ಕೊಪ್ಪಳ : ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಕುಷ್ಟಗಿ ವ್ಯಾಪ್ತಿಯಲ್ಲಿ ಸರ್ಕಾರದ ಮಾರ್ಗಸೂಚಿಯನ್ವಯ ಅಂಗನವಾಡಿ ಕಂ ಕ್ರಷ್ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಕುಷ್ಟಗಿ ವ್ಯಾಪ್ತಿಯ ತಾವರಗೇರಾ 10ನೇ ಕೇಂದ್ರ, ತಾವರಗೇರಾ 11ನೇ ಕೇಂದ್ರ, ಹಿರೇಮನ್ನಾಪೂರ 07ನೇ ಕೇಂದ್ರ, ಹನಮಸಾಗರ 2ನೇ ಕೇಂದ್ರ, ಕುಷ್ಟಗಿ 15ನೇ ಕೇಂದ್ರ, ಕುಷ್ಟಗಿ 1ನೇ ಕೇಂದ್ರ, ನೀರಲಕೊಪ್ಪ ಹಾಗೂ ದೋಟಿಹಾಳ 3ನೇ ಅಂಗನವಾಡಿ ಕಂ ಕ್ರಷ್ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗವಾಡಿ ಸಹಾಯಕಿಯ ತಲಾ ಒಂದೊಂದು ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ.
ಅರ್ಹ ಮಹಿಳಾ ಅಭ್ಯರ್ಥಿಗಳು ನವೆಂಬರ್ 04 ರಿಂದ ಡಿಸೆಂಬರ್ 03 ರವರೆಗೆ ಆಫ್ ಲೈನ್ ಮೂಲಕ ನಿಗದಿತ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ವಾರ್ಡ್ ನಂ 01, ಕೃಷ್ಣಗಿರಿ ಕಾಲೋನಿ, ಕುಷ್ಟಗಿ ಪಿನ್ಕೋಡ್ ನಂ: 583277 ವಿಳಾಸಕ್ಕೆ ಮೊಹರು ಮಾಡಲಾದ ಅರ್ಜಿ ಪೆಟ್ಟಿಗೆಯಲ್ಲಿ ಖುದ್ದಾಗಿ ಡಿಸೆಂಬರ್ 03 ರೊಳಗೆ ಕಚೇರಿ ಅವಧಿಯಲ್ಲಿ ಸಲ್ಲಿಸಬೇಕು.
ನೇಮಕಾತಿ ಮಾರ್ಗಸೂಚಿಗಳು, ನಿಬಂಧನೆಗಳು ಮುಂತದಾ ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯವನ್ನು ಸಂಪರ್ಕಿಸಬಹುದು. ಮೇಲಿನ ಅಧಿಸೂಚನೆಯನ್ನು ಮಾರ್ಪಾಡುಗೊಳಿಸುವ, ರದ್ದುಪಡಿಸುವ, ಮುಂದೂಡುವ ಅಧಿಕಾರವನ್ನು ಉಪನಿರ್ದೇಶಕರು ಹಾಗೂ ಅಧ್ಯಕ್ಷರು, ಜಿಲ್ಲಾ ಆಯ್ಕೆ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ ರವರು ಹೊಂದಿರುತ್ತಾರೆ ಎಂದು ಕುಷ್ಟಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಕನಕಗಿರಿ: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸರ್ಕಾರದ ಆದೇಶದನ್ವಯ ಹಾಗೂ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ ಇವರ ಅನುಮತಿ ಮೇರೆಗೆ ಕನಕಗಿರಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ 2026-27ನೇ ಸಾಲಿನಲ್ಲಿ ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ.
9 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 9 ಅಂಗನವಾಡಿ ಸಹಾಯಕಿಯರ ಗೌರವಧನ ಸೇವೆಯ ಹುದ್ದೆಗಳನ್ನು ಸರ್ಕಾರದ ಆಯ್ಕೆ ಮಾರ್ಗಸೂಚಿಯಂತೆ ಆಫ್ ಲೈನ್ ಮೂಲಕ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಭರ್ತಿ ಮಾಡಲಾಗುವುದು. ಅರ್ಜಿಗಳನ್ನು ನವೆಂಬರ್ 04 ರಿಂದ ಡಿಸೆಂಬರ್ 03 ರ ಸಂಜೆ 05.30 ಗಂಟೆಯೊಳಗೆ ಸಲ್ಲಿಸಬೇಕು. ನಿಗದಿತ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಾರ್ಯಾಲಯಕ್ಕೆ ಸಲ್ಲಿಸಬೇಕು ಎಂದು ಕನಕಗಿರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ.
ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ಕೊನೆಯ ದಿನಾಂಕವನ್ನು ನವೆಂಬರ್ 30ರ ಸಂಜೆ 5.30ರವರೆಗೆ ವಿಸ್ತರಿಸಲಾಗಿದೆ.
ಆಸಕ್ತ ಅರ್ಹ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಲದೆ, ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ ಜಿಲ್ಲೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕರನ್ನು ಸಂಪರ್ಕಿಸಬಹುದು.
ಹೆಚ್ಚಿನ ವಿವರಗಳಿಗಾಗಿ ಮೊಬೈಲ್ ಸಂಖ್ಯೆ 9972033371 ಗೆ ಸಂಪರ್ಕಿಸುವಂತೆ ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

