HomeKarnatakaಕೇಂದ್ರ ಸಚಿವರಿಗೆ ಕೃತಜ್ಞತೆ ಸಲ್ಲಿಸಿದ ಬಾಲಕಿಯ ಪೋಷಕರು

ಕೇಂದ್ರ ಸಚಿವರಿಗೆ ಕೃತಜ್ಞತೆ ಸಲ್ಲಿಸಿದ ಬಾಲಕಿಯ ಪೋಷಕರು

ಬೆಂಗಳೂರು-ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕಿಯೊಬ್ಬರಿಗೆ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ₹2.50 ಲಕ್ಷ ಮೌಲ್ಯದ ಆಕ್ಸಿಜನ್ ಕಾನ್ಸೆಂಟ್ರೇಟರ್ ಅನ್ನು ಕೊಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಮರಳವಾಡಿ ಹೋಬಳಿಯ ಸುಂಡಘಟ್ಟ ಗ್ರಾಮದ ರಾಜಲಕ್ಷ್ಮಿ ಚಂದ್ರು ಅವರ ಪುತ್ರಿಯಾದ 14 ವರ್ಷದ ಕುಮಾರಿ ನವ್ಯಶ್ರೀ ಅವರನ್ನು ಗುರುವಾರ ಬೆಳಗ್ಗೆ ಬೆಂಗಳೂರಿನ ಜೆಪಿ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡ ಸಚಿವರು; ಆ ಬಾಲಕಿಗೆ ಆಕ್ಸಿಜನ್ ಕಾನ್ಸೆಂಟ್ರೇಟರ್ ಅನ್ನು ಹಸ್ತಾಂತರಿಸಿದರು.

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಬಾಲಕಿಗೆ ಅತ್ಯುತ್ತಮ ಗುಣಮಟ್ಟದ ಆಕ್ಸಿಜನ್ ಕಾನ್ಸಂಟ್ರೇಟರ್ ಅನ್ನು ಬಳಸಬೇಕು ಎಂದು ವೈದ್ಯರು ಸಲಹೆ ಮಾಡಿದರು. ದುಬಾರಿಯಾದ ಈ ಉಪಕರಣವನ್ನು ಖರೀದಿಸಲು ಸಾಧ್ಯವಾಗದೆ ಬಾಲಕಿಯ ಪೋಷಕರು ಸಚಿವ ಕುಮಾರಸ್ವಾಮಿಯವರ ನೆರವನ್ನು ಕೇಳಿದ್ದರು.

ಕಳೆದ ಆಗಸ್ಟ್ 30ರಂದು ಜೆಪಿ ನಗರದ ನಿವಾಸದಲ್ಲಿ ಸಚಿವರನ್ನು ಭೇಟಿಯಾಗಿದ್ದ ಬಾಲಕಿಯ ಪೋಷಕರು ಈ ಬಗ್ಗೆ ತಮ್ಮ ಅಳಲನ್ನು ತೋಡಿಕೊಂಡಿದ್ದರು.

ತಮ್ಮ ಮಗಳು ಈಗ 9ನೇ ತರಗತಿಯನ್ನು ವ್ಯಾಸಂಗ ಮಾಡುತ್ತಿದ್ದಾಳೆ. ಪ್ರತಿಭಾವಂತೆಯಾದ ಆಕೆ ಅನಾರೋಗ್ಯಕ್ಕೆ ತುತ್ತಾಗಿದ್ದಾಳೆ. ಬಡವರಾದ ನಮಗೆ ಅಷ್ಟು ಹಣವನ್ನು ಖರ್ಚು ಮಾಡಿ ಆಕ್ಸಿಜನ್ ಕಾನ್ಸೆಂಟ್ರೇಟರ್ ಕೊಡಿಸಲು ಅಸಾಧ್ಯ. ತಾವು ನಮಗೆ ನೆರವಾಗಿ ಮಗುವಿನ ಜೀವ ರಕ್ಷಣೆ ಮಾಡಬೇಕು ಎಂದು ಕೋರಿದ್ದರು.

ಬಾಲಕಿಯ ಪೋಷಕರ ಮನವಿಗೆ ಓಗೊಟ್ಟ ಕೇಂದ್ರ ಸಚಿವರು; ತಕ್ಷಣವೇ ಮಗುವಿನ ಆರೋಗ್ಯಕ್ಕೆ ಸಂಬಂಧಿಸಿ ವೈದ್ಯರಿಂದ ಮಾಹಿತಿಯನ್ನು ಪಡೆದುಕೊಂಡರು. ತಮ್ಮ ಸ್ವಂತ ಖರ್ಚಿನಲ್ಲಿ ಬಾಲಕಿಗೆ ಅತ್ಯಗತ್ಯವಾಗಿ ಬೇಕಾಗಿದ್ದ ಇಗೋಜೆನ್ ರೋವ್ 6 ಪೋರ್ಟಬಲ್ ಆಕ್ಸಿಜನ್ ಕಾನ್ಸೆಂಟ್ರೇಟರ್ ಅನ್ನು ಖರೀದಿಸಿ ಆಕೆಯ ಪೋಷಕರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬಾಲಕಿಯ ಜೊತೆ ಕೆಲಕಾಲ ಮಾತನಾಡಿದ ಸಚಿವರು; ವೈದ್ಯರು ನೀಡುವ ಚಿಕಿತ್ಸೆಯನ್ನು ಚಾಚೂ ತಪ್ಪದಂತೆ ಪಡೆದುಕೊಳ್ಳಬೇಕು ಎಂದು ಸೂಚಿಸಿದರು. ಹಾಗೆ ಮಗುವಿನ ಆರೋಗ್ಯಕ್ಕೆ ಸಂಬಂಧಿಸಿದ ನಿರ್ಲಕ್ಷ ಮಾಡದೆ ಕಾಲಕಾಲಕ್ಕೆ ಸರಿಯಾದ ಚಿಕಿತ್ಸೆ ಕೊಡಿಸಿ, ಆ ಬಗ್ಗೆ ನನಗೆ ಮಾಹಿತಿ ನೀಡುತ್ತೀರಿ ಎಂದು ಕುಮಾರಸ್ವಾಮಿ ಅವರು ಪೋಷಕರಿಗೆ ತಿಳಿಸಿದರು.

ತನ್ನ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದ ಬಾಲಕಿ ವರ್ಷ, ನಿಮ್ಮ ಆಶೀರ್ವಾದದಿಂದ ನನ್ನ ಆರೋಗ್ಯ ಚೆನ್ನಾಗಿ ಆಗುತ್ತದೆ ಎಂದು ಬಾವುಕಳಾಗಿ ಹೇಳಿದರು. ಸಂದರ್ಭದಲ್ಲಿ ಸಚಿವರು ಕೂಡ ಭಾವೋದ್ವೇಗಕ್ಕೆ ಒಳಗಾದರು.

ಇದೇ ಸಂದರ್ಭದಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್ ಅನ್ನು ತಯಾರಿಸಿರುವ ಇಗೋಜಿನ್ ಕಂಪನಿಯ ತಂತ್ರಜ್ಞಾನ ಅವು ಉಪಕರಣವನ್ನು ಬಳಸುವ ಬಗ್ಗೆ ಬಾಲಕಿಯ ಪೋಷಕರಿಗೆ ಮಾಹಿತಿ ನೀಡಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular