HomeKarnatakaಗೃಹಲಕ್ಷ್ಮಿ ಯೋಜನೆಯ 34ನೇ ಕಂತಿನ ಹಣ ಬಿಡುಗಡೆ: 35, 36ನೇ ಕಂತಿನ ಹಣವೂ ಖಾತೆಗೆ ಶೀಘ್ರದಲ್ಲೇ...

ಗೃಹಲಕ್ಷ್ಮಿ ಯೋಜನೆಯ 34ನೇ ಕಂತಿನ ಹಣ ಬಿಡುಗಡೆ: 35, 36ನೇ ಕಂತಿನ ಹಣವೂ ಖಾತೆಗೆ ಶೀಘ್ರದಲ್ಲೇ ಜಮಾ

ಕೊಪ್ಪಳ: ‘ಗೃಹಲಕ್ಷ್ಮಿ’ ಯೋಜನೆಯಡಿ ಕೊಪ್ಪಳ ಜಿಲ್ಲೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು 34ನೇ ಕಂತಿನ ಹಣ ಬಿಡುಗಡೆ ಮಾಡಿದ್ದು, ಜಿಲ್ಲೆಯ 3.14 ಲಕ್ಷ ಫಲಾನುಭವಿಗಳಿಗೆ ಒಟ್ಟು ರೂ 62.81 ಕೋಟಿ ಸಂದಾಯವಾಗಿದೆ ಎಂದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಅವರು ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ 2026ನೇ ಸಾಲಿನ ಆಗಸ್ಟ್ ತಿಂಗಳ 34ನೇ ಕಂತಿನ ರೂ. 2000 ಗಳನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿದೆ.‌ ಅದರಂತೆ ಕೊಪ್ಪಳ ಜಿಲ್ಲೆಯ ಒಟ್ಟು 3,14,057 ಅರ್ಹ ಮಹಿಳಾ ಫಲಾನುಭವಿಗಳಿಗೆ ಒಟ್ಟು ರೂ. 62 ಕೋಟಿ, 81 ಲಕ್ಷದ 14 ಸಾವಿರ ರೂಪಾಯಿ ಮೊತ್ತವವು ಡಿಬಿಟಿ ಮೂಲಕ ನೇರವಾಗಿ ಸಂದಾಯವಾಗಿದೆ ಎಂದರು.

ಗೃಹಲಕ್ಷ್ಮಿ ಯೋಜನೆ ಪ್ರಾರಂಭವಾದಾಗಿನಿಂದ 2026ರ ಆಗಸ್ಟ್ ಅಂತ್ಯದವರೆಗೆ ಜಿಲ್ಲೆಯಲ್ಲಿ ಒಟ್ಟಾರೆಯಾಗಿ ಸುಮಾರು ರೂ. 2030 ಕೋಟಿ ಅನುದಾನವನ್ನು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ‌. ಈ ಪ್ರಕ್ರಿಯೆಯಲ್ಲಿ ಯಾವುದೇ ಮಧ್ಯವರ್ತಿಗಳು ಅಥವಾ ಏಜೆಂಟರ ಹಾವಳಿಯಿಲ್ಲದೆ, ಅರ್ಹ ಫಲಾನುಭವಿಗಳಿಗೆ ಪಾರದರ್ಶಕವಾಗಿ ಸೌಲಭ್ಯ ದೊರೆಯುವಂತೆ ರಾಜ್ಯ ಸರ್ಕಾರ ಕ್ರಮ ವಹಿಸಿದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನುಳಿದ 35 ಮತ್ತು 36ನೇ ಕಂತಿನ ಹಣವನ್ನು ಸಹ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಅವರು ಹೇಳಿದ್ದಾರೆ.

ಕನಕಗಿರಿ: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೊಪ್ಪಳ: ಸರ್ಕಾರದ ಆದೇಶದನ್ವಯ ಹಾಗೂ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ ಇವರ ಅನುಮತಿ ಮೇರೆಗೆ ಕನಕಗಿರಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ 2026-27ನೇ ಸಾಲಿನಲ್ಲಿ ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ.

9 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 9 ಅಂಗನವಾಡಿ ಸಹಾಯಕಿಯರ ಗೌರವಧನ ಸೇವೆಯ ಹುದ್ದೆಗಳನ್ನು ಸರ್ಕಾರದ ಆಯ್ಕೆ ಮಾರ್ಗಸೂಚಿಯಂತೆ ಆಫ್ ಲೈನ್ ಮೂಲಕ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಭರ್ತಿ ಮಾಡಲಾಗುವುದು. ಅರ್ಜಿಗಳನ್ನು ನವೆಂಬರ್ 04 ರಿಂದ ಡಿಸೆಂಬರ್ 03 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು. ನಿಗದಿತ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಾರ್ಯಾಲಯಕ್ಕೆ ಸಲ್ಲಿಸಬೇಕು ಎಂದು ಕನಕಗಿರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುಷ್ಟಗಿ: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೊಪ್ಪಳ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಕುಷ್ಟಗಿ ವ್ಯಾಪ್ತಿಯಲ್ಲಿ ಸರ್ಕಾರದ ಮಾರ್ಗಸೂಚಿಯನ್ವಯ ಅಂಗನವಾಡಿ ಕಂ ಕ್ರಷ್ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಕುಷ್ಟಗಿ ವ್ಯಾಪ್ತಿಯ ತಾವರಗೇರಾ 10ನೇ ಕೇಂದ್ರ, ತಾವರಗೇರಾ 11ನೇ ಕೇಂದ್ರ, ಹಿರೇಮನ್ನಾಪೂರ 07ನೇ ಕೇಂದ್ರ, ಹನಮಸಾಗರ 2ನೇ ಕೇಂದ್ರ, ಕುಷ್ಟಗಿ 15ನೇ ಕೇಂದ್ರ, ಕುಷ್ಟಗಿ 1ನೇ ಕೇಂದ್ರ, ನೀರಲಕೊಪ್ಪ ಹಾಗೂ ದೋಟಿಹಾಳ 3ನೇ ಅಂಗನವಾಡಿ ಕಂ ಕ್ರಷ್ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗವಾಡಿ ಸಹಾಯಕಿಯ ತಲಾ ಒಂದೊAದು ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ.

ಅರ್ಹ ಮಹಿಳಾ ಅಭ್ಯರ್ಥಿಗಳು ನವೆಂಬರ್ 04 ರಿಂದ ಡಿಸೆಂಬರ್ 03 ರವರೆಗೆ ಆಫ್ ಲೈನ್ ಮೂಲಕ ನಿಗದಿತ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ವಾರ್ಡ್ ನಂ 01, ಕೃಷ್ಣಗಿರಿ ಕಾಲೋನಿ, ಕುಷ್ಟಗಿ ಪಿನ್‌ಕೋಡ್ ನಂ: 583277 ವಿಳಾಸಕ್ಕೆ ಮೊಹರು ಮಾಡಲಾದ ಅರ್ಜಿ ಪೆಟ್ಟಿಗೆಯಲ್ಲಿ ಖುದ್ದಾಗಿ ಡಿಸೆಂಬರ್ 03 ರೊಳಗೆ ಕಚೇರಿ ಅವಧಿಯಲ್ಲಿ ಸಲ್ಲಿಸಬೇಕು.

ನೇಮಕಾತಿ ಮಾರ್ಗಸೂಚಿಗಳು, ನಿಬಂಧನೆಗಳು ಮುಂತದಾ ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯವನ್ನು ಸಂಪರ್ಕಿಸಬಹುದು. ಮೇಲಿನ ಅಧಿಸೂಚನೆಯನ್ನು ಮಾರ್ಪಾಡುಗೊಳಿಸುವ, ರದ್ದುಪಡಿಸುವ, ಮುಂದೂಡುವ ಅಧಿಕಾರವನ್ನು ಉಪನಿರ್ದೇಶಕರು ಹಾಗೂ ಅಧ್ಯಕ್ಷರು, ಜಿಲ್ಲಾ ಆಯ್ಕೆ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ ರವರು ಹೊಂದಿರುತ್ತಾರೆ ಎಂದು ಕುಷ್ಟಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕೊಪ್ಪಳ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಿಗೆ ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ.

ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ಕೊನೆಯ ದಿನಾಂಕವನ್ನು ನವೆಂಬರ್ 30ರ ಸಂಜೆ 5.30ರವರೆಗೆ ವಿಸ್ತರಿಸಲಾಗಿದೆ.

ಆಸಕ್ತ ಅರ್ಹ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಲದೆ, ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ ಜಿಲ್ಲೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕರನ್ನು ಸಂಪರ್ಕಿಸಬಹುದು.

ಹೆಚ್ಚಿನ ವಿವರಗಳಿಗಾಗಿ ಮೊಬೈಲ್ ಸಂಖ್ಯೆ 9972033371 ಗೆ ಸಂಪರ್ಕಿಸುವಂತೆ ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular