HomeLatest News7 ರನ್‌ಗೆ ಔಟ್ ಆದ್ರೂ ಇತಿಹಾಸ ಬರೆದ ವಿರಾಟ್ ಕೊಹ್ಲಿ: ರಿಕಿ ಪಾಂಟಿಂಗ್ ದಾಖಲೆ ಅಳಿಸಿಹಾಕಿದ...

7 ರನ್‌ಗೆ ಔಟ್ ಆದ್ರೂ ಇತಿಹಾಸ ಬರೆದ ವಿರಾಟ್ ಕೊಹ್ಲಿ: ರಿಕಿ ಪಾಂಟಿಂಗ್ ದಾಖಲೆ ಅಳಿಸಿಹಾಕಿದ ಕಿಂಗ್ ಕೊಹ್ಲಿ!

ವೆಲ್ಲಿಂಗ್ಟನ್‌ನ ಸೆಲ್ಲೋ ಬೇಸಿನ್ ರಿಸರ್ವ್ ಮೈದಾನದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಈ ಪಂದ್ಯದಲ್ಲಿ ಕೇವಲ 7 ರನ್‌ಗಳಿಸಿ ಬೇಗನೆ ವಿಕೆಟ್ ಒಪ್ಪಿಸಿದರೂ, ಆಸ್ಟ್ರೇಲಿಯಾದ ಮಾಜಿ ನಾಯಕ ಹಾಗೂ ಕ್ರಿಕೆಟ್ ದಿಗ್ಗಜ ರಿಕಿ ಪಾಂಟಿಂಗ್ ಹೆಸರಿನಲ್ಲಿದ್ದ ಸಾರ್ವ ಶ್ರೇಷ್ಠ ದಾಖಲೆಯೊಂದನ್ನು ಧೂಳಿಪಟ ಮಾಡಿದ್ದಾರೆ.

ನ್ಯೂಜಿಲೆಂಡ್ ನೀಡಿದ್ದ 135 ರನ್‌ಗಳ ಸುಲಭ ಗುರಿಯನ್ನು ಬೆನ್ನತ್ತಿದ ಭಾರತ ತಂಡದ ಪರ 3ನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದ ವಿರಾಟ್ ಕೊಹ್ಲಿ, ತಾವು ಎದುರಿಸಿದ ಎರಡನೇ ಎಸೆತದಲ್ಲೇ ಭರ್ಜರಿ ಬೌಂಡರಿ ಬಾರಿಸಿದರು. ಈ ಫೋರ್‌ನೊಂದಿಗೆ ಅವರು ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ನ್ಯೂಜಿಲೆಂಡ್ ವಿರುದ್ಧ ಅತ್ಯಂತ ಹೆಚ್ಚು ರನ್ ಗಳಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಪಂದ್ಯ ಆರಂಭಕ್ಕೂ ಮುನ್ನ ಕೊಹ್ಲಿ ಮತ್ತು ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ಇಬ್ಬರೂ ಕಿವೀಸ್ ಪಡೆ ವಿರುದ್ಧ ತಲಾ 1,971 ರನ್‌ಗಳಿಸಿ ಸಮಬಲದ ಸಾಧನೆಯಲ್ಲಿದ್ದರು.

ವಿಶೇಷವೆಂದರೆ, ರಿಕಿ ಪಾಂಟಿಂಗ್ ಅವರು ನ್ಯೂಜಿಲೆಂಡ್ ವಿರುದ್ಧ 51 ಪಂದ್ಯಗಳ 50 ಇನಿಂಗ್ಸ್‌ಗಳಲ್ಲಿ 6 ಶತಕ ಹಾಗೂ 12 ಅರ್ಧಶತಕಗಳ ನೆರವಿನಿಂದ 1,971 ರನ್ ಬಾರಿಸಿದ್ದರೆ, ವಿರಾಟ್ ಕೊಹ್ಲಿ ಕೇವಲ 38 ಇನಿಂಗ್ಸ್‌ಗಳಲ್ಲೇ ಈ ಬೃಹತ್ ಮೈಲಿಗಲ್ಲನ್ನು ದಾಟಿ ಮುನ್ನುಗ್ಗಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಏಕದಿನ ಸರಣಿಯಲ್ಲಿ ಇನ್ನು ಮೂರು ಪಂದ್ಯಗಳು ಬಾಕಿ ಉಳಿದಿದ್ದು, 50 ಓವರ್‌ಗಳ ಕ್ರಿಕೆಟ್‌ನಲ್ಲಿ ಕಿವೀಸ್ ಪಡೆ ವಿರುದ್ಧ 2,000 ರನ್ ಪೂರೈಸಿದ ಜಗತ್ತಿನ ಪ್ರಥಮ ಆಟಗಾರ ಎಂಬ ನೂತನ ಇತಿಹಾಸ ನಿರ್ಮಿಸಲು ಕಿಂಗ್ ಕೊಹ್ಲಿಗೆ ಸುವರ್ಣ ಅವಕಾಶ ಸಿಕ್ಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಪಂದ್ಯದಲ್ಲಿ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡದ ತಮ್ಮ ಸಹಪಾಠಿಯಾಗಿರುವ ಜಾಕೋಬ್ ಡಫಿ ಎಸೆತದಲ್ಲಿ ಕೊಹ್ಲಿ ಕವರ್ ಪಾಯಿಂಟ್‌ಗೆ ಸುಲಭ ಕ್ಯಾಚ್ ನೀಡಿ ನಿರ್ಗಮಿಸಿದರು. ಇದಕ್ಕೂ ಮುನ್ನ ನಡೆದ ಸರಣಿಯ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ 3ನೇ ಕ್ರಮಾಂಕದಲ್ಲೇ ಬ್ಯಾಟಿಂಗ್ ಮಾಡಿ 13,000 ರನ್ ಪೂರೈಸಿದ ವಿಶ್ವದ ಮೊದಲ ಆಟಗಾರ ಎಂಬ ಅಪರೂಪದ ದಾಖಲೆ ಬರೆದಿದ್ದರು ಎಂಬುದು ಉಲ್ಲೇಖಾರ್ಹ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular