HomeKarnatakaಕೊಲೆಯಾಗಿದ್ದಾಳೆ ಎನ್ನಲಾದ ಮಹಿಳೆ ದಿಢೀರ್ ಪ್ರತ್ಯಕ್ಷ: ಪೊಲೀಸರ ಎಡವಟ್ಟಿಗೆ ಎರಡೂವರೆ ವರ್ಷ ಜೈಲು ಶಿಕ್ಷೆ ಅನುಭವಿಸಿದ...

ಕೊಲೆಯಾಗಿದ್ದಾಳೆ ಎನ್ನಲಾದ ಮಹಿಳೆ ದಿಢೀರ್ ಪ್ರತ್ಯಕ್ಷ: ಪೊಲೀಸರ ಎಡವಟ್ಟಿಗೆ ಎರಡೂವರೆ ವರ್ಷ ಜೈಲು ಶಿಕ್ಷೆ ಅನುಭವಿಸಿದ ನಿರಪರಾಧಿ

ಮಂಡ್ಯ: ಪೊಲೀಸರು ಮಾಡಿದ ತನಿಖಾ ಎಡವಟ್ಟಿನಿಂದಾಗಿ ನಿರಪರಾಧಿಯೊಬ್ಬರು ಕೊಲೆ ಆರೋಪದಲ್ಲಿ ಎರಡೂವರೆ ವರ್ಷ ಜೈಲು ಶಿಕ್ಷೆ ಅನುಭವಿಸಿರುವ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಈ ಘಟನೆ ನಡೆದಿದೆ. ಕೊಲೆಯಾಗಿದ್ದಾಅಳೆ ಎಂದು ಭಾವಿಸಿದ್ದ ಮಹಿಳೆ ದಿಢೀರ್ ಪ್ರತ್ಯಕ್ಷವಾಗಿದ್ದು, ಆಕೆ ನೀಡಿದ ಹೇಳಿಕೆ ಮೇರೆಗೆ ಶಿಕ್ಷೆ ಅನುಭವಿಸಿದ್ದ ವ್ಯಕ್ತಿ ನಿರಪರಾಧಿ ಎಂಬುದು ಬಯಲಾಗಿದೆ. ರಾಜೇಶ್ ಕೊಲೆ ಆರೋಪದಲ್ಲಿ ಜೈಲು ಶಿಕ್ಷೆ ಅನುಭವಿಸಿದ ನಿರಪರಾಧಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2019ರಲ್ಲಿ ಪಾಂಡವಪುರ ಪಟ್ಟಣದಿಂದ ಮಂಜು ಎಂಬ ಮಹಿಳೆ ನಾಪತ್ತೆಯಾಗಿದ್ದರು. ಈ ಸಂಬಂಧ ಆಕೆಯ ತಂದೆ ನಾಗರಾಜು ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ, ಮಂಜು ನಾಪತ್ತೆಯಾಗುವ ಮುನ್ನ ಪಾಂಡವಪುರ ಬಸ್ ನಿಲ್ದಾಣದಲ್ಲಿ ಆಕಸ್ಮಿಕವಾಗಿ ಸಿಕ್ಕಿದ್ದ ರಾಜೇಶ್ ಎಂಬಾತನ ಮೊಬೈಲ್‌ನಿಂದ ಕೊನೆಯ ಕರೆ ಮಾಡಿರುವುದು ತಿಳಿದುಬಂದಿತ್ತು. ಇದೇ ಸುಳಿವು ಆಧರಿಸಿ ಸುಮಾರು ಎರಡು ವರ್ಷಗಳ ಬಳಿಕ ಪಾಂಡವಪುರದ ರಾಗಿಮುದ್ದನಹಳ್ಳಿ ನಿವಾಸಿ ರಾಜೇಶ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿತ್ತು.

ಪ್ರಕರಣದ ತನಿಖೆ ವೇಳೆ ಪೊಲೀಸರು ರಾಜೇಶ್‌ಗೆ ಚಿತ್ರಹಿಂಸೆ ನೀಡಿ, ಬಲವಂತವಾಗಿ ತಪ್ಪೊಪ್ಪಿಗೆ ಹೇಳಿಕೆ ಪಡೆದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಬೂಟಿನಿಂದ ಒದ್ದು, ವಿದ್ಯುತ್ ಶಾಕ್ ನೀಡಿ, ಮನೆಯವರನ್ನೂ ಬಂಧಿಸುವುದಾಗಿ ಬೆದರಿಕೆ ಹಾಕಿದ್ದರಿಂದ ಭಯಗೊಂಡ ರಾಜೇಶ್ ತಾನು ಮಾಡದ ತಪ್ಪನ್ನು ಒಪ್ಪಿಕೊಂಡಿದ್ದ ಎನ್ನಲಾಗಿದೆ. ಅಂದಿನ ಪಾಂಡವಪುರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಭಾಕರ್ ಅವರ ತನಿಖಾ ವೈಖರಿಯ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ.

ಈ ಪ್ರಕರಣದಲ್ಲಿ 2021ರಿಂದ ಸುಮಾರು ಎರಡೂವರೆ ವರ್ಷ ಜೈಲಿನಲ್ಲಿದ್ದ ರಾಜೇಶ್, 2024ರ ಜನವರಿಯಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದೀಗ ಕೊಲೆಯಾಗಿದ್ದಳು ಎನ್ನಲಾಗಿ೮ದ್ದ ಮಹಿಳೆ ಮಂಜು ನಾಗಮಂಗಲ ಪಟ್ಟಣದಲ್ಲಿ ಪ್ರತ್ಯಕ್ಷವಾಗಿದ್ದಾರೆ.

ರಾಜೇಶ್ ಪರ ವಕೀಲ ನಟೇಶ್ ಅವರಿಗೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಮಹಿಳೆಯನ್ನು ಪತ್ತೆಹಚ್ಚಲಾಗಿದೆ. ಆಕೆಯನ್ನು ಬಿಂಡಿಗನವಿಲೆ ಪೊಲೀಸರ ವಶಕ್ಕೆ ಒಪ್ಪಿಸಿ ಹೇಳಿಕೆ ದಾಖಲಿಸಲಾಗಿದೆ.

ಇಷ್ಟವಿಲ್ಲದ ಮದುವೆ ಮಾಡಿಸಿದ್ದರಿಂದ ಮನೆ ಬಿಟ್ಟು ಹೋಗಿದ್ದೆ. ಇದೀಗ ಮತ್ತೊಬ್ಬ ವ್ಯಕ್ತಿಯನ್ನು ಮದುವೆಯಾಗಿ ಜೀವನ ನಡೆಸುತ್ತಿದ್ದೇನೆ. ರಾಜೇಶ್ ಎಂಬುವವರ ಪರಿಚಯವೇ ನನಗಿಲ್ಲ ಎಂದು ಮಂಜು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಮಹಿಳೆ ಜೀವಂತವಾಗಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ, ನಿರಪರಾಧಿಯೊಬ್ಬನನ್ನು ಕೊಲೆ ಆರೋಪದಲ್ಲಿ ಜೈಲಿಗೆ ಕಳುಹಿಸಿದ ಪ್ರಕರಣದ ತನಿಖೆ ಇದೀಗ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular