HomeKarnatakaಅರಣ್ಯ ಇಲಾಖೆ ಮಹತ್ವದ ಸೂಚನೆ: ರಾಜ್ಯಾದ್ಯಂತ ಕೋನೋಕಾರ್ಪಸ್ ಗಿಡಗಳ ತೆರವಿಗೆ ಆದೇಶ

ಅರಣ್ಯ ಇಲಾಖೆ ಮಹತ್ವದ ಸೂಚನೆ: ರಾಜ್ಯಾದ್ಯಂತ ಕೋನೋಕಾರ್ಪಸ್ ಗಿಡಗಳ ತೆರವಿಗೆ ಆದೇಶ

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ನೆಡಲಾಗಿರುವ ಕೋನೋಕಾರ್ಪಸ್ ಗಿಡಗಳನ್ನು ತೆರವುಗೊಳಿಸಿ, ಅವುಗಳ ಬದಲಿಗೆ ಸ್ಥಳೀಯ ಜಾತಿಯ ಗಿಡಗಳನ್ನು ನೆಡುವ ಕುರಿತು ನಿಯಮಾನುಸಾರ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಅರಣ್ಯ ಇಲಾಖೆ ಸೂಚಿಸಿದೆ.

ಅರಣ್ಯ ಇಲಾಖೆಯ ಈ ಸೂಚನೆಗೆ ಕಾರಣವೇನು? ಗಿಡ ತೆರವು ಮಾಡುತ್ತಿರುವುದೇಕೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ನೆಡಲಾಗಿರುವ ಕೋನೋಕಾರ್ಪಸ್ ಗಿಡಗಳನ್ನು ನಿಷೇಧಿಸಿ ತೆರವುಗೊಳಿಸುವಂತೆ ಹಲವು ವರ್ಷಗಳಿಂದ ಕೇಳಿಬಂಡಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಗಿಡ ತೆರವಿಗೆ ಮುಂದಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ನೆಡಲಾಗಿರುವ ಕೋನೋಕಾರ್ಪಸ್ ಗಿಡಗಳನ್ನು ತೆರವುಗೊಳಿಸಿ, ಅವುಗಳ ಬದಲಿಗೆ ಸ್ಥಳೀಯ ಜಾತಿಯ ಗಿಡಗಳನ್ನು ನೆಡುವ ಕುರಿತು ನಿಯಮಾನುಸಾರ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ರಾಜ್ಯದಾದ್ಯಂತ ರಸ್ತೆ ಬದಿ ಹಾಗೂ ಅರಣ್ಯ ಇಲಾಖೆ, ಬಿಬಿಎಂಪಿ, ಬಿಡಿಎ ಮತ್ತು ಪಂಚಾಯಿತಿ ವ್ಯಾಪ್ತಿಯ ಪ್ರದೇಶಗಳಲ್ಲಿ ಕೋನೋಕಾರ್ಪಸ್ ಗಿಡಗಳನ್ನು ನೆಡಲಾಗಿದೆ. ನಗರ ಸೌಂದರ್ಯಕ್ಕಾಗಿ ನೆಡಲಾಗಿದ್ದ ಈ ಗಿಡಗಳು ಸಾರ್ವಜನಿಕರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದ್ದು, ಅಸ್ತಮಾ, ಅಲರ್ಜಿ, ನೆಗಡಿ ಹಾಗೂ ಉಸಿರಾಟದ ಸಮಸ್ಯೆಗಳಿಗೆ ಕಾರಣವಾಗುತ್ತಿವೆ ಎಂಬ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕೋನೋಕಾರ್ಪಸ್ ಗಿಡಗಳ ಬಗ್ಗೆ ಪರಿಸರವಾದಿಗಳು ಆತಂಕ ವ್ಯಕ್ತಪಡಿಸುತ್ತಿದ್ದರು.

ಈ ಸಂಬಂಧ ಪರಿಸರವಾದಿ ‘ಪರಿಸರ ಮಂಜುನಾಥ್’ ಅವರು ‘ಮುಖ್ಯಸ್ಥಾವೋ ಬಜಾವೋ’ ಆಂದೋಲನ ಸಮಿತಿಯ ವತಿಯಿಂದ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಪರಿಸರ ಮತ್ತು ಆರೋಗ್ಯದ ದೃಷ್ಟಿಯಿಂದ ಕೋನೋಕಾರ್ಪಸ್ ಗಿಡಗಳನ್ನು ಸಂಪೂರ್ಣವಾಗಿ ಬೇರು ಸಮೇತ ತೆರವುಗೊಳಿಸಿ, ಅವುಗಳ ಸ್ಥಳದಲ್ಲಿ ಸ್ಥಳೀಯ ಜಾತಿಯ ಗಿಡಗಳನ್ನು ನೆಟ್ಟು ಪೋಷಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿತ್ತು.

ಮನವಿಯನ್ನು ಪರಿಗಣಿಸಿರುವ ಕರ್ನಾಟಕ ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಈ ಕುರಿತು ಅಧಿಕೃತ ಪತ್ರ ಹೊರಡಿಸಿದೆ. ಕೋನೋಕಾರ್ಪಸ್ ಗಿಡಗಳನ್ನು ತೆರವುಗೊಳಿಸಿ ಸ್ಥಳೀಯ ಜಾತಿಯ ಗಿಡಗಳನ್ನು ನೆಡುವ ಕುರಿತು ನಿಯಮಾನುಸಾರ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಕೈಗೊಂಡ ಕ್ರಮದ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಿಗೆ ಮಾಹಿತಿ ನೀಡುವಂತೆ ಹಾಗೂ ಅರ್ಜಿದಾರರಿಗೂ ವರದಿ ಸಲ್ಲಿಸುವಂತೆ ಪತ್ರದಲ್ಲಿ ತಿಳಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular