HomeIndiaBREAKING : ಹಬ್ಬದ ದಿನವೇ ಉತ್ತರ ಪ್ರದೇಶದಲ್ಲಿ ಭೀಕರ ಕಾರು ಅಪಘಾತ ; ಒಂದೇ ಕುಟುಂಬದ...

BREAKING : ಹಬ್ಬದ ದಿನವೇ ಉತ್ತರ ಪ್ರದೇಶದಲ್ಲಿ ಭೀಕರ ಕಾರು ಅಪಘಾತ ; ಒಂದೇ ಕುಟುಂಬದ 6 ಮಂದಿ ಸಜೀವ ದಹನ!

ಮುಜಫರ್‌ನಗರ: ಮುಂಜಾನೆಯೇ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಜೀವ ದಹನವಾಗಿರುವ ದಾರುಣ ಘಟನೆ ಉತ್ತರ ಪ್ರದೇಶದ ಮುಜಫರ್‌ನಗರ ಜಿಲ್ಲೆಯಲ್ಲಿ ನಡೆದಿದೆ. ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಈ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಒಳಗಿದ್ದ ಆರು ಮಂದಿ ಹೊರಬರಲಾಗದೆ ಸಜೀವ ದಹನವಾಗಿದ್ದಾರೆ.

ಹರಿದ್ವಾರಕ್ಕೆ ತೆರಳುತ್ತಿದ್ದಾಗ ದುರಂತ

ಹರಿಯಾಣದ ಜಿಂದ್ ಜಿಲ್ಲೆಯ ಆರು ಮಂದಿ ಹುಂಡೈ ಔರಾ ಕಾರಿನಲ್ಲಿ ಹರಿದ್ವಾರಕ್ಕೆ ಪ್ರಯಾಣಿಸುತ್ತಿದ್ದರು. ಮುಜಫರ್‌ನಗರ ಜಿಲ್ಲೆಯ ತಿಟಾವಿ ಪೊಲೀಸ್ ಠಾಣೆ ವ್ಯಾಪ್ತಿಯ ಜಗಹೇರಿ ಬಳಿ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದೆ. ಬಳಿಕ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ರಸ್ತೆಯಲ್ಲೇ ಪಲ್ಟಿಯಾಗಿದೆ.

ಅಪಘಾತದ ಬೆನ್ನಲ್ಲೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ವಾಹನಕ್ಕೆ ವ್ಯಾಪಿಸಿದೆ. ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ ಕಾರಿನಲ್ಲಿದ್ದವರಿಗೆ ಹೊರಬರಲು ಸಾಧ್ಯವಾಗಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕೆ ಧಾವಿಸಿದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ

ಘಟನೆಯನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ತಿಟಾವಿ ಠಾಣೆಯ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.

ಆದರೆ, ಬೆಂಕಿ ನಿಯಂತ್ರಣಕ್ಕೆ ಬರುವಷ್ಟರಲ್ಲಿ ಕಾರಿನಲ್ಲಿದ್ದ ಆರು ಮಂದಿ ಮೃತಪಟ್ಟಿದ್ದರು. ಮೃತದೇಹಗಳು ತೀವ್ರವಾಗಿ ಸುಟ್ಟು ಕರಕಲಾಗಿದ್ದವು. ಪೊಲೀಸರು ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ

ಘಟನಾ ಸ್ಥಳಕ್ಕೆ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಮಹಾದಿಕ್ ಹಾಗೂ ಫುಗಾನಾ ಸಿಒ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular