ಬೆಂಗಳೂರು: ನಿಮ್ಮ ಮನೆಯ ರೇಷನ್ ಕಾರ್ಡ್ನಲ್ಲಿ ಇನ್ನೂ ಇ-ಕೆವೈಸಿ ಅಪ್ಡೇಟ್ ಮಾಡಿಸಿಲ್ಲವೇ? ಗಡುವು ಮುಗಿಯುವ ಆತಂಕದಲ್ಲಿದ್ದೀರಾ? ಹಾಗಾದರೆ ನಿಮಗೊಂದು ಸಿಹಿ ಸುದ್ದಿ ಇದೆ. ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮತ್ತಷ್ಟು ಕಾಲಾವಕಾಶ ನೀಡಿದ್ದು, ಕಡ್ಡಾಯ ಇ-ಕೆವೈಸಿ (e-KYC) ಪೂರ್ಣಗೊಳಿಸುವ ಕೊನೆಯ ದಿನಾಂಕವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ವರದಿಯಾಗಿದೆ.
ಸರ್ಕಾರದ ಪಡಿತರ ಸೌಲಭ್ಯವನ್ನು ಅವಲಂಬಿಸಿರುವ ಸಾವಿರಾರು ಕುಟುಂಬಗಳಿಗೆ ಈ ನಿರ್ಧಾರದಿಂದ ನೆಮ್ಮದಿ ಸಿಕ್ಕಂತಾಗಿದೆ. ಅದರಲ್ಲೂ ಕೆಲಸದ ಒತ್ತಡ, ವೈಯಕ್ತಿಕ ಕಾರಣಗಳು ಅಥವಾ ತಾಂತ್ರಿಕ ಸಮಸ್ಯೆಗಳಿಂದಾಗಿ ಇ-ಕೆವೈಸಿ ಮಾಡಿಸಿಕೊಳ್ಳಲು ಸಾಧ್ಯವಾಗದಿದ್ದವರಿಗೆ ಈಗ ಮತ್ತೊಂದು ಅವಕಾಶ ಲಭಿಸಿದೆ.
ಈ ಹಿಂದೆ ನವೆಂಬರ್ 10 ಇ-ಕೆವೈಸಿ ಪೂರ್ಣಗೊಳಿಸಲು ಕೊನೆಯ ದಿನವಾಗಿತ್ತು. ಇದೀಗ ಗಡುವು ವಿಸ್ತರಣೆಯಾಗಿರುವುದರಿಂದ ಬಾಕಿ ಉಳಿಸಿಕೊಂಡಿರುವ ಫಲಾನುಭವಿಗಳು ಆತಂಕಪಡಬೇಕಿಲ್ಲ. ಆದರೆ ಕೊನೆಯ ದಿನದವರೆಗೆ ಕಾಯದೆ ಆದಷ್ಟು ಬೇಗ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳುವುದು ಉತ್ತಮ.
ಇ-ಕೆವೈಸಿ ಮಾಡಿಸುವುದು ಹೇಗೆ?
ಪಡಿತರ ಚೀಟಿದಾರರು ಎರಡು ವಿಧಾನಗಳ ಮೂಲಕ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬಹುದು.
1. ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ: ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ತೆರಳಿ ಅಗತ್ಯ ದಾಖಲೆಗಳನ್ನು ಒದಗಿಸಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು.
2. ಅನ್ನಸೇವೆ ಆ್ಯಪ್ ಮೂಲಕ: ಮೊಬೈಲ್ನಲ್ಲಿ Anna Seva App ಬಳಸಿ ಮನೆಯಲ್ಲಿಯೇ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳುವ ಅವಕಾಶವಿದೆ.
ಇ-ಕೆವೈಸಿ ಮಾಡಿಸದಿದ್ದರೆ ರೇಷನ್ ಸಿಗುವುದಿಲ್ಲವೇ?
ಪಡಿತರ ಚೀಟಿಗೆ ಸಂಬಂಧಿಸಿದ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವುದು ಕಡ್ಡಾಯವಾಗಿರುವುದರಿಂದ, ಇದನ್ನು ನಿರ್ಲಕ್ಷಿಸುವುದು ಸೂಕ್ತವಲ್ಲ. ಗಡುವಿನೊಳಗೆ ಪ್ರಕ್ರಿಯೆ ಪೂರ್ಣಗೊಳಿಸದಿದ್ದರೆ ಪಡಿತರ ಸೌಲಭ್ಯ ಪಡೆಯುವಲ್ಲಿ ತೊಂದರೆ ಎದುರಾಗುವ ಸಾಧ್ಯತೆಯಿದೆ. ಆದ್ದರಿಂದ ಕುಟುಂಬದ ಪಡಿತರ ಚೀಟಿಯಲ್ಲಿ ಯಾರಾದರೂ ಇ-ಕೆವೈಸಿ ಮಾಡಿಸಿಕೊಳ್ಳುವುದು ಬಾಕಿ ಇದ್ದರೆ ತಕ್ಷಣವೇ ಕ್ರಮ ಕೈಗೊಳ್ಳಿ.
: ನವೆಂಬರ್ 30ರವರೆಗೆ ಮಾತ್ರ ಅವಕಾಶವಿದೆ ಎಂದು ವರದಿಯಾಗಿರುವುದರಿಂದ ಕೊನೆಯ ಕ್ಷಣದವರೆಗೆ ಕಾಯಬೇಡಿ. ನಿಮ್ಮ ರೇಷನ್ ಕಾರ್ಡ್ನಲ್ಲಿರುವ ಎಲ್ಲಾ ಅರ್ಹ ಸದಸ್ಯರ ಇ-ಕೆವೈಸಿ ಸ್ಥಿತಿಯನ್ನು ಪರಿಶೀಲಿಸಿ, ಅಗತ್ಯ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳಿ.
*ತಾಂತ್ರಿಕ / ವಾಹನ ಚಾಲಕ ಹುದ್ದೆಗೆ ಮಾಜಿ ಸೈನಿಕರಿಂದ ಆನ್ಲೈನ್ ಅರ್ಜಿ ಆಹ್ವಾನ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ, ಬೆಂಗಳೂರು ವತಿಯಿಂದ ವಿವಿಧ ತಾಂತ್ರಿಕ ಹಾಗೂ ಭಾರೀ ವಾಹನ ಮತ್ತು ಲಘು ವಾಹನಗಳ ಚಾಲಕರ ಹುದ್ದೆಗಳಿಗೆ ಮಾಜಿ ಸೈನಿಕರುಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆಯ ಅರ್ಹತೆ ಆಧಾರದ ಮೇಲೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆ ಈಗಾಗಲೇ ಚಾಲ್ತಿಯಲ್ಲಿದ್ದು, www.isro.gov.in ಅಥವಾ www.ursc.gov.in ಜಾಲತಾಣದ ಮೂಲಕ ನ. 13 ರೊಳಗಾಗಿ ಅರ್ಜಿಗಳನ್ನು ಸಲ್ಲಿಸುವುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಮೇಲೆ ತಿಳಿಸಲಾಗಿರುವ ಜಾಲತಾಣವನ್ನು ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ(ಪ್ರ) ಡಾ. ಸಿ.ಎ. ಹಿರೇಮಠ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

