HomeKarnatakaಶಾಸಕ ಜನಾರ್ದನ ರೆಡ್ಡಿಗೆ ಶಾಕ್ ಕೊಟ್ಟ ಜಿಲ್ಲಾಡಳಿತ: ಜಿ ಸ್ಕ್ವೇರ್​​​​ ನಿರ್ಮಾಣ ಸಂಸ್ಥೆ ಒತ್ತುವರಿ ಮಾಡಿಕೊಂಡಿದ್ದ...

ಶಾಸಕ ಜನಾರ್ದನ ರೆಡ್ಡಿಗೆ ಶಾಕ್ ಕೊಟ್ಟ ಜಿಲ್ಲಾಡಳಿತ: ಜಿ ಸ್ಕ್ವೇರ್​​​​ ನಿರ್ಮಾಣ ಸಂಸ್ಥೆ ಒತ್ತುವರಿ ಮಾಡಿಕೊಂಡಿದ್ದ ಜಾಗ ತೆರವು

ಬಳ್ಳಾರಿ: ಬಳ್ಳಾರಿ ಜಿಲ್ಲಾಡಳಿತ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಶಾಕ್ ನೀಡಿದೆ. ಜನಾರ್ಧನ ರೆಡ್ಡಿ ಮಾಲೀಕತ್ವದ ಜಿ ಸ್ಕ್ವೇರ್​​​​ ನಿರ್ಮಾಣ ಸಂಸ್ಥೆ ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನು ತೆರವುಗೊಳಿಸಿದೆ.

1 ಎಕರೆ 25 ಗುಂಟೆ ಜಾಗವನ್ನು ಬಳ್ಳಾರಿ ಜಿಲ್ಲಾಡಳಿತದಿಂದ ತೆರವುಗೊಳಿಸಲಾಗಿದೆ. ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡು ಕಾಂಪೌಂಡ್​​​ ನಿರ್ಮಿಸಲಾಗಿತ್ತು. ಇತರರಿಂದ ಒತ್ತುವರಿ ಸೇರಿ ಒಟ್ಟು 4 ಎಕರೆ ಜಾಗ ತೆರವು ಮಾಡಲಾಗಿದ್ದು, ನಾಲ್ಕೂ ಎಕರೆ ಜಾಗದಲ್ಲೂ ಸುಸಜ್ಜಿತ ಕಾಂಪೌಂಡ್ ನಿರ್ಮಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳ್ಳಾರಿ ಎಡಿಸಿ ಜಬೇರ್​ ಅಹ್ಮದ್​ ಮತ್ತು ಎಸಿ ರಾಜೇಶ್​ ನೇತೃತ್ವದಲ್ಲಿ ತೆರವು ಕಾರ್ಯ ನಡೆದಿದೆ. ಇನ್ನು ತೆರವು ಕಾರ್ಯಚರಣೆ ಮುಗಿದ ಬೆನ್ನಲ್ಲೇ, ಕಾಂಪೌಡ್ ವಾಲ್​​ಗಳಿಗೆ ಹಾಕಿದ ಕಬ್ಬಿಣದ ಗ್ರಿಲ್​​ನ ಜನ ಹೊತ್ತೊಯ್ದಿದ್ದಾರೆ.

ಬಳ್ಳಾರಿ-ಬೆಳಗಲ್ಲು ರಸ್ತೆಯಲ್ಲಿರುವ ಜಿ ಸ್ಕ್ವೇರ್ ಲೇಔಟ್‌ಗೆ ಸೇರಿದ ಜಾಗದಲ್ಲಿ ಸರ್ಕಾರಿ ಬಂಡಿ ದಾರಿ ಹಾಗೂ ಹಳ್ಳದ ಜಾಗವನ್ನು ಒತ್ತುವರಿ ಮಾಡಲಾಗಿತ್ತು. ಇದನ್ನು ಮನಗಂಡ ಅಧಿಕಾರಿಗಳು ಒತ್ತುವರಿ ತೆರವುಗೊಳಿಸಿ ಸರ್ಕಾರಿ ಜಾಗವನ್ನು ತನ್ನ ವಶಕ್ಕೆ ಪಡೆದಿದ್ದಾರೆ.

ಈ ಒತ್ತುವರಿ ಜಾಗದಲ್ಲಿ ನಿರ್ಮಿಸಲಾಗಿದ್ದ ಕಾಂಪೌಂಡ್ ಗೋಡೆಗಳು ಹಾಗೂ ಜಿ ಸ್ಕ್ವೇರ್ ಸಂಸ್ಥೆಗೆ ಸೇರಿದ ಇತರ ತಾತ್ಕಾಲಿಕ ನಿರ್ಮಾಣಗಳನ್ನು ಜೆಸಿಬಿ ಯಂತ್ರಗಳ ಮೂಲಕ ನೆಲಸಮಗೊಳಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಭಾರಿ ಪೊಲೀಸ್ ಭದ್ರತೆಯೊಂದಿಗೆ ಈ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದೆ.

ಸರ್ಕಾರಿ ಜಮೀನು ಒತ್ತುವರಿಯಾದಲ್ಲಿ ಮುಲಾಜಿಲ್ಲದೇ ತೆರವುಗೊಳಿಸುವಂತೆ ಜಿಲ್ಲಾಡಳಿದ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಒಟ್ಟು ನಾಲ್ಕು ಎಕರೆ ಜಾಗ ಒತ್ತುವರಿ ತೆರವುಗೊಳಿಸಲಾಗಿದೆ. ಒತ್ತುವರಿ ತೆರವು ಬಳಿಕ ಈ ಜಾಗದಲ್ಲಿ ಸರ್ಕಾರಿ ಸ್ವತ್ತು ಎಂದು ಬೋರ್ಡ್ ಅಳವಡಿಸಲಾಗಿದೆ. ಅಲ್ಲದೇ ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡಿದ್ದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular