HomeKarnatakaಮೈಸೂರು ಚಾಮುಂಡೇಶ್ವರಿ ದೇಗುಲದಲ್ಲಿ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ

ಮೈಸೂರು ಚಾಮುಂಡೇಶ್ವರಿ ದೇಗುಲದಲ್ಲಿ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ

ಮೈಸೂರು: ನಾಡ ಅಧಿದೇವತೆ ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಟಿಕೆತ್ ಬುಕ್ಕಿಂಗ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಆಫ್‌ಲೈನ್ ದರ್ಶನ ಟಿಕೆಟ್ ವಿತರಿಸುವುದನ್ನು ಸ್ಥಗಿತಗೊಳಿಸಲಾಗಿದ್ದು, ಇನ್ಮುಂದೆ ಆನ್‌ಲೈನ್ ಮೂಲಕವೇ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿಗೆ ತರಲಾಗಿದೆ.

ಇದಕ್ಕಾಗಿ ದೇವಸ್ಥಾನದ ಅಧಿಕೃತ ವೆಬ್‌ಸೈಟ್ https://srichamundeshwaridevi.in ಅನ್ನು ಆರಂಭಿಸಲಾಗಿದೆ. ಮೈಸೂರು ದಸರಾ ಉತ್ಸವ ಮುಕ್ತಾಯಗೊಂಡ ಒಂದು ವಾರದ ಬಳಿಕ ಈ ಹೊಸ ವ್ಯವಸ್ಥೆ ಜಾರಿಗೆ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಕ್ತರಿಗೆ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆಯನ್ನು ಹೆಚ್ಚು ಸುಲಭ, ಪಾರದರ್ಶಕ ಹಾಗೂ ಸುಗಮಗೊಳಿಸುವುದರ ಜೊತೆಗೆ, ಟಿಕೆಟ್ ವಿತರಣೆಯಲ್ಲಿ ನಡೆಯಬಹುದಾದ ಅಕ್ರಮ ಮತ್ತು ಹಣ ದುರುಪಯೋಗವನ್ನು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ದರ್ಶನದ ವೇಳಾಪಟ್ಟಿ, ವಿವಿಧ ಸೇವೆಗಳ ಮಾಹಿತಿ:

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ. ರೂಪಾ ಈ ಕುರಿತು ಮಾಹಿತಿ ನೀಡಿದ್ದು, ಹೊಸ ಡಿಜಿಟಲ್ ವೇದಿಕೆಯ ಮೂಲಕ ದೇಶ-ವಿದೇಶಗಳ ಭಕ್ತರು, ಯಾತ್ರಿಕರು ಹಾಗೂ ಪ್ರವಾಸಿಗರಿಗೆ ದೇವಸ್ಥಾನಕ್ಕೆ ಸಂಬಂಧಿಸಿದ ಅಗತ್ಯ ಮಾಹಿತಿ ಮತ್ತು ಸೇವೆಗಳು ಲಭ್ಯವಾಗಲಿವೆ ಎಂದು ತಿಳಿಸಿದ್ದಾರೆ. ಈ ವೆಬ್‌ಸೈಟ್ ಶ್ರೀ ಚಾಮುಂಡೇಶ್ವರಿ ದೇವಾಲಯ, ಚಾಮುಂಡಿ ಬೆಟ್ಟ ಹಾಗೂ ಸುತ್ತಮುತ್ತಲಿನ ಕ್ಷೇತ್ರದ ಮಾಹಿತಿಗಾಗಿ ಏಕೈಕ ಡಿಜಿಟಲ್ ವೇದಿಕೆಯಾಗಿ ಕಾರ್ಯನಿರ್ವಹಿಸಲಿದೆ. ದರ್ಶನದ ವೇಳಾಪಟ್ಟಿ, ವಿವಿಧ ಸೇವೆಗಳು, ದೇವಸ್ಥಾನದ ಸಮಯ, ಉತ್ಸವಗಳು, ಭಕ್ತರಿಗೆ ನೀಡಲಾಗಿರುವ ಮಾರ್ಗಸೂಚಿಗಳು, ಸೌಲಭ್ಯಗಳು, ಸಂಪರ್ಕ ವಿವರಗಳು ಸೇರಿದಂತೆ ಪ್ರಮುಖ ಮಾಹಿತಿಗಳನ್ನು ಇಲ್ಲಿ ಪಡೆಯಬಹುದು ಎಂದವರು ತಿಳಿಸಿದ್ದಾರೆ.

ಭಕ್ತರು ಲಭ್ಯವಿರುವ ದರ್ಶನದ ವಿಧಗಳು ಹಾಗೂ ವಿವಿಧ ಸೇವೆಗಳ ವಿವರಗಳನ್ನು ಪರಿಶೀಲಿಸಿ, ದೇವಸ್ಥಾನದ ಕಚೇರಿಗೆ ಭೇಟಿ ನೀಡದೆಯೇ ಆನ್‌ಲೈನ್‌ನಲ್ಲಿ ಟಿಕೆಟ್ ಬುಕ್ ಮಾಡಬಹುದು. ದೈನಂದಿನ ಸೇವೆಗಳು ಮತ್ತು ವಿಶೇಷ ಪೂಜಾ ವಿಧಿವಿಧಾನಗಳ ಬಗ್ಗೆಯೂ ಮಾಹಿತಿ ಲಭ್ಯವಿದ್ದು, ಭಕ್ತರು ತಮ್ಮ ಭೇಟಿಯನ್ನು ಮುಂಚಿತವಾಗಿಯೇ ಯೋಜಿಸಿಕೊಳ್ಳಲು ಇದು ಅನುಕೂಲವಾಗಲಿದೆ. ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹೆಚ್ಚಿಸುವುದು ಹಾಗೂ ಸಂಭಾವ್ಯ ಅಕ್ರಮಗಳನ್ನು ತಡೆಯುವುದು ಈ ಉಪಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ದೇವಸ್ಥಾನದ ಅಧಿಕಾರಿಗಳು ತಿಳಿಸಿದ್ದಾರೆ.

ದೇವಸ್ಥಾನಕ್ಕೆ ಭೇಟಿ ನೀಡುವ ಮೊದಲು ಟಿಕೆಟ್ ಲಭ್ಯತೆ, ಸೂಚನೆಗಳು ಹಾಗೂ ಇತರ ಪ್ರಕಟಣೆಗಳಿಗಾಗಿ ಅಧಿಕೃತ ವೆಬ್‌ಸೈಟ್ ಪರಿಶೀಲಿಸುವಂತೆ ಭಕ್ತರಿಗೆ ಸಲಹೆ ನೀಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular