HomeIndiaಈಶಾನ್ಯ ದೆಹಲಿಯಲ್ಲಿ ಭೀಕರ ಅಪಘಾತ

ಈಶಾನ್ಯ ದೆಹಲಿಯಲ್ಲಿ ಭೀಕರ ಅಪಘಾತ

ನವದೆಹಲಿ- ಈಶಾನ್ಯ ದೆಹಲಿಯ ಸೋನಿಯಾ ವಿಹಾರ್ ಪ್ರದೇಶದಲ್ಲಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿಶು ಸೇರಿದಂತೆ ಮೂವರು ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ.

ಸೋನಿಯಾ ವಿಹಾರ್‌ನ ಪುಸ್ತಾ ಸಂಖ್ಯೆ 5ರ ಬಳಿ ಬೆಳಿಗ್ಗೆ 5.17ರ ಸುಮಾರಿಗೆ ಡಂಪರ್ ಟ್ರಕ್ ಆಟೋರಿಕ್ಷಾಗೆ ಡಿಕ್ಕಿ ಹೊಡೆದಿದೆ. ಅಪಘಾತದ ವೇಳೆ ಆಟೋರಿಕ್ಷಾದಲ್ಲಿ ಹಲವರು ಪ್ರಯಾಣಿಸುತ್ತಿದ್ದರು. ಡಿಕ್ಕಿಯ ರಭಸಕ್ಕೆ ಹಲವರು ಗಾಯಗೊಂಡಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇವೆ ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತದ ಬಳಿಕ ಗಾಯಾಳುಗಳನ್ನು ಸ್ಥಳೀಯರು ಹಾಗೂ ಪೊಲೀಸ್ ನಿಯಂತ್ರಣ ಕೊಠಡಿ ವಾಹನದ ಮೂಲಕ ಜಗ ಪ್ರವೇಶ ಚಂದ್ರ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಇಬ್ಬರು ಅಪರಿಚಿತ ಪುರುಷರು ಹಾಗೂ ಒಂದು ಹೆಣ್ಣು ಮಗು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಇದರಿಂದ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಯಗೊಂಡವರಲ್ಲಿ ರಾಜ್ (32) ಮತ್ತು ರಾಖಿ (30) ಗುರುತಿಸಲ್ಪಟ್ಟಿದ್ದು, ಇನ್ನೂ ಮೂವರು ಗಾಯಾಳುಗಳ ಗುರುತು ಪತ್ತೆಯಾಗಿಲ್ಲ. ಅಪಘಾತದಲ್ಲಿ ಮೂರು ವರ್ಷದ ಬಾಲಕಿಯೊಬ್ಬಳು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular