HomeKarnatakaBREAKING : ಡಾ.ರಾಜ್‌ಕುಮಾರ್ ಸಂಬಂಧಿ ಮನೆಯಲ್ಲಿ ಸ್ಫೋಟಗೊಂಡಿದ್ದು ಪಟಾಕಿ; ಪೊಲೀಸರ ಸ್ಪಷ್ಟನೆ, ಐವರು ವಶಕ್ಕೆ!

BREAKING : ಡಾ.ರಾಜ್‌ಕುಮಾರ್ ಸಂಬಂಧಿ ಮನೆಯಲ್ಲಿ ಸ್ಫೋಟಗೊಂಡಿದ್ದು ಪಟಾಕಿ; ಪೊಲೀಸರ ಸ್ಪಷ್ಟನೆ, ಐವರು ವಶಕ್ಕೆ!

ವರನಟ ಡಾ. ರಾಜ್‌ಕುಮಾರ್ ಅವರ ಕುಟುಂಬದ ಸಂಬಂಧಿಕರ ಮನೆಯಲ್ಲಿ ಸಂಭವಿಸಿದ್ದ ನಿಗೂಢ ಸ್ಫೋಟ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಆರಂಭದಲ್ಲಿ ಕಚ್ಚಾ ಬಾಂಬ್ ದಾಳಿ ನಡೆದಿರಬಹುದು ಎಂಬ ಅನುಮಾನ ವ್ಯಕ್ತವಾಗಿತ್ತು. ಆದರೆ ಪೊಲೀಸರ ಸ್ಪಷ್ಟನೆಯ ಪ್ರಕಾರ, ಮನೆಯಲ್ಲಿ ಸಂಭವಿಸಿದ ಸ್ಫೋಟಕ್ಕೆ ಪಟಾಕಿಯೇ ಕಾರಣ ಎನ್ನಲಾಗಿದೆ. ಮತ್ತೊಂದೆಡೆ, ಪ್ರಕರಣದ ತನಿಖೆ ಮುಂದುವರಿಸಿರುವ ತಮಿಳುನಾಡು ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪಟಾಕಿ ಸ್ಫೋಟದಿಂದ ಆತಂಕ!

ತಮಿಳುನಾಡಿನ ಈರೋಡ್ ಜಿಲ್ಲೆಯ ತಾಳವಾಡಿ ಸಮೀಪದ ದೊಡ್ಡ ಗಾಜನೂರಿನಲ್ಲಿ ಈ ಘಟನೆ ನಡೆದಿದೆ. ಡಾ. ರಾಜ್‌ಕುಮಾರ್ ಅವರ ಸಂಬಂಧಿ ಮನೆ ಮುಂದೆ ರಾತ್ರಿ ಸುಮಾರು 10.22ರ ವೇಳೆಗೆ ಸ್ಫೋಟ ಸಂಭವಿಸಿತ್ತು. ಸ್ಫೋಟದ ತೀವ್ರತೆಗೆ ಮನೆಯ ಕಿಟಕಿ ಗಾಜುಗಳು ಪುಡಿಪುಡಿಯಾಗಿದ್ದವು. ಘಟನೆಯಿಂದ ಮನೆಯವರು ಆತಂಕಕ್ಕೊಳಗಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರಂಭದಲ್ಲಿ ಕಚ್ಚಾ ಬಾಂಬ್ ಎಸೆಯಲಾಗಿದೆಯೇ ಎಂಬ ಅನುಮಾನ ವ್ಯಕ್ತವಾಗಿತ್ತು. ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿ ಸ್ಫೋಟವಾಗಿರುವ ಸಾಧ್ಯತೆಯ ಬಗ್ಗೆಯೂ ಚರ್ಚೆ ನಡೆದಿತ್ತು. ಇದೀಗ ಪೊಲೀಸರ ಸ್ಪಷ್ಟನೆಯ ಪ್ರಕಾರ ಪಟಾಕಿಯಿಂದಲೇ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ.

ಘಟನೆ ಕುರಿತು ಮಾಹಿತಿ ನೀಡಿರುವ ಡಾ.ರಾಜ್‌ಕುಮಾರ್ ಅವರ ಸಹೋದರಿಯ ಮೊಮ್ಮಗಳು ಮನೋಜ್ಞ, ಸ್ಫೋಟದ ಸದ್ದು ಕೇಳುತ್ತಿದ್ದಂತೆ ಮನೆಯಿಂದ ಹೊರಬಂದಾಗ ಇಬ್ಬರು ವ್ಯಕ್ತಿಗಳು ಓಡಿಹೋಗುತ್ತಿರುವುದು ಕಂಡುಬಂದಿದೆ . ಅವರನ್ನು ಹಿಂಬಾಲಿಸಿ ವಿಡಿಯೋ ಕೂಡ ಮಾಡಲಾಗಿದೆ. ಆ ಯುವಕರು ತಮ್ಮ ಊರಿನವರೇ ಎಂದು ಮನೋಜ್ಞ ಮಾಹಿತಿ ನೀಡಿದ್ದರು.

 ಐವರನ್ನು ವಶಕ್ಕೆ ಪಡೆದ ಪೊಲೀಸರು

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಸ್ಫೋಟ ಸಂಭವಿಸಿದ ಸಂದರ್ಭದಲ್ಲಿ ಕೆಲವರು ಸ್ಥಳದಿಂದ ಓಡಿಹೋಗಿರುವುದಾಗಿ ಕುಟುಂಬದ ಸದಸ್ಯರು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ.

ಅದೃಷ್ಟವಶಾತ್ ಪ್ರಾಣಾಪಾಯವಿಲ್ಲ

ಸ್ಫೋಟ ಸಂಭವಿಸಿದಾಗ ಮನೆಯಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ ಎನ್ನಲಾಗಿದೆ. ಆದರೆ ಮನೆಯ ಕಿಟಕಿ ಗಾಜುಗಳು ಒಡೆದುಹೋಗಿರುವುದು ಕುಟುಂಬದ ಸದಸ್ಯರಿಗೆ ಆಘಾತ ಉಂಟುಮಾಡಿತ್ತು.ಒಟ್ಟಿನಲ್ಲಿ, ಕಚ್ಚಾ ಬಾಂಬ್ ದಾಳಿ ಎಂಬ ಅನುಮಾನದಿಂದ ಸುದ್ದಿಯಾಗಿದ್ದ ಪ್ರಕರಣ ಇದೀಗ ಪಟಾಕಿ ಸ್ಫೋಟದ ವಿಚಾರವಾಗಿ ಹೊಸ ತಿರುವು ಪಡೆದುಕೊಂಡಿದೆ.

ಬಳ್ಳಾರಿಯಲ್ಲಿ 4 ಎಕರೆ ಸರ್ಕಾರಿ ಜಮೀನು ವಶಕ್ಕೆ ಪಡೆದ ಜಿಲ್ಲಾಡಳಿತ

ಸರ್ಕಾರಿ ಜಮೀನು ಒತ್ತುವರಿದಾರರ ವಿರುದ್ಧ ಬಳ್ಳಾರಿ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದ್ದು, ಸೋಮವಾರ ಬೆಳ್ಳಂಬೆಳಗ್ಗೆ ಜೆಸಿಬಿ ಯಂತ್ರಗಳೊಂದಿಗೆ ಕಾರ್ಯಾಚರಣೆ ನಡೆಸಿ ಸುಮಾರು 4 ಎಕರೆ ಸರ್ಕಾರಿ ಜಮೀನನ್ನು ವಶಕ್ಕೆ ಪಡೆದಿದೆ. ನಗರದ ಗೌತಮ್ ನಗರ ಬಡಾವಣೆಯ ಸರ್ವೆ ನಂಬರ್ 607/* 1ಎ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಸರ್ವೆ ನಂಬರ್ 607/* 1ಎ ವ್ಯಾಪ್ತಿಯಲ್ಲಿ ಸುಮಾರು 1 ಎಕರೆ 23 ಸೆಂಟ್ಸ್ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡು ದೊಡ್ಡದಾದ ಕಾಂಪೌAಡ್ ನಿರ್ಮಿಸಲಾಗಿತ್ತು. ಅಲ್ಲದೆ, ಸಾರ್ವಜನಿಕ ರಸ್ತೆಯನ್ನು ಕೂಡ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಗಂಭೀರ ಆರೋಪವಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಕಾನೂನು ಕ್ರಮ ಕೈಗೊಂಡು ಒತ್ತುವರಿ ಮಾಡಲಾಗಿದ್ದ ಕಾಂಪೌAಡ್ ವಾಲ್ ಅನ್ನು ಜೆಸಿಬಿ ಬಳಸಿ ತೆರವುಗೊಳಿಸಿದೆ.

ಇದೇ ಸರ್ವೆ ನಂಬರ್ ನಲ್ಲಿ ಸುಮಾರು 14 ವರ್ಷಗಳ ಹಿಂದೆ ಹಿಂದುಳಿದ ಹಾಗೂ ಬುದ್ಧಿಮಾಂದ್ಯ ಮಕ್ಕಳ ಕಲ್ಯಾಣಕ್ಕಾಗಿ ‘ಆರೋಗ್ಯ ನಿಕೇತನ ಟ್ರಸ್ಟ್’ಗೆ 2 ಎಕರೆ 77 ಸೆಂಟ್ಸ್ ಜಮೀನು ಮಂಜೂರು ಮಾಡಲಾಗಿತ್ತು. ಸರ್ಕಾರದ ನಿಯಮಗಳ ಪ್ರಕಾರ ಮಂಜೂರಾದ ಜಮೀನನ್ನು 2 ವರ್ಷಗಳೊಳಗೆ ಉದ್ದೇಶಿತ ಸಮಾಜಮುಖಿ ಕಾರ್ಯಕ್ಕೆ ಬಳಸಬೇಕಿತ್ತು. ಆದರೆ, ನಿಗದಿತ ಅವಧಿಯಲ್ಲಿ ಜಮೀನು ಬಳಕೆಯಾಗದ ಕಾರಣ, ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, ಜಮೀನಿನ ಮಂಜೂರಾತಿಯನ್ನು ರದ್ದುಪಡಿಸಿ ಸರ್ಕಾರಕ್ಕೆ ಹಿಂಪಡೆಯಲಾಗಿದೆ.

ಒಟ್ಟಾರೆಯಾಗಿ ಒಂದೇ ಸರ್ವೆ ನಂಬರ್ ನಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಸುಮಾರು 4 ಎಕರೆ ಜಮೀನನ್ನು ಜಿಲ್ಲಾಡಳಿತ ತೆರವುಗೊಳಿಸಿದ್ದು, 17ನೇ ಕಾರ್ಯಾಚರಣೆ ಇದಾಗಿದೆ.

ಟಾಸ್ಕ್ ಫೋರ್ಸ್ ನಿಂದ ಇದುವರೆಗೆ 150 ಎಕರೆ ಜಮೀನು ವಶ:

ಬಳ್ಳಾರಿ ಜಿಲ್ಲೆಯಲ್ಲಿ ಸರ್ಕಾರಿ ಆಸ್ತಿಗಳ ರಕ್ಷಣೆ ಹಾಗೂ ಒತ್ತುವರಿ ತೆರವಿಗೆ ವಿಶೇಷ ಆದ್ಯತೆ ನೀಡಲಾಗಿದೆ. ಜಿಲ್ಲೆಯಲ್ಲಿ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಲು ಟಾಸ್ಕ್ ಫೋರ್ಸ್ ರಚನೆಯಾದ ಬಳಿಕ, ಇದುವರೆಗೆ ಬರೋಬ್ಬರಿ 150 ಎಕರೆಗೂ ಅಧಿಕ ಸರ್ಕಾರಿ ಜಮೀನನ್ನು ಒತ್ತುವರಿದಾರರಿಂದ ಮುಕ್ತಗೊಳಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ತಿಳಿಸಿದರು.

ಟಾಸ್ಕ್ ಫೋರ್ಸ್ ನಲ್ಲಿ ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಬಳ್ಳಾರಿ ತಾಲೂಕು ತಹಶೀಲ್ದಾರ ನರಸಪ್ಪ ಸೇರಿದಂತೆ ಕಂದಾಯ ಅಧಿಕಾರಿಗಳು, ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಗೂ ಇತರರು ಹಾಜರಿದ್ದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular