HomeKarnatakaBREAKING : ಬೆಂಗಳೂರಿನಲ್ಲಿ ಉದ್ಯಮಿಯ ಬರ್ಬರ ಹತ್ಯೆ ; ‘ದಯವಿಟ್ಟು ಆಸ್ಪತ್ರೆಗೆ ಕರೆದೊಯ್ಯಿರಿ’ ಎಂದು ಗೋಗರೆದ...

BREAKING : ಬೆಂಗಳೂರಿನಲ್ಲಿ ಉದ್ಯಮಿಯ ಬರ್ಬರ ಹತ್ಯೆ ; ‘ದಯವಿಟ್ಟು ಆಸ್ಪತ್ರೆಗೆ ಕರೆದೊಯ್ಯಿರಿ’ ಎಂದು ಗೋಗರೆದ ಪತ್ನಿ

ಬೆಂಗಳೂರು:  ಬೆಂಗಳೂರಿನಲ್ಲಿ ಹಾಡಹಗಲೇ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆತಂಕ ಮೂಡಿಸಿದೆ. ಪತ್ನಿಯ ಕಣ್ಣೆದುರೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಉದ್ಯಮಿಯ ಪ್ರಾಣ ತೆಗೆದಿದ್ದಾರೆ. ಪತಿ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದಾಗ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡುವಂತೆ ಪತ್ನಿ ಅಂಗಲಾಚಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಉದ್ಯಮಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಧನಿ ಪ್ರಾಪರ್ಟಿಸ್ ಮಾಲೀಕ ಚರಣ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ಘಟನೆ ನಡೆದಿದೆ.

ಕಚೇರಿಗೆ ಬರುತ್ತಿದ್ದಾಗ ದಾಳಿ

ಚರಣ್ ಅವರು ಯಲಹಂಕ ನ್ಯೂ ಟೌನ್‌ನಲ್ಲಿರುವ ತಮ್ಮ ರಿಯಲ್ ಎಸ್ಟೇಟ್ ಕಚೇರಿಗೆ ಪತ್ನಿಯೊಂದಿಗೆ ಆಗಮಿಸುತ್ತಿದ್ದರು. ಕೋಗಿಲು ನಿವಾಸದಿಂದ ಪತ್ನಿಯೊಂದಿಗೆ ಕಚೇರಿಗೆ ಬರುತ್ತಿದ್ದ ವೇಳೆ ದುಷ್ಕರ್ಮಿಗಳು ಏಕಾಏಕಿ ಅವರ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಬಂದ ದುಷ್ಕರ್ಮಿಗಳು ಚರಣ್ ಅವರನ್ನು ಅಟ್ಟಾಡಿಸಿ ಮನಬಂದಂತೆ ಕೊಚ್ಚಿದ್ದಾರೆ. ತೀವ್ರವಾಗಿ ಗಾಯಗೊಂಡ ಚರಣ್ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿದ್ದಾರೆ.

ಪತಿ ಉಳಿಸಿಕೊಳ್ಳಲು ಪತ್ನಿಯ ಅಂಗಲಾಚಾಟ!

ಪತಿಯ ಮೇಲಿನ ದಾಳಿಯನ್ನು ಕಣ್ಣಾರೆ ಕಂಡ ಪತ್ನಿ ಆಘಾತಕ್ಕೊಳಗಾಗಿದ್ದಾರೆ. ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಪತಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡುವಂತೆ ಸ್ಥಳದಲ್ಲಿದ್ದವರ ಬಳಿ ಗೋಗರೆದಿದ್ದಾರೆ. ಆದರೆ, ತೀವ್ರ ರಕ್ತಸ್ರಾವದಿಂದಾಗಿ ಚರಣ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಪೊಲೀಸರಿಂದ ತನಿಖೆ

ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆಗೆ ನಿಖರ ಕಾರಣವೇನು? ದುಷ್ಕರ್ಮಿಗಳು ಯಾರು? ವೈಯಕ್ತಿಕ ದ್ವೇಷ ಅಥವಾ ರಿಯಲ್ ಎಸ್ಟೇಟ್ ವ್ಯವಹಾರದ ವಿಚಾರವಾಗಿ ಕೊಲೆ ನಡೆದಿದೆಯೇ? ಎಂಬ ಆಯಾಮಗಳಲ್ಲಿ ತನಿಖೆ ನಡೆಸಬೇಕಿದೆ.

 ಸೂಚನೆ / Disclaimer: ಈ ಸುದ್ದಿಯು ಲಭ್ಯವಿರುವ ಪ್ರಾಥಮಿಕ ಮಾಹಿತಿ ಹಾಗೂ ವರದಿಗಳ ಆಧಾರದ ಮೇಲೆ ಪ್ರಕಟಿಸಲಾಗಿದೆ. ಘಟನೆಗೆ ಸಂಬಂಧಿಸಿದ ಆರೋಪಿಗಳು, ಹತ್ಯೆಯ ಹಿಂದಿನ ಉದ್ದೇಶ ಮತ್ತು ಇತರ ವಿವರಗಳ ಕುರಿತು ಪೊಲೀಸ್ ತನಿಖೆ ಮುಂದುವರಿದಿರಬಹುದು. ಅಧಿಕೃತ ಪೊಲೀಸ್ ಮಾಹಿತಿ ಹಾಗೂ ತನಿಖೆಯ ಅಂತಿಮ ವರದಿಯ ಆಧಾರದ ಮೇಲೆ ಹೆಚ್ಚಿನ ವಿವರಗಳು ಬದಲಾಗುವ ಸಾಧ್ಯತೆಯಿದೆ. ಯಾರ ಮೇಲೂ ಆರೋಪ ಸಾಬೀತಾಗುವವರೆಗೆ ಅವರನ್ನು ಅಪರಾಧಿ ಎಂದು ಪರಿಗಣಿಸಬಾರದು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular