HomeIndiaರಸಗುಲ್ಲಾ ಎಂದು ಬಾಯಿಗೆ ಇಡುತ್ತಿದ್ದಂತೆ ಭೀಕರ ಸ್ಫೋಟ: ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ರಸಗುಲ್ಲಾ ಎಂದು ಬಾಯಿಗೆ ಇಡುತ್ತಿದ್ದಂತೆ ಭೀಕರ ಸ್ಫೋಟ: ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ಭೋಪಾಲ್: ವ್ಯಕ್ತಿಯೋರ್ವರು ರಸಗುಲ್ಲಾ ಎಂದು ತಂದುಕೊಟ್ಟ ಸ್ವೀಟನ್ನು ಬಾಯಿಗೆ ಹಾಕಿಕೊಳ್ಳುತ್ತಿದ್ದಂತೆ ಭೀಕರ ಸ್ಫೋಟ ಸಂಭವಿಸಿದ್ದು, ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮಧ್ಯಪ್ರದೇಶದ ದಿಂಡೋರಿಯಲ್ಲಿರುವ ಪದಾರಿಯಾ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಸಗುಲ್ಲಾ ಎಂದು ಬಾಯಿಗೆ ಹಾಕುತ್ತಿದ್ದಮ್ತೆ ಅದು ಸ್ಫೋಟಗೊಂಡಿದೆ. ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತ ವ್ಯಕ್ತಿಯನ್ನು ರಾಜೇಂದ್ರ ಬರೋಟಿಯಾ ಎಂದು ಗುರುತಿಸಲಾಗಿದೆ. ಅವರು ತಮ್ಮ ಮನೆಯಲ್ಲಿದ್ದಾಗ ರಾಮ್ ಭಗತ್ ಬರೋಟಿಯಾ ಎಂಬಾತ ಅಲ್ಲಿಗೆ ಬಂದಿದ್ದಾನೆ. ಆತನ ಕೈಯಲ್ಲಿದ್ದ ಬಿಳಿ ಬಣ್ಣದ ದುಂಡನೆಯ ವಸ್ತುವನ್ನು ರಾಜೇಂದ್ರ ಅವರಿಗೆ ನೀಡಿ, ಅದು ರಸಗುಲ್ಲಾ ಎಂದು ಹೇಳಿದ್ದಾನೆ.

ಸಿಹಿತಿಂಡಿ ರಸಗುಲ್ಲಾ ಎಂದು ಭಾವಿಸಿ ಆತ ಬಾಯಿಗೆ ಹಾಕಿಕೊಂಡು ಕಚ್ ಚಿದ್ದಾನೆ ಅಷ್ಟೇ. ಬಾಯೊಳಗೇ ರಸಗುಲ್ಲ ಸ್ಫೋಟಗೊಂಡಿದೆ. ಸ್ಥಳದಲ್ಲೇ ರಾಜೇಂದ್ರ ಸಾವನ್ನಪ್ಪಿದ್ದಾರೆ.

ರಾಜೇಂದ್ರ ಬಾಯಿಗೆ ಹಾಕಿಕೊಂಡ ವಸ್ತು ರಸಗುಲ್ಲಾ ಆಗಿರಲಿಲ್ಲ. ಬದಲಾಗಿ ಅದು ಸ್ಫೋಟಕವಾಗಿತ್ತು. ದೇಶೀಯವಾಗಿ ತಯಾರಿಸಿದ ಸ್ಫೋಟಕ. ಬಾಯಿಗೆ ಹಾಕಿಕೊಂಡ ಕೆಲವೇ ಕ್ಷಣಗಳಲ್ಲಿ ಅದು ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ರಾಜೇಂದ್ರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಸ್ಫೋಟದ ಶಬ್ದ ಕೇಳಿದ ತಕ್ಷಣ ರಾಜೇಂದ್ರ ಅವರ ಪತ್ನಿ ಸುಶೀಲಾ ಬಾಯಿ ಕೋಣೆಯಿಂದ ಹೊರಗೆ ಬಂದು ನೋಡಿದ್ದಾರೆ. ಪತಿ ಗಾಯಗೊಂಡು ಬಿದ್ದಿರುವುದನ್ನು ಕಂಡು ನೆರೆಹೊರೆಯವರ ಸಹಾಯದಿಂದ ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದ್ದಾರೆ. ಅಷ್ಟರಲ್ಲೇ ಅವರು ಮೃತಪಟ್ಟಿದ್ದರು.

ಘಟನೆಯ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ. ಈ ಸಂಬಂಧ ರಾಮ್ ಭಗತ್ ಬರೋಟಿಯಾ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ ರಾಮ್ ಭಗತ್, ತನಗೆ ಒಬ್ಬ ಹುಡುಗ ಬಾಂಬ್ ನೀಡಿದ್ದ ಎಂದು ಹೇಳಿದ್ದಾನೆ. ಆ ಹುಡುಗನನ್ನೂ ಪೊಲೀಸರು ಬಂಧಿಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಬಾಂಬ್‌ಗಳನ್ನು ಪ್ರಾಣಿಗಳನ್ನು ಕೊಲ್ಲಲು ಬಳಸಲಾಗುತ್ತಿತ್ತು ಎನ್ನಲಾಗಿದೆ. ಆರೋಪಿಗಳು ಉದ್ದೇಶಪೂರ್ವಕವಾಗಿ ರಾಜೇಂದ್ರ ಅವರಿಗೆ ಬಾಂಬ್ ನೀಡಿದ್ದರೇ ಅಥವಾ ಇದರ ಹಿಂದೆ ಬೇರೆ ಕಾರಣವಿದೆಯೇ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular