HomeKarnatakaBREAKING : ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ ; ಸ್ವಾಗತ ಕೋರಿದ ರಾಜ್ಯಪಾಲೆ ಸುಧಾ ಯಾದವ್...

BREAKING : ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ ; ಸ್ವಾಗತ ಕೋರಿದ ರಾಜ್ಯಪಾಲೆ ಸುಧಾ ಯಾದವ್ , ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ( ನ.13) ಬೆಂಗಳೂರಿಗೆ ಆಗಮಿಸಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಆಗಮಿಸಿದ ಪ್ರಧಾನಿ ಮೋದಿ, ಹೆಚ್‌ಎಎಲ್ (HAL) ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲೆ ಸುಧಾ ಯಾದವ್ ಹಾಗೂ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಪ್ರಧಾನಿ ಮೋದಿ ಅವರ ಆಗಮನದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಸುತ್ತಮುತ್ತ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗ್ಗೆ 10.45ಕ್ಕೆ ಪ್ರಶಾಂತಿ ಕುಟೀರದ ಹೆಲಿಪ್ಯಾಡ್‌ಗೆ ಆಗಮಿಸಲಿದ್ದು, ಬಳಿಕ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಅವರು, ಮಧ್ಯಾಹ್ನ 12.10ರ ಸುಮಾರಿಗೆ ಅಲ್ಲಿಂದ ನಿರ್ಗಮಿಸಲಿದ್ದಾರೆ.

500 ಮಂದಿಗೆ ಮಾತ್ರ ಪ್ರವೇಶ

ಪ್ರಧಾನಿ ಮೋದಿ ಭಾಗವಹಿಸುವ ಕಾರ್ಯಕ್ರಮಕ್ಕೆ ಈಗಾಗಲೇ ಆಹ್ವಾನಿತರಿಗೆ ಪಾಸ್‌ಗಳನ್ನು ವಿತರಿಸಲಾಗಿದೆ. ಪಾಸ್ ಹೊಂದಿರುವವರಿಗೆ ಮಾತ್ರ ಕಾರ್ಯಕ್ರಮದ ಸ್ಥಳಕ್ಕೆ ಪ್ರವೇಶ ನೀಡಲಾಗುತ್ತದೆ. ಪ್ರಶಾಂತಿ ಕುಟೀರದ ಆವರಣದಲ್ಲಿ ಸುಮಾರು 500 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ವೀಕ್ಷಿಸಲು ಅನುಕೂಲವಾಗುವಂತೆ ಹೊರಭಾಗದಲ್ಲಿ ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗಿದೆ. ಭದ್ರತಾ ಕಾರಣಗಳಿಂದ ಮಾಧ್ಯಮಗಳಿಗೂ ಕಾರ್ಯಕ್ರಮದ ಸ್ಥಳಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.

ಇಂದು ಪಿಂಕ್ ಲೈನ್ ಮೆಟ್ರೋಗೆ ಪ್ರಧಾನಿ ಮೋದಿ ಚಾಲನೆ

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 13ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಬೆಂಗಳೂರಿನ ಪಿಂಕ್ ಲೈನ್ ಮೆಟ್ರೋ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಪಿಂಕ್ ಲೈನ್ ಮೆಟ್ರೋ ಯೋಜನೆಯನ್ನು ಸುಮಾರು ₹3,470 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಪ್ರಧಾನಿ ಮೋದಿ ಅವರು ಹೊಸ ಮೆಟ್ರೋ ಮಾರ್ಗಕ್ಕೆ ಚಾಲನೆ ನೀಡಿದ ಬಳಿಕ ತಾವರೆಕೆರೆಯಿಂದ ಐಐಎಂಬಿ ಮೆಟ್ರೋ ನಿಲ್ದಾಣದವರೆಗೆ ಪ್ರಯಾಣಿಸಲಿದ್ದಾರೆ.

ಇದರ ಜೊತೆಗೆ ವಂದೇ ಭಾರತ್ ರೈಲಿಗೆ ಚಾಲನೆ, ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಅಭಿವೃದ್ಧಿಪಡಿಸಲಾದ ನಾಲ್ಕು ರೈಲು ನಿಲ್ದಾಣಗಳ ಉದ್ಘಾಟನೆ ಹಾಗೂ ಬೆಂಗಳೂರಿನಲ್ಲಿ ₹15,600 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಚಾಲನೆ ನೀಡಲಿದ್ದಾರೆ.

ಮೆಟ್ರೋ ಅನುದಾನದ ವಿಚಾರವಾಗಿ ತೇಜಸ್ವಿ ಸೂರ್ಯ ಹೇಳಿದ್ದೇನು?

ಇನ್ನೊಂದೆಡೆ, ನಮ್ಮ ಮೆಟ್ರೋ ಯೋಜನೆಗಳಿಗೆ ಕೇಂದ್ರ ಸರ್ಕಾರ ನೀಡುತ್ತಿರುವ ಅನುದಾನದ ಕುರಿತು ರಾಜ್ಯ ಸರ್ಕಾರದ ಹೇಳಿಕೆಯನ್ನು ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಪ್ರಶ್ನಿಸಿದ್ದಾರೆ.

ಮೆಟ್ರೋ ಯೋಜನೆಗಳ ಒಟ್ಟು ಅನುಮೋದಿತ ವೆಚ್ಚದಲ್ಲಿ ಕೇಂದ್ರ ಸರ್ಕಾರದ ಪಾಲು ಶೇ.53.35ರಷ್ಟಿದ್ದರೆ, ಕರ್ನಾಟಕ ಸರ್ಕಾರದ ಪಾಲು ಶೇ.46.65ರಷ್ಟಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular