆಲ ದಿನಗಳ ಹಿಂದಷ್ಟೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರದಲ್ಲೂ ಶೇ 23ರಷ್ಟು ಹೆಚ್ಚಳವಾಗಿದೆ. ಇದರ ಬೆನ್ನಲ್ಲೇ ಇದೀಗ ಖಾಸಗಿ ಬಸ್‌ಗಳು ಮನಬಂದಂತೆ ಟಿಕೆಟ್ ದರ ಏರಿಸಿದ್ದು, ಪ್ರಯಾಣಿಕರಿಗೆ ಎರಡೂ ಕಡೆಯಿಂದ ಭಾರಿ ಹೊರೆಯಾಗುತ್ತಿದೆ. ಇದರಿಂದಾಗಿ ಸಾರ್ವಜನಿಕರು ಹಾಗೂ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ ಈ ಬಾರಿ ಬೆಳಕಿನ ಹಬ್ಬ ದೀಪಾವಳಿಯಲ್ಲಿ ಜನರಿಗೆ ಅಗತ್ಯ ವಸ್ತುಗಳ ಬೆಲೆ ಜೊತೆಗೆ ಪ್ರಯಾಣ ದರದ ಬೆಲೆ ಏರಿಕೆಯ ಬಿಸಿಯೂ ತಟ್ಟಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular