HomeKarnatakaಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ: ಇಂದು ಮತ್ತು ನಾಳೆ ಮಾಂಸ, ಮದ್ಯದ ಅಂಗಡಿಗಳು ಬಂದ್

ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ: ಇಂದು ಮತ್ತು ನಾಳೆ ಮಾಂಸ, ಮದ್ಯದ ಅಂಗಡಿಗಳು ಬಂದ್

ಬೆಂಗಳೂರು ನಗರ ಜಿಲ್ಲೆ :   ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಕಾರದ ವತಿಯಿಂದ ನವೆಂಬರ್ 13 ರಂದು ‘ಪ್ರಶಾಂತಿ ಕುಟೀರ’ದಲ್ಲಿ ನಡೆಯಲಿರುವ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನ್ಯ ಪ್ರಧಾನಮಂತ್ರಿಗಳು ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಾಗೂ ಭದ್ರತಾ ಹಿತದೃಷ್ಟಿಯಿಂದ ಮಾಂಸದ ಅಂಗಡಿಗಳನ್ನು ಮುಚ್ಚಲು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕಾಂತರಾಜು ಪಿ.ಎಸ್ ಅವರು ಆದೇಶ ಹೊರಡಿಸಿದ್ದಾರೆ.

 ಪ್ರಧಾನಮಂತ್ರಿಗಳ ಭದ್ರತೆ ಹಾಗೂ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-2023 ರ ಸೆಕ್ಷನ್ 163(1) ರಡಿ ಪದತ್ತವಾದ ಅಧಿಕಾರವನ್ನು ಚಲಾಯಿಸಿ ನವೆಂಬರ್ 12 ರ ಬೆಳಿಗ್ಗೆ 6 ಗಂಟೆಯಿಂದ ನವೆಂಬರ್ 13 ರ ಸಂಜೆ 4 ಗಂಟೆಯವರೆಗೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಜಿಗಣಿ ಹೋಬಳಿಯ ಕಲ್ಲುಬಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

 ಮದ್ಯದಂಗಡಿಗಳು ಬಂದ್

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಕಾರದ ವತಿಯಿಂದ ನವೆಂಬರ್ 13 ರಂದು ‘ಪ್ರಶಾಂತಿ ಕುಟೀರ’ದಲ್ಲಿ ನಡೆಯಲಿರುವ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನ್ಯ ಪ್ರಧಾನಮಂತ್ರಿಗಳು ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಾಗೂ ಭದ್ರತಾ ಹಿತದೃಷ್ಟಿಯಿಂದ ಮದ್ಯದಂಗಡಿಗಳನ್ನು ಮುಚ್ಚಲು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕಾಂತರಾಜು ಪಿ.ಎಸ್ ಅವರು ಆದೇಶ ಹೊರಡಿಸಿದ್ದಾರೆ.

 ಪ್ರಧಾನಮಂತ್ರಿಗಳ ಭದ್ರತೆ ಹಾಗೂ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ಸನ್ನದುಗಳು, ಸಾಮಾನ್ಯ ಷರತ್ತುಗಳು ನಿಯಮಗಳು 1967ರ ನಿಯಮ -10 (ಬಿ) ರಂತೆ ಪದತ್ತವಾದ ಅಧಿಕಾರವನ್ನು ಚಲಾಯಿಸಿ ನವೆಂಬರ್ 12 ರ ಬೆಳಿಗ್ಗೆ 6 ಗಂಟೆಯಿಂದ ನವೆಂಬರ್ 13 ರ ಸಂಜೆ 4 ಗಂಟೆಯವರೆಗೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಜಿಗಣಿ ಹೋಬಳಿಯ ಕಲ್ಲುಬಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಧ್ಯದ ಅಂಗಡಿಗಳನ್ನು (ವೈನ್ ಸ್ಟೋರ್ಗಳು ಹಾಗೂ ಬಾರ್ ಮತ್ತು ರೆಸ್ಟೋರೆಂಟ್ಗಳನ್ನು) ಮುಚ್ಚುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.

ಎಸ್ .ಐ.ಆರ್ ಪಟ್ಟಿಯಲ್ಲಿ ಇಲ್ಲದ ಮತದಾರರು ನಮೂನೆ-6 ಸಲ್ಲಿಸಲು ಅವಕಾಶ:ಕಾಂತರಾಜು ಪಿ.ಎಸ್

ಕೇಂದ್ರ ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2026 ರ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಕಂಡುಬರದ ಹಿಂದಿನ ಮತದಾರರು ನಮೂನೆ-6 ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕಾಂತರಾಜು.ಪಿ.ಎಸ್ ಅವರು ತಿಳಿಸಿದ್ದಾರೆ .

ಮತದಾರರೊಬ್ಬರು ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದು, ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2026 (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಅಥವಾ ತದನಂತರ ನಮೂನೆ-6 (Form 6) ನ್ನು ಸಲ್ಲಿಸಿರುತ್ತಾರೆ ಎಂಬ ಕಾರಣಕ್ಕಾಗಿ ಮಾತ್ರ, ಆ ಮತದಾರರ ವಿರುದ್ಧ ಮತದಾರರ ನೋಂದಣಾಧಿಕಾರಿಗಳು (ERO), ಪ್ರಜಾಪ್ರತಿನಿಧಿ ಕಾಯ್ದೆ, 1950 ರ ಕಲಂ 31 ರ ಅಡಿಯಲ್ಲಿ ಯಾವುದೇ ಕ್ರಮ ಜರುಗಿಸುವಂತಿಲ್ಲ. ಆದರೆ, ಆ ಮತದಾರರು ಬೇರೆ ಯಾವುದೇ ಲೋಕಸಭಾ ಅಥವಾ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ನೋಂದಾಯಿತರಾಗಿರಬಾರದು ಹಾಗೂ ಅವರು ಸಲ್ಲಿಸಿರುವ ಘೋಷಣೆಯು (Declaration) ಕಾನೂನಿನ ನಿಯಮಾವಳಿಗಳಿಗೆ ಅನುಸಾರವಾಗಿರಬೇಕು ಎಂಬ ಷರತ್ತಿಗೊಳಪಟ್ಟಿರುತ್ತದೆ ಎಂದು ಭಾರತ ಚುನಾವಣಾ ಆಯೋಗ ಸ್ಪಷ್ಟೀಕರಣ ನೀಡಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

 

 

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular