ಬೆಂಗಳೂರು: ರಾಜ್ಯದ ರೈತರಿಗೆ ಬರ ಪರಿಹಾರದ ಕುರಿತು ಯಾವುದೇ ಗೊಂದಲ ಬೇಡ. ಮೊದಲ ಕಂತಿನಲ್ಲಿ ಬಿಡುಗಡೆಯಾಗಿರುವ ಹಣವೇ ಅಂತಿಮವಲ್ಲ. ಎಲ್ಲಾ ಅರ್ಹ ರೈತರಿಗೆ ಕನಿಷ್ಠ ₹5,000 ಬರ ಪರಿಹಾರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮೊದಲ ಕಂತಿನಲ್ಲಿ ₹2,000 ಅಥವಾ ₹2,500 ಪಡೆದಿರುವ ರೈತರಿಗೆ ಉಳಿದ ಬಾಕಿ ಹಣವನ್ನು ಮುಂದಿನ ಕಂತಿನಲ್ಲಿ ಪಾವತಿಸಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಇದಲ್ಲದೆ, ಬೆಳೆ ನಷ್ಟದ ಪ್ರಮಾಣ ಹಾಗೂ ಅನ್ವಯಿಸುವ ನಿಯಮಗಳ ಆಧಾರದ ಮೇಲೆ ಅರ್ಹ ರೈತರು ₹60,000ವರೆಗೆ ಇನ್ಪುಟ್ ಸಬ್ಸಿಡಿ ನೆರವು ಪಡೆಯಲು ಅವಕಾಶವಿದೆ. ರೈತರಿಗೆ ಪೂರ್ಣ ಪ್ರಮಾಣದ ಪರಿಹಾರ ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ.ಹೀಗಾಗಿ, ಮೊದಲ ಕಂತಿನಲ್ಲಿ ಕಡಿಮೆ ಹಣ ಬಂದಿದೆ ಎಂದು ರೈತರು ಆತಂಕಪಡುವ ಅಗತ್ಯವಿಲ್ಲ. ಬಾಕಿ ಮೊತ್ತವನ್ನು ಮುಂದಿನ ಕಂತಿನಲ್ಲಿ ಪಾವತಿಸಲಾಗುವುದು. ಬರ ಪರಿಹಾರದ ಕುರಿತು ಹರಿದಾಡುವ ತಪ್ಪು ಮಾಹಿತಿ ಹಾಗೂ ವದಂತಿಗಳಿಗೆ ರೈತರು ಕಿವಿಗೊಡಬಾರದು ಎಂದು ಮನವಿ ಮಾಡಲಾಗಿದೆ.ಈ ಕುರಿತು ಸಿಎಂ ಡಿಕೆ ಶಿವಕುಮಾರ್ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಸಿಎಂ ಡಿಕೆಶಿ ಟ್ವೀಟ್
ಬರ ಪರಿಹಾರದ ಬಗ್ಗೆ ಗೊಂದಲ ಬೇಡ; ಎಲ್ಲ ಅರ್ಹ ರೈತರಿಗೂ ₹5,000 ನೆರವು ರಾಜ್ಯದ ರೈತ ಬಾಂಧವರಲ್ಲಿ ಬರ ಪರಿಹಾರದ ಕುರಿತು ಯಾವುದೇ ಗೊಂದಲ ಬೇಡ. ಮೊದಲ ಕಂತಿನಲ್ಲಿ ಬಿಡುಗಡೆಯಾಗಿರುವ ಹಣವೇ ಅಂತಿಮವಲ್ಲ. SDRF/NDRF ನಿಯಮಗಳಡಿ ಮಳೆಯಾಶ್ರಿತ, ನೀರಾವರಿ ಹಾಗೂ ಬಹುವಾರ್ಷಿಕ ಬೆಳೆಗಳಿಗೆ ಕ್ರಮವಾಗಿ ₹1,500, ₹2,600 ಮತ್ತು ₹3,200 ಕನಿಷ್ಠ ಪರಿಹಾರ ನಿಗದಿಯಾಗಿದೆ. ಆದರೆ, ರಾಜ್ಯ ಸರ್ಕಾರ ಈ ಮೂರೂ ವರ್ಗದ ಬೆಳೆಗಳಿಗೂ ಕನಿಷ್ಠ ₹5,000 ಬರ ಪರಿಹಾರ ನೀಡಲಿದೆ. ಈ ಹೆಚ್ಚುವರಿ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಮೊದಲ ಕಂತಿನಲ್ಲಿ ₹2,000 ಅಥವಾ ₹2,500 ಪಡೆದ ರೈತರಿಗೆ ಬಾಕಿ ಹಣ ಮುಂದಿನ ಕಂತಿನಲ್ಲಿ ಪಾವತಿಯಾಗಲಿದೆ. ಅರ್ಹ ರೈತರು ಬೆಳೆ ನಷ್ಟದ ಆಧಾರದ ಮೇಲೆ ₹60,000ವರೆಗೆ ಇನ್ಪುಟ್ ಸಬ್ಸಿಡಿ ನೆರವನ್ನು ಪಡೆಯಬಹುದು. ರೈತರಿಗೆ ಪೂರ್ಣ ಪರಿಹಾರ ತಲುಪಿಸಲು ಸರ್ಕಾರ ಬದ್ಧವಾಗಿದ್ದು, ತಪ್ಪು ಮಾಹಿತಿ, ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸಿಎಂ ಡಿಕೆ ಶಿವಕುಮಾರ್ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ನವೆಂಬರ್ 13 ರಂದು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಿಂದ ನೇರ ಸಂದರ್ಶನ
ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಶಿವಮೊಗ್ಗ ವತಿಯಿಂದ ದಿನಾಂಕ 13-11-2026 ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಈ ನೇರ ಸಂದರ್ಶನದಲ್ಲಿ ‘ಸಾಯಿ ಇಂಡಿಯಾ ಪ್ರೈ. ಲಿ.’ ಖಾಸಗಿ ಕಂಪನಿಯು ಭಾಗವಹಿಸುತ್ತಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.
ಶೈಕ್ಷಣಿಕ ಅರ್ಹತೆ: ಐಟಿಐ ಮತ್ತು ಯಾವುದೇ ವಿಷಯದಲ್ಲಿ ಡಿಪ್ಲೊಮಾ ಮಾಡಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು.
ಪ್ರವೇಶ ಉಚಿತವಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ರಿಸ್ಯೂಮ್ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 9380663606, 9108235132 ಮೂಲಕ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

